ಬುಧವಾರ, 18 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಉನ್ನತ ಶಿಕ್ಷಣದಲ್ಲಿ ಭಾಷೆಗಳಿಗೂ ಪ್ರಾಮುಖ್ಯತೆ ನೀಡಿ: ಸಾಹಿತಿ ಮಾಧವಿ ಎಸ್. ಭಂಡಾರಿ

Published : 16 ಸೆಪ್ಟೆಂಬರ್ 2024, 14:10 IST
Last Updated : 16 ಸೆಪ್ಟೆಂಬರ್ 2024, 14:10 IST
ಫಾಲೋ ಮಾಡಿ
Comments

ಹೆಬ್ರಿ: ಉನ್ನತ ಶಿಕ್ಷಣದಲ್ಲಿ ಐಚ್ಛಿಕ ವಿಷಯಗಳ ಜೊತೆಗೆ ಭಾಷಾ ವಿಷಯಗಳಿಗೂ ಒತ್ತು ನೀಡುವುದು ಭಾಷೆ ಬೆಳವಣಿಗೆಗೆ ಸಹಕಾರಿ. ಪುಸ್ತಕ ಓದುವ ಹವ್ಯಾಸದಿಂದ ಜ್ಞಾನ ವೃದ್ಧಿಯಾಗುತ್ತದೆ. ಹಿಂದಿ ಸಹಿತ ಸಂವಿಧಾನದಲ್ಲಿ ಮಾನ್ಯತೆ ಪಡೆದ ಎಲ್ಲಾ ಭಾಷೆಗಳೂ ರಾಷ್ಟ್ರ ಭಾಷೆಗಳೇ ಎಂದು ನಿವೃತ್ತ ಪ್ರಾಂಶುಪಾಲೆ, ಸಾಹಿತಿ ಮಾಧವಿ ಎಸ್. ಭಂಡಾರಿ ಹೇಳಿದರು.

ಅವರು ಇಲ್ಲಿನ ಎಸ್.ಆರ್.‌ ಸಮೂಹ ಶಿಕ್ಷಣ ಸಂಸ್ಥೆಯಲ್ಲಿ ನಡೆದ ಹಿಂದಿ ದಿನಾಚರಣೆ ಉದ್ಘಾಟಿಸಿ ಮಾತನಾಡಿದರು.

ದ್ವಿತೀಯ ಪಿಯುಸಿ, ಎಸ್ಎಸ್ಎಲ್‌ಸಿ ವಾರ್ಷಿಕ ಪರೀಕ್ಷೆಯಲ್ಲಿ ಹಿಂದಿಯಲ್ಲಿ ಶೇ 100 ಅಂಕ ಪಡೆದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು. ಎಸ್.ಆರ್. ಪಿಯು ಕಾಲೇಜು ಪ್ರಾಂಶುಪಾಲ ಪ್ರಶಾಂತ್, ಪಬ್ಲಿಕ್ ಸ್ಕೂಲ್ ಪ್ರಾಂಶುಪಾಲೆ ಭಗವತಿ, ಆಂಗ್ಲಮಾಧ್ಯಮ ಶಾಲೆ ಮುಖ್ಯ ಶಿಕ್ಷಕ ಗೋಪಾಲ್ ಆಚಾರ್ಯ ಇದ್ದರು. ಹಿಂದಿ ಉಪನ್ಯಾಸಕಿ, ಕಾರ್ಯಕ್ರಮ ಸಂಯೋಜಕಿ ವನಿತಾ ತೋಳಾರ್ ಸ್ವಾಗತಿಸಿದರು. ವಿದ್ಯಾರ್ಥಿಗಳಾದ ಸೃಷ್ಟಿ ಶೆಟ್ಟಿ ನಿರೂಪಿಸಿದರು. ಪೃಥ್ವಿ ವಂದಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT