ಕಾಪು (ಪಡುಬಿದ್ರಿ): ಪುನರ್ ಪ್ರತಿಷ್ಠಾ ಬ್ರಹ್ಮಕಲಶೋತ್ಸವ ಜರಗಲಿರುವ ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನ ಹಾಗೂ ಉಚ್ಚಿಲ ಶ್ರೀ ಮಹಾಲಕ್ಷ್ಮಿ ದೇವಸ್ಥಾನಗಳಿಗೆ ಹೈಕೋರ್ಟ್ ನ್ಯಾಯಮೂರ್ತಿ ಸವಣೂರು ವಿಶ್ವಜಿತ್ ಶೆಟ್ಟಿ ಸೋಮವಾರ ಭೇಟಿ ನೀಡಿದರು.

ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನದಲ್ಲಿ ದರ್ಶನ ಪಡೆದು ನೂತನ ದೇಗುಲದ ನಿರ್ಮಾಣ ಕಾಮಗಾರಿಯನ್ನು ವೀಕ್ಷಿಸಿದ ಅವರನ್ನು ದೇವಸ್ಥಾನದ ಪ್ರಧಾನ ಅರ್ಚಕ ಶ್ರೀನಿವಾಸ ತಂತ್ರಿ ಕಲ್ಯಾ ಅವರು ಪ್ರಸಾದ ನೀಡಿ ಹರಸಿದರು.

ಅಭಿವೃದ್ಧಿ ಸಮಿತಿಯಿಂದ ಶಾಲು ಹೊದಿಸಿ ಗೌರವಿಸಲಾಯಿತು. ನೂತನ ದೇಗುಲದ ಕಾಮಗಾರಿಯನ್ನು ವೀಕ್ಷಿಸಿದ ನ್ಯಾಯಮೂರ್ತಿಗೆ ಅಭಿವೃದ್ಧಿ ಪ್ರಚಾರ ಸಮಿತಿಯ ಪ್ರಧಾನ ಸಂಚಾಲಕ ಯೋಗೀಶ್ ವಿ. ಶೆಟ್ಟಿ ಅಭಿವೃದ್ಧಿ ಕಾರ್ಯಗಳ ಮಾಹಿತಿ ನೀಡಿ ಬ್ರಹ್ಮಕಲಶೋತ್ಸವ ಸಮಾರಂಭದಲ್ಲಿ ಭಾಗವಹಿಸುವಂತೆ ಆಹ್ವಾನವಿತ್ತರು.

ಸಮಿತಿಯ ಪ್ರಧಾನ ಕಾರ್ಯದರ್ಶಿ ರಮೇಶ್ ಹೆಗ್ಡೆ ಕಲ್ಯಾ, ಉಪಾಧ್ಯಕ್ಷ ಮನೋಹರ್ ಎಸ್. ಶೆಟ್ಟಿ, ಸುಧಾಕರ ಶೆಟ್ಟಿ ಮಕರ, ಉಡುಪಿಯ ವಕೀಲ ಉಮೇಶ್ ಶೆಟ್ಟಿ ಕಳತ್ತೂರು, ಪ್ರಮುಖರಾದ ಮೋಹನ್ ಬಂಗೇರ, ಸಂತೋಷ್ ಶೆಟ್ಟಿ ತೆಂಕರಗುತ್ತು, ಅರುಣ್ ಶೆಟ್ಟಿ ಪಾದೂರು, ಶೋಭಿತ್ ಶೆಟ್ಟಿ, ಮಧುಕರ್ ಎಸ್., ಉದಯ ಭಾರ್ಗವ, ಸಂತೋಷ್ ಶೆಟ್ಟಿ ಕಾಪು, ಜಯಕರ ಶೆಟ್ಟಿಗಾರ್, ಶಿವಣ್ಣ ಎಸ್.ಅಂಚನ್, ಸಂದೀಪ್ ಕುಮಾರ್, ಸೋಮನಾಥ್ ಸಾಲ್ಯಾನ್ ಇದ್ದರು.

ಉಚ್ಚಿಲ ಶ್ರೀ ಮಹಾಲಕ್ಷ್ಮಿ ದೇವಸ್ಥಾನಕ್ಕೆ ನ್ಯಾಯಮೂರ್ತಿಯನ್ನು ಪೂರ್ಣ ಕುಂಭದೊಂದಿಗೆ ಬರಮಾಡಿಕೊಳ್ಳಲಾಯಿತು. ಮೊಗವೀರ ಮುಂದಾಳು ಜಿ. ಶಂಕರ್ ಶಾಲು ಹೊದಿಸಿ, ಸ್ಮರಣಿಕೆ ನೀಡಿ ಗೌರವಿಸಿದರು.

ಕ್ಷೇತ್ರ ಅಧ್ಯಕ್ಷರಾದ ಗಿರಿಧರ್ ಸುವರ್ಣ, ಮನೋಹರ್ ಶೆಟ್ಟಿ, ಸಂತೋಷ್ ಶೆಟ್ಟಿ ತೆಂಕರಗುತ್ತು, ಯೋಗೀಶ್ ಶೆಟ್ಟಿ ಕಾಪು, ಶೋಭಿತ್ ಶೆಟ್ಟಿ, ಉಮೇಶ್ ಶೆಟ್ಟಿ, ಮೋಹನ್ ಬಂಗೇರ ಕಾಪು, ದಿನೇಶ್ ಎರ್ಮಾಳ್, ಪ್ರಧಾನ ಅರ್ಚಕ ರಾಘವೇಂದ್ರ ಉಪಾಧ್ಯಾಯ, ರಾಘವೇಂದ್ರ ಸುವರ್ಣ ಬೈಕಾಡಿ ಮೊದಲಾದವರು ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.