ಹಿರಿಯಡ್ಕ: ಹಿರಿಯಡ್ಕ– ಕುಕ್ಕೆಹಳ್ಳಿ ಮಾರ್ಗದಲ್ಲಿರುವ ಸುವರ್ಣಾ ನದಿಗೆ ಕಟ್ಟಿರುವ ಬಜೆ ಡ್ಯಾಂ ಬಳಿ ಬೃಹತ್ ಶಿಲಾಯುಗಕ್ಕೆ ಸಂಬಂಧಿಸಿದ ನಿಲಿಸುಗಲ್ಲನ್ನು ಮಣಿಪಾಲದ ಪತ್ರಿಕಾ ಸಂಸ್ಥೆಯ ಉದ್ಯೋಗಿ ಗಣೇಶ್ ನಾಯ್ಕ್ ಚೇರ್ಕಾಡಿ, ನಿಡ್ಲೆ ಸರ್ಕಾರಿ ಪ್ರೌಢಶಾಲೆಯ ಹಿಂದಿ ಶಿಕ್ಷಕ ಗೀತೇಶ್ ಪತ್ತೆ ಮಾಡಿದ್ದಾರೆ.

ಭೂ ಮೇಲ್ಮೈಯಿಂದ ಸುಮಾರು 6 ಅಡಿ ಎತ್ತರಯಿರುವ ಈ ಕಲ್ಲನ್ನು ಸ್ಥಳೀಯರು ‘ಗಡಿಕಲ್ಲು’ ಎಂದು ಕರೆಯುತ್ತಾರೆ. ಈ ನಿಲಿಸುಗಲ್ಲು ಸುಮಾರು 2 ಸಾವಿರ ವರ್ಷಗಳಷ್ಟು ಪ್ರಾಚೀನವೆಂದು ಅಂದಾಜಿಸಬಹುದು ಎಂದು ಶ್ರೀನಿಕೇತನ ವಸ್ತು ಸಂಗ್ರಹಾಲಯ ಮತ್ತು ಕೆಳದಿ ರಾಣಿ ಚೆನ್ನಮ್ಮಾಜಿ ಅಧ್ಯಯನ ಪೀಠ, ಕುಕ್ಕೆಸುಬ್ರಹ್ಮಣ್ಯ ಇಲ್ಲಿನ ಉಪ ನಿರ್ದೇಶಕ ಶ್ರುತೇಶ್ ಆಚಾರ್ಯ ಮೂಡುಬೆಳ್ಳೆ ತಿಳಿಸಿದ್ದಾರೆ.

ಇಲ್ಲಿ ಈ ಮೊದಲು ಕ್ಷೇತ್ರಕಾರ್ಯ ಕೈಗೊಂಡಿರುವ ಯು. ಕಮಲಾಬಾಯಿ ಪ್ರೌಢಶಾಲೆಯ ನಿವೃತ್ತ ಶಿಕ್ಷಕ ಕೆ. ಶ್ರೀಧರ್ ಭಟ್ ಅವರು ಬೃಹತ್ ಶಿಲಾಯುಗಕ್ಕೆ ಸೇರಿದ ಅನೇಕ ಗುಹಾ ಸಮಾಧಿಗಳನ್ನು, ಸೂಕ್ಷ್ಮ ಶಿಲಾಯುಗ, ನೂತನ ಶಿಲಾಯುಗದ ಅವಶೇಷಗಳನ್ನು ಪತ್ತೆ ಮಾಡಿದ್ದರು. ಪ್ರಸ್ತುತ ರಸ್ತೆ ಅಗಲೀಕರಣ ಸಂದರ್ಭದಲ್ಲಿ ಇಂತಹ ಅನೇಕ ಪ್ರಾಗೈತಿಹಾಸಿಕ ಅವಶೇಷಗಳು ನಾಶವಾಗಿರುವ ಸಾಧ್ಯತೆಯಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.