ಕಾಪು (ಪಡುಬಿದ್ರಿ): ಇಲ್ಲಿನ ದಂಡತೀರ್ಥ ಪದವಿಪೂರ್ವ ಕಾಲೇಜಿನ ರಜತ ಮಹೋತ್ಸವ ಇದೇ 8ರಂದು ನಡೆಯಲಿದೆ ಎಂದು ಉಳಿಯಾರಗೋಳಿ ದಂಡತೀರ್ಥ ಸಮೂಹ ಶಿಕ್ಷಣ ಸಂಸ್ಥೆಗಳ ಸಂಚಾಲಕ ಡಾ.ಪ್ರಶಾಂತ್ ಶೆಟ್ಟಿ ಹೇಳಿದರು.

ಇಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, 1999ರಲ್ಲಿ ದಿ.ಡಾ.ಪ್ರಭಾಕರ ಶೆಟ್ಟಿ ಅವರ ಸಂಚಾಲಕತ್ವದಲ್ಲಿ ವಿಜ್ಞಾನ ವಿಭಾಗ ಮೂಲಕ ಪದವಿಪೂರ್ವ ಕಾಲೇಜು ಆರಂಭಿಸಲಾಗಿತ್ತು. 2000ದಲ್ಲಿ ಕಲಾ, ವಾಣಿಜ್ಯ ವಿಭಾಗ ತೆರೆಯಲಾಯಿತು. ರಜತ ಮಹೋತ್ಸವ ವರ್ಷಾಚರಣೆ ಅಂಗವಾಗಿ ಉಡುಪಿ ವಲಯ ಮಟ್ಟದ ಬಾಲಕ– ಬಾಲಕಿಯರ ಕರಾಟೆ ಟೂರ್ನಿ, ಮುದ್ದುಕೃಷ್ಣ ವೇಷ ಸ್ಪರ್ಧೆ, ಕಾಲೇಜು ವಿದ್ಯಾರ್ಥಿಗಳ ಪ್ರತಿಭಾನ್ವೇಷಣ ಕಾರ್ಯಕ್ರಮ, ವಿಜ್ಞಾನ, ಕಲಾ ಮಾದರಿಗಳ ಪ್ರದರ್ಶನ, ಆಹಾರ ಮೇಳ ಏರ್ಪಡಿಸಲಾಗಿತ್ತು ಎಂದು ತಿಳಿಸಿದರು.

₹1 ಕೋಟಿ ವಿದ್ಯಾನಿಧಿ ಸ್ಥಾಪನೆ ಗುರಿ: ವಿದ್ಯಾನಿಧಿ ಸ್ಥಾಪಿಸಿ ಪ್ರತಿವರ್ಷ ಕಾಲೇಜಿನಲ್ಲಿ ವ್ಯಾಸಂಗ ಮಾಡುವ ಬಡವರ್ಗದ ವಿದ್ಯಾರ್ಥಿಗಳಿಗೆ ಲಕ್ಷಾಂತರ ಮೊತ್ತದ ವಿದ್ಯಾರ್ಥಿವೇತನ ನೀಡಲಾಗುತ್ತಿದೆ. ರಜತ ಮಹೋತ್ಸವ ಸಂದರ್ಭದಲ್ಲಿ ವಿದ್ಯಾನಿಧಿಯನ್ನು ₹1 ಕೋಟಿಗೆ ಏರಿಸುವ ಗುರಿ ಹೊಂದಲಾಗಿದೆ. ಆ ಮೂಲಕ ನಿರಂತರವಾಗಿ ಬಡವರ್ಗದ ವಿದ್ಯಾರ್ಥಿಗಳಿಗೆ ನೆರವು ನೀಡುವ ಯೋಜನೆ ಹಾಕಿಕೊಳ್ಳಲಾಗಿದೆ ಎಂದು ವಿವರಿಸಿದರು.

ಸ್ಥಾಪಕರ ಪುತ್ಥಳಿ ಅನಾವರಣ: 7ರಂದು ಶಾಲಾ ವಾಷಿಕೋತ್ಸವ, ಬಹುಮಾನ ವಿತರಣಾ ಸಮಾರಂಭ ನಡೆಯಲಿದೆ. 8ರಂದು ಸಂಜೆ 5.30ಕ್ಕೆ ರಜತ ಮಹೋತ್ಸವ ಸಮಾರಂಭ ನಡೆಯಲಿದ್ದು, ಎಂಆರ್ಜಿ ಗ್ರೂಪ್ನ ಚೇರ್ಮನ್ ಕೆ. ಪ್ರಕಾಶ್ ಶೆಟ್ಟಿ ಉದ್ಘಾಟಿಸುವರು. ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಅಧ್ಯಕ್ಷತೆ ವಹಿಸುವರು. ನಿಟ್ಟೆ ವಿಶ್ವವಿದ್ಯಾಲಯದ ಸಹ ಕುಲಾಧಿಪತಿ ಡಾ.ಎಂ. ಶಾಂತಾರಾಮ ಶೆಟ್ಟಿ, ಮಣಿಪಾಲ ವಿಶ್ವವಿದ್ಯಾಲಯ ಸಹ ಕುಲಾಧಿಪತಿ ಡಾ.ಎಸ್.ಎಸ್.ಬಲ್ಲಾಳ್ ಅವರು ಸಂಸ್ಥೆಯ ಸ್ಥಾಪಕ ದಿ. ಪ್ರಭಾಕರ ಶೆಟ್ಟಿ ಅವರ ಪುತ್ಥಳಿ ಅನಾವರಣಗೊಳಿಸುವರು. ಮಸ್ಕತ್ ಮಲ್ಟಿಟೆಕ್ ಗ್ರೂಪ್ ಸ್ಥಾಪಕ ದಿವಾಕರ ಶೆಟ್ಟಿ ಸ್ಮರಣ ಸಂಚಿಕೆ ಬಿಡುಗಡೆಗೊಳಿಸುವರು. ಮಾಜಿ ಸಚಿವ ವಿನಯ ಕುಮಾರ್ ಸೊರಕೆ, ಉದ್ಯಮಿ ಮೊಹಮ್ಮದ್ ಅಸ್ಲಾಂ ಖಾಝಿ, ಡಾ.ಚಂದ್ರಶೇಖರ ಶೆಟ್ಟಿ, ಡಾ.ಅಶೋಕ್ ಹೆಗ್ಡೆ, ಡಿಡಿಪಿಯು ಮಾರುತಿ, ಹಳೆವಿದ್ಯಾರ್ಥಿ ಸಂಘದ ಅಧ್ಯಕ್ಷ ಕಾಪು ದಿವಾಕರ ಶೆಟ್ಟಿ, ಕೆ. ವಾಸುದೇವ ಶೆಟ್ಟಿ, ಮನೋಹರ ಎಸ್. ಶೆಟ್ಟಿ ಭಾಗವಹಿಸುವರು ಎಂದು ತಿಳಿಸಿದರು.

ಪ್ರಾಂಶುಪಾಲ ನೀಲಾನಂದ ನಾಯ್ಕ್, ಪ್ರಾಥಮಿಕ ವಿಭಾಗ ಮುಖ್ಯಶಿಕ್ಷಕ ಗ್ಯಾಬ್ರಿಯಲ್ ಎಫ್. ಮಸ್ಕರೇನಸ್, ಆಡಳಿತಾಧಿಕಾರಿ ಆಲ್ಬನ್ ರಾಡ್ರಿಗಸ್, ಶಿಕ್ಷಣ ಸಂಯೋಜಕ ಶಿವಣ್ಣ ಬಾಯಾರ್ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.