ಗುರುವಾರ, 19 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಹೊಂದಾಣಿಕೆ ರಾಜಕಾರಣ ಸಹಿಸುವುದಿಲ್ಲ: ರಕ್ಷಿತ್ ಶಿವರಾಂ

Published : 18 ಸೆಪ್ಟೆಂಬರ್ 2024, 7:41 IST
Last Updated : 18 ಸೆಪ್ಟೆಂಬರ್ 2024, 7:41 IST
ಫಾಲೋ ಮಾಡಿ
Comments

ಕಾರ್ಕಳ: ಹೊಂದಾಣಿಕೆ ರಾಜಕಾರಣವನ್ನು ಪಕ್ಷ ಎಂದಿಗೂ ಸಹಿಸುವುದಿಲ್ಲ. ಪಕ್ಷವನ್ನು ಮತ್ತೊಮ್ಮೆ ತಳಮಟ್ಟದಿಂದ ಕಟ್ಟಬೇಕಾಗಿದೆ ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಹೇಳಿದರು.

ಕಾರ್ಕಳ, ಹೆಬ್ರಿ ಬ್ಲಾಕ್ ಕಾಂಗ್ರೆಸ್ ಸಮಿತಿಯ ಪಕ್ಷದ ಪದಾಧಿಕಾರಿಗಳು, ಪ್ರಮುಖರ ಸಭೆಯಲ್ಲಿ ಅವರು ಮಾತನಾಡಿದರು. ಪಕ್ಷ ಸಂಘಟನೆ ದೃಷ್ಟಿಯಿಂದ ಮಾಹಿತಿ ಪಡೆದುಕೊಂಡು ಪಕ್ಷದ ನಾಯಕರ, ಕಾರ್ಯಕರ್ತರ ಅಹವಾಲು ಸ್ವೀಕರಿಸಿ ಚರ್ಚೆ ನಡೆಸಿದರು.

ರಾಜ್ಯ ಹಿಂದುಳಿದ ವರ್ಗಗಳ ಸಮಿತಿ ಉಪಾಧ್ಯಕ್ಷ ಡಿ.ಆರ್. ರಾಜು ಪಕ್ಷದ ಅಭಿವೃದ್ಧಿ, ಬಲವರ್ಧನೆ ಕುರಿತು ಮಾಹಿತಿ ನೀಡಿದರು. ಮುಖಂಡ ಮುನಿಯಾಲು ಉದಯ ಕುಮಾರ ಶೆಟ್ಟಿ ಪಕ್ಷದ ಕಾರ್ಯಚಟುವಟಿಕೆಗಳ ಬಗ್ಗೆ ಮಾಹಿತಿ ನೀಡಿದರು.

ಹೆಬ್ರಿ ಬ್ಲಾಕ್‌ ಅಧ್ಯಕ್ಷ ಚಂದ್ರಶೇಖರ್ ಬಾಯರಿ, ಕಾರ್ಕಳ ಬ್ಲಾಕ್ ಅಧ್ಯಕ್ಷ ಸದಾಶಿವ ದೇವಾಡಿಗ, ಜಿಲ್ಲಾ ವಕ್ತಾರ ಬಿಪಿನ್ ಚಂದ್ರಪಾಲ್, ತಾಲ್ಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಅಜಿತ್ ಹೆಗ್ಡೆ, ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ದೀಪಕ್ ಕೋಟ್ಯಾನ್, ಅಧ್ಯಕ್ಷೆ ಅನಿತಾ ಡಿಸೋಜ, ರಜನಿ ಹೆಬ್ಬಾರ್, ಮುಖಂಡರಾದ ಸುರೇಂದ್ರ ಶೆಟ್ಟಿ, ಪ್ರಭಾಕರ ಬಂಗೇರ ಇದ್ದರು. ವಕ್ತಾರ ಶುಭದ ರಾವ್ ನಿರೂಪಿಸಿದರು. ಸುನೀಲ್ ಭಂಡಾರಿ ವಂದಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT