ಕಾರ್ಕಳ: ಸೋಲು ಗೆಲುವನ್ನು ಸಮಾನವಾಗಿ ಸ್ವೀಕರಿಸಿ. ನೈತಿಕ ಮೌಲ್ಯ, ಕ್ರೀಡಾ ಸ್ಫೂರ್ತಿಯನ್ನು ಎಳವೆಯಲ್ಲೇ ಅಳವಡಿಸಿಕೊಂಡಾಗ ವಿದ್ಯಾರ್ಥಿಗಳು ಜೀವನದಲ್ಲಿ ಯಶಸ್ಸಿನ ಹಾದಿಯಲ್ಲಿ ಸಾಗಲು ಸಾಧ್ಯ ಎಂದು ದುರ್ಗಾಪರಮೇಶ್ವರಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಸುರೇಂದ್ರ ಶೆಟ್ಟಿ ಕೋರಿಬೆಟ್ಟುಗುತ್ತು ಹೇಳಿದರು.

ತಾಲ್ಲೂಕಿನ ಮುಂಡ್ಕೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಪ್ರಾಯೋಜಕತ್ವದಲ್ಲಿ ವಿದ್ಯಾವರ್ಧಕ ಪದವಿಪೂರ್ವ ಕಾಲೇಜಿನ ಕ್ರೀಡಾಂಗಣದಲ್ಲಿ ಆಯೋಜಿಸಿದ ವೃತ್ತ ಮಟ್ಟದ ಪ್ರಾಥಮಿಕ ಶಾಲೆಗಳ ಕ್ರೀಡಾಕೂಟ ಉದ್ಘಾಟಿಸಿ ಅವರು ಮಾತನಾಡಿದರು.

ಕ್ರೀಡಾ ಜ್ಯೋತಿ ಉದ್ಘಾಟಿಸಿದ ದಕ್ಷಿಣ ಕನ್ನಡ ಹಾಲು ಉತ್ಪಾದಕರ ಒಕ್ಕೂಟದ ಅಧ್ಯಕ್ಷ ಸುಚರಿತ ಶೆಟ್ಟಿ ಮಾತನಾಡಿ, ಮಕ್ಕಳು ಶಿಕ್ಷಣದ ಜೊತೆಗೆ ಕ್ರೀಡಾ ಕ್ಷೇತ್ರದಲ್ಲಿ ತೊಡಗಿಸಿಕೊಳ್ಳಬೇಕು ಎಂದರು.

ಎಸ್ಡಿಎಂಸಿ ಅಧ್ಯಕ್ಷ ಉಮಾಧರ ಆಚಾರ್ಯ ಅಧ್ಯಕ್ಷತೆ ವಹಿಸಿದ್ದರು. ಉದ್ಯಮಿ ಎಂ.ಜಿ.ಕರ್ಕೆರ, ನಮ್ಮ ಫ್ರೆಂಡ್ಸ್ ಅಧ್ಯಕ್ಷ ಅರುಣ್ ರಾವ್, ದ.ಕ. ಹಾಲು ಉತ್ಪಾದಕರ ಒಕ್ಕೂಟದ ನಿರ್ದೇಶಕ ಸದಾಶಿವ ಶೆಟ್ಟಿ ಬೋಳ, ಉದ್ಯಮಿ ಅಶೋಕ್ ಶೆಟ್ಟಿ ಪದ್ಮಸದನ, ನಿವೃತ್ತ ಗ್ರಾಮಕರಣಿಕ ಅವಿಲ್ ಡಿಸೋಜ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ರಮಾನಂದ ಶೆಟ್ಟಿ, ಉಪಾಧ್ಯಕ್ಷೆ ವೀಣಾ ಕಾಮತ್, ಮುಂಡ್ಕೂರು ಲಯನ್ಸ ಕ್ಲಬ್ ಅಧ್ಯಕ್ಷ ಪ್ರಶಾಂತ್ ಶೆಟ್ಟಿ, ವಿದ್ಯಾವರ್ಧಕ ಪದವಿಪೂರ್ವ ಕಾಲೇಜು ಪ್ರಾಂಶುಪಾಲ ಮಾಲತೇಶ್ ಇಂಗಳಕಿ, ಎಸ್ಡಿಎಂಸಿ ಕೋಶಾಧಿಕಾರಿ ಪ್ರಭಾಕರ್ ಶೆಟ್ಟಿ ಗಾರ್, ಮುಖ್ಯಶಿಕ್ಷಕಿ ಸವಿತಾ, ಮುಂಡ್ಕೂರು ಹಾಲು ಉತ್ಪಾದಕರ ಸಹಕಾರಿ ಸಂಘದ ಅಧ್ಯಕ್ಷ ಪ್ರಭಾಕರ್ ಶೆಟ್ಟಿ, ಹಳೆವಿದ್ಯಾರ್ಥಿ ಸಂಘದ ಅಧ್ಯಕ್ಷ ಶರತ್ ಶೆಟ್ಟಿ, ಶಿಕ್ಷಣ ಸಂಯೋಜಕ ಚಂದ್ರಕಾಂತ್ ಡೇಸಾ, ದೈಹಿಕ ಶಿಕ್ಷಕಿ ಮಮತಾ ಶೆಟ್ಟಿ ಇದ್ದರು.

ಮುಖ್ಯಶಿಕ್ಷಕ ರಂಗಸ್ವಾಮಿ ಸ್ವಾಗತಿಸಿದರು. ಶಿಕ್ಷಕ ಶ್ರೀಕಾಂತ್ ವಂದಿಸಿದರು. ವಿದ್ಯಾವರ್ಧಕ ಪದವಿಪೂರ್ವ ಕಾಲೇಜು ಶಿಕ್ಷಕ ಪ್ರಭಾಕರ ಶೆಟ್ಟಿ ನಿರೂಪಿಸಿದರು. ಜಿಲ್ಲಾ ಮಟ್ಟದ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕೃತ ವಸಂತ್ ಶೆಟ್ಟಿ ಅವರನ್ನು ಸನ್ಮಾನಿಸಲಾಯಿತು. ಪಥಸಂಚಲನ ನಡೆಯಿತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.