ಶುಕ್ರವಾರ, 4 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಬಿಪಿಎಲ್‌ ಪಡಿತರ ಚೀಟಿ ರದ್ದು ಭಾಗ್ಯ: ಆರೋಪ

Published : 4 ಅಕ್ಟೋಬರ್ 2024, 7:58 IST
Last Updated : 4 ಅಕ್ಟೋಬರ್ 2024, 7:58 IST
ಫಾಲೋ ಮಾಡಿ
Comments

ಕಾರ್ಕಳ: ಕಾಂಗ್ರೆಸ್ ಸರ್ಕಾರ ರಾಜ್ಯದ ಬಡಜನರ ಪಡಿತರ ಚೀಟಿ ರದ್ದು ಮಾಡುವ ಮೂಲಕ 6ನೇ ಭಾಗ್ಯ ನೀಡಿದೆ ಎಂದು ಶಾಸಕ ವಿ.ಸುನಿಲ್ ಕುಮಾರ್ ಆರೋಪಿಸಿದರು.

ತಾಲ್ಲೂಕಿನ ಬಜಗೋಳಿಯಲ್ಲಿ ನಡೆದ ಬಿಜೆಪಿ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು ರಾಜ್ಯ ಸರ್ಕಾರ ದಿವಾಳಿಯಾಗಿದೆ. ಅವೈಜ್ಞಾನಿಕ ನೀತಿಯಿಂದಾಗಿ ರಾಜ್ಯದ ಆರ್ಥಿಕತೆ ಅಧೋಗತಿಗೆ ಇಳಿದಿದೆ. ಇದನ್ನು ಸರಿಪಡಿಸಲು ಸಾಧ್ಯವಾಗದೆ ಬಡವರ ಬಿಪಿಎಲ್ ಪಡಿತರ ಚೀಟಿ ರದ್ದು ಮಾಡಲು  ಸರ್ಕಾರ ಮುಂದಾಗಿದೆ ಎಂದು ದೂರಿದರು.

ಮುಡಾದಿಂದ ಅಕ್ರಮವಾಗಿ ಪಡೆದಿರುವ 14 ಸೈಟುಗಳನ್ನು ವಾಪಸ್ ನೀಡುವ ಮೂಲಕ ಮುಖ್ಯಮಂತ್ರಿ ಮಾಡಿರುವ ತಪ್ಪನ್ನು ಒಪ್ಪಿಕೊಂಡಿದ್ದಾರೆ. ಇನ್ನೂ ಅಧಿಕಾರಕ್ಕೆ ಅಂಟಿಕೊಳ್ಳದೆ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕು ಎಂದು ಅವರು ಆಗ್ರಹಿಸಿದರು.

ಮಂಡಲ ಅಧ್ಯಕ್ಷ ನವೀನ್ ನಾಯಕ್, ಜಿಲ್ಲಾ ಉಪಾಧ್ಯಕ್ಷ ಮಹಾವೀರ್ ಹೆಗ್ಡೆ, ಜಿಲ್ಲಾ ಕಾರ್ಯದರ್ಶಿ ಉದಯ್‌ ಕೋಟ್ಯಾನ್‌, ಕಾರ್ಕಳ ಮಂಡಲದ ಉಪಾಧ್ಯಕ್ಷ ಅನಂತಕೃಷ್ಣ ಶೆಣೈ, ಮರ್ಣೆ ಶಕ್ತಿಕೇಂದ್ರದ ಅಧ್ಯಕ್ಷ ಸಂತೋಷ್‌ ಶೆಟ್ಟಿ ಹಿರ್ಗಾನ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT