ಉಡುಪಿ: ಕಾರ್ಕಳದಲ್ಲಿ ಯುವತಿ ಮೇಲೆ ನಡೆದ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿ ಮೂರನೇ ಆರೋಪಿಯನ್ನು ಪೊಲೀಸರು ಸೋಮವಾರ ಬಂಧಿಸಿದ್ದಾರೆ.

ಕಾರ್ಕಳದ ಅಭಯ್ (23) ಬಂಧಿತ ಆರೋಪಿ. ಪ್ರಕರಣಕ್ಕೆ ಸಂಬಂಧಿಸಿ ಬಂಗ್ಲೆಗುಡ್ಡೆ ನಿವಾಸಿ ಅಲ್ತಾಫ್ (34) ಮತ್ತು ಕ್ಸೇವಿಯರ್ ರಿಚರ್ಡ್ ಕ್ವಾಡ್ರಸ್ (35) ಎಂಬುವವರನ್ನು ಪೊಲೀಸರು ಈ ಹಿಂದೆ ಬಂಧಿಸಿದ್ದರು.

‘ಬಂಧಿತ ಅಭಯ್, ಪ್ರಥಮ ಆರೋಪಿ ಅಲ್ತಾಫ್‌ಗೆ ಮಾದಕ ವಸ್ತು ಕೊಟ್ಟಿದ್ದಾನೆ ಎಂಬುದು ಪ್ರಾಥಮಿಕ ತನಿಖೆಯಲ್ಲಿ ಗೊತ್ತಾಗಿದೆ’ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಅರುಣ್ ಕುಮಾರ್ ತಿಳಿಸಿದ್ದಾರೆ.

‘ಕೃತ್ಯ ಎಸಗಿದ ಮೇಲೆ ಅಲ್ತಾಫ್ ತಪ್ಪಿಸಿಕೊಳ್ಳಲು ಅಭಯ್ ಸಹಕಾರ ನೀಡಲು ಯತ್ನಿಸಿರುವುದು ಕೂಡ ತನಿಖೆಯಲ್ಲಿ ತಿಳಿದು ಬಂದಿದೆ. ಅಭಯ್‌ನನ್ನು ಮಂಗಳವಾರ ನ್ಯಾಯಾಲಯದ ಮುಂದೆ ಹಾಜರುಪಡಿಸಿ, ಕಸ್ಟಡಿಗೆ ಪಡೆದುಕೊಂಡು ಹೆಚ್ಚಿನ ವಿಚಾರಣೆ ನಡೆಸಲಾಗುವುದು’ ಎಂದೂ ಹೇಳಿದ್ದಾರೆ.

‘ಸಂಶಯದ ಆಧಾರದ ಮೇಲೆ ಇನ್ನೂ ಇಬ್ಬರನ್ನು ವಶಕ್ಕೆ ಪಡೆದಿದ್ದು, ಅವರ ವಿಚಾರಣೆ ನಡೆಯುತ್ತಿದೆ’ ಎಂದೂ ಎಸ್ಪಿ ವಿವರಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.