ಉಡುಪಿ: ಜಿಲ್ಲೆಯಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರದ ಯೋಜನೆಗಳ ಸವಲತ್ತುಗಳನ್ನು ಶೇ 98ರಷ್ಟು ಫಲಾನುಭವಿಗಳಿಗೆ ತಲುಪಿಸಲಾಗಿದ್ದು, ಮಾರ್ಚ್ ಅಂತ್ಯಕ್ಕೆ ಸಂಪೂರ್ಣ ಗುರಿ ಸಾಧಿಸಲಾಗುವುದು ಎಂದು ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವ ಎಸ್.ಅಂಗಾರ ಹೇಳಿದರು.

ಕಟಪಾಡಿಯಲ್ಲಿ ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯಿತಿ ಸಹಯೋಗದೊಂದಿಗೆ ನಡೆದ ಕೇಂದ್ರ ಮತ್ತು ರಾಜ್ಯ ಸರ್ಕಾರದ ಯೋಜನೆಗಳ ಫಲಾನುಭವಿಗಳ ಸಮ್ಮೇಳನ ಉದ್ಘಾಟಿಸಿ ಮಾತನಾಡಿ, ಮಾತೃವಂದನಾ ಯೋಜನೆಯಡಿಯಲ್ಲಿ 38,915 ಫಲಾನುಭವಿಗಳಿಗೆ ₹ 17.14 ಕೋಟಿ ನೀಡಲಾಗಿದ್ದು ಮಹಿಳಾ ಸಬಲೀಕರಣಕ್ಕೆ ಒತ್ತು ನೀಡಲಾಗಿದೆ.

ಜಲಜೀವನ್ ಮಿಷನ್ ಯೋಜನೆಯಡಿ ಶುದ್ಧ ಕುಡಿಯುವ ನೀರು ಒದಗಿಸುವ ಉದ್ದೇಶದಿಂದ 1,75,265 ಮನೆಗಳಿಗೆ ನೀರಿನ ಸಂಪರ್ಕ ಕಲ್ಪಿಸಿ ₹ 269 ಕೋಟಿ ವೆಚ್ಚ ಮಾಡಲಾಗಿದೆ. ಮೀನುಗಾರರ ಅನುಕೂಲಕ್ಕಾಗಿ 8,030 ನಾಡದೋಣಿಗಳಿಗೆ 10 ತಿಂಗಳು ತಲಾ 300 ಲೀಟರ್ ಸೀಮೆಎಣ್ಣೆ ಹಾಗೂ ಯಾಂತ್ರೀಕೃತ ಬೋಟುಗಳಿಗೆ 2.5 ಲಕ್ಷ ಕೆಎಲ್ ಡೀಸೆಲ್ ವಿತರಿಸಲಾಗಿದ್ದು ಮೀನು ಉತ್ಪಾದನೆಯಲ್ಲಿ ರಾಜ್ಯವು ದೇಶದಲ್ಲೇ 3ನೇ ಸ್ಥಾನ ಪಡೆದಿದೆ ಎಂದರು.

ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಖಾತೆ ಸಚಿವೆ ಶೋಭಾ ಕರಂದ್ಲಾಜೆ ಮಾತನಾಡಿ, ಶೌಚಾಲಯಗಳ ನಿರ್ಮಾಣ, ಮನೆ ಮನೆಗೆ ಶುದ್ಧ ಕುಡಿಯವ ನೀರು ಸೌಲಭ್ಯ, ಕೋವಿಡ್-19 ಅವಧಿಯಲ್ಲಿ ₹ 240 ಕೋಟಿಗೂ ಅಧಿಕ ಉಚಿತ ಲಸಿಕೆ ವಿತರಣೆ, ಪಿಎಂ ಗರೀಬ್ ಯೋಜನೆಯಡಿ ಉಚಿತ ಪಡಿತರ, ದೀನ್ ದಯಾಳ್ ಯೋಜನೆಯಡಿ ವಿದ್ಯುತ್ ಸಂಪರ್ಕ, ಉಜ್ವಲ ಗ್ಯಾಸ್ ಯೋಜನೆ, ಆಯುಷ್ಮಾನ್ ಭಾರತ್ ಯೋಜನೆಯಡಿ ಉಚಿತ ಚಿಕಿತ್ಸೆ, ಜನೌಷಧಿ ಕೇಂದ್ರಗಳ ಮೂಲಕ ಅತ್ಯಂತ ಕಡಿಮೆ ದರದಲ್ಲಿ ಔಷಧಗಳ ಪೂರೈಕೆ ಹೀಗೆ, ಎಲ್ಲಾ ಸಮುದಾಯದ ಅಭಿವೃದ್ಧಿಗೆ ಕೇಂದ್ರ ಸರ್ಕಾರ ಯೋಜನೆಗಳನ್ನು ಜಾರಿಗೊಳಿಸಿದೆ ಎಂದರು.

ಕಾಪು ಶಾಸಕ ಲಾಲಾಜಿ ಆರ್.ಮೆಂಡನ್ ಅಧ್ಯಕ್ಷತೆ ವಹಿಸಿದ್ದರು. ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಕೆ.ಜಯಪ್ರಕಾಶ್ ಹೆಗ್ಡೆ, ಉಡುಪಿ ಶಾಸಕ ರಘುಪತಿ ಭಟ್, ಬೈಂದೂರು ಶಾಸಕ ಬಿ.ಎಂ.ಸುಕುಮಾರ್ ಶೆಟ್ಟಿ, ದಿ ಮೈಸೂರು ಎಲೆಕ್ಟ್ರಿಕಲ್ ಇಂಡಸ್ಟ್ರೀಸ್ ಲಿಮಿಟೆಡ್ ಅಧ್ಯಕ್ಷ ಉದಯ್ ಕುಮಾರ್ ಶೆಟ್ಟಿ, ಕಟಪಾಡಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಇಂದಿರಾ ಎಸ್.ಆಚಾರ್ಯ, ಪ್ರೊಬೇಷನರಿ ಐಎಎಸ್ ಅಧಿಕಾರಿ ಯತೀಶ್, ಹೆಚ್ಚುವರಿ ಜಿಲ್ಲಾಧಿಕಾರಿ ವೀಣಾ ಬಿ.ಎನ್, ಕುಂದಾಪುರ ಉಪ ವಿಭಾಗಾಧಿಕಾರಿ ರಶ್ಮಿ, ಎಎಸ್‌ಪಿ ಸಿದ್ದಲಿಂಗಪ್ಪ ಇದ್ದರು.

ಕಾರ್ಯಕ್ರಮದಲ್ಲಿ ವಿವಿಧ ಇಲಾಖೆಯ ಫಲಾನುಭವಿಗಳಿಗೆ ಸವಲತ್ತುಗಳನ್ನು ವಿತರಿಸಲಾಯಿತು. ಜಿಲ್ಲಾ ಪಂಚಾಯಿತಿ ಸಿಇಒ ಎಚ್.ಪ್ರಸನ್ನ ಸ್ವಾಗತಿಸಿದರು. ಯುವಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಡಾ.ರೋಷನ್ ಕುಮಾರ್ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.

ಡಬಲ್ ಎಂಜಿನ್ ಸರ್ಕಾರದಲ್ಲಿ ಅಭಿವೃದ್ಧಿ

ರಾಜ್ಯದಲ್ಲಿ ಡಬಲ್ ಇಂಜಿನ್ ಸರ್ಕಾರದಿಂದ ನಾಗರಿಕರಿಗೆ ಉತ್ತಮ ಸೌಲಭ್ಯಗಳು ದೊರೆತಿದ್ದು, ಕೇಂದ್ರ ಮತ್ತು ರಾಜ್ಯ ಸರ್ಕಾರದ ಯೋಜನೆಗಳನ್ನು ಫಲಾನುಭವಿಗಳ ಮನೆ ಬಾಗಿಲಿಗೆ ತಲುಪಿಸಲಾಗುತ್ತಿದೆ. ಜಿಲ್ಲೆಯಲ್ಲಿ 7,475 ಸಂಜೀವಿನಿ ಸ್ವ-ಸಹಾಯ ಗುಂಪುಗಳಿಗೆ ₹ 51 ಕೋಟಿಮ ಪಿಎಂ ಕಿಸಾನ್ ಯೋಜನೆಯಡಿ ಜಿಲ್ಲೆಯ 1,53 ಲಕ್ಷ ರೈತರಿಗೆ ₹ 10,000, 4 ಹೊಸ ತಾಲ್ಲೂಕುಗಳಲ್ಲಿ ನೂತನ ತಾಲ್ಲೂಕು ಆಡಳಿತ ಸೌಧಗಳನ್ನು ನಿರ್ಮಿಸಿ ಆಡಳಿತ ಯಂತ್ರವನ್ನು ಚುರುಕುಗೊಳಿಸಲಾಗಿದೆ. ಪಶ್ಚಿಮ ವಾಹಿನಿ ಯೋಜನೆಯ ಮೂಲಕ ಕಿಂಡಿ ಅಣೆಕಟ್ಟುಗಳನ್ನು ನಿರ್ಮಿಸಿ ಅಂತರ್ಜಲ ವೃದ್ಧಿಗೆ ಕೃಷಿ ಚಟುವಟಿಕೆಗಳಿಗೆ ನೆರವು ನೀಡಲಾಗಿದೆ. ಡೀಮ್ಡ್ ಫಾರೆಸ್ಟ್ ಸಮಸ್ಯೆ ಬಗೆಹರಿಸಿ ಜಿಲ್ಲೆಯಲ್ಲಿ 35,000 ಎಕರೆ ಜಮೀನನ್ನು ಕಂದಾಯ ಇಲಾಖೆಗೆ ಪಡೆದು ಹಕ್ಕುಪತ್ರ ವಿತರಿಸಲಾಗಿದೆ. ವಿದ್ಯಾನಿಧಿ, ಬೆಳಕು ಯೋಜನೆ, ಮನೆ ಬಾಗಿಲಿಗೆ ಪಿಂಚಣಿ, ಗ್ರಾಮ ಒನ್ ಕೇಂದ್ರಗಳ ಆರಂಭದಂತಹ ಕಾರ್ಯಕ್ರಮಗಳನ್ನು ಜನರಿಗೆ ತಲುಪಿಸಲಾಗಿದೆ ಎಂದು ಇಂಧನ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ವಿ ಸುನೀಲ್ ಕುಮಾರ್ ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.