ಉಡುಪಿ: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನದಲ್ಲಿ ಶನಿವಾರ ಸಾರ್ವಜನಿಕ ಕುಂದುಕೊರತೆ, ದೇವಸ್ಥಾನದ ಸ್ಥಿರಾಸ್ತಿ ಮತ್ತು ಚರಾಸ್ತಿ ನಿರ್ವಹಣೆ, ಯಾತ್ರಾರ್ಥಿಗಳ ಸೌಲಭ್ಯ, ಘನ ಮತ್ತು ದ್ರವ ತ್ಯಾಜ್ಯಗಳ ನಿರ್ವಹಣೆ ಹಾಗೂ ಇತರೆ ವಿಷಯಗಳ ಕುರಿತು ಧಾರ್ಮಿಕ ದತ್ತಿ ಇಲಾಖೆಯ ಉಪ ಆಯುಕ್ತ ಜಯಪ್ರಕಾಶ್ ಅವರ ನೇತೃತ್ವದಲ್ಲಿ ಸಭೆ ನಡೆಯಿತು.

ದೇವಸ್ಥಾನದ ಕಾರ್ಯ ನಿರ್ವಹಣಾಧಿಕಾರಿ ಮಹೇಶ್, ತಹಶೀಲ್ದಾರ್, ದೇವಸ್ಥಾನದ ಸಿಬ್ಬಂದಿ, ಭೂಮಾಪನ ಇಲಾಖೆಯ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು. ದೇವಸ್ಥಾನ ಮತ್ತು ಧಾರ್ಮಿಕ ಸಂಸ್ಥೆಗಳ ಮಹಾಸಂಘದ ಸದಸ್ಯರಾದ ಮಧುಸೂದನ ಅಯಾರ, ದಿನೇಶ, ಚಂದ್ರ ಮೊಗೇರ, ಶ್ರೀನಿವಾಸ, ಹಿಂದೂ ಜನಜಾಗೃತಿ ಸಮಿತಿಯ ಸಮನ್ವಯಕ ವಿಜಯಕುಮಾರ, ಹಿಂದೂ ಜನಜಾಗೃತಿ ಸಮಿತಿಯ ವಿಶ್ವನಾಥ ಹಾಗೂ ದಿನೇಶ ಸಭೆಯಲ್ಲಿದ್ದರು.

ದೇವಸ್ಥಾನದಲ್ಲಿ2005ರಿಂದ2019ರ ಲೆಕ್ಕಪತ್ರ ಪರಿಶೋಧನೆಯ ವರದಿಯ ಪ್ರಕಾರ ಆಕ್ಷೇಪಿಸಿದ ಅಂಶಗಳನ್ನು ಉಪ ಆಯುಕ್ತರ ಜೊತೆ ಚರ್ಚಿಸಲಾಯಿತು. ಈ ಸಂದರ್ಭ ಉಪ ಆಯುಕ್ತರು ಸಂಬಂಧಪಟ್ಟ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡು ಸೂಕ್ತ ಕ್ರಮ ಕೈಗೊಳ್ಳುವಂತೆ ಸೂಚಿಸಿದರು ಎಂದು ಮಹಾಸಂಘದ ರಾಜ್ಯ ವಕ್ತಾರ ಗುರುಪ್ರಸಾದ ಗೌಡ ತಿಳಿಸಿದ್ದಾರೆ.

ದೇವಸ್ಥಾನದ ಆಡಳಿತವನ್ನು ಪಾರದರ್ಶಕವಾಗಿರಿಸಲು ತೆಗೆದುಕೊಂಡ ನಿರ್ಣಯಗಳ ಬಗ್ಗೆ ದೇವಸ್ಥಾನ ಮತ್ತು ಧಾರ್ಮಿಕ ಸಂಸ್ಥೆಗಳ ಮಹಾಸಂಘಕ್ಕೆ ವಿವರ ಕೊಡಬೇಕು ಎಂದು ಸೂಚನೆ ನೀಡಿದರು. ಮಹಾಸಂಘ ಆಕ್ಷೇಪಿಸಿದ ವಿಷಯಗಳ ಸಂಬಂಧ ಸೂಕ್ತ ಕ್ರಮ ಕೈಗೊಂಡು ಸರಿಪಡಿಸುವವರೆಗೂ ಹೋರಾಟ ಮುಂದುವರಿಸಲಾಗುವುದು ಎಂದು ಗುರುಪ್ರಸಾದ ಗೌಡ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.