ಕುಂದಾಪುರ: ಗಂಗೊಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಆರಾಟೆ ಎಂಬಲ್ಲಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಸೋಮವಾರ ರಾತ್ರಿ ಕಾರಿನಿಂದ ಇಳಿದಿದ್ದ ವ್ಯಕ್ತಿಯೊಬ್ಬರಿಗೆ ಅದೇ ರಸ್ತೆಯಲ್ಲಿ ಸಾಗುತ್ತಿದ್ದ ಬಸ್ ಡಿಕ್ಕಿ ಹೊಡೆದು ಮೃತಪಟ್ಟಿದ್ದಾರೆ.

ಮಂಗಳೂರಿನಿಂದ ಕುಟುಂಬ ಸದಸ್ಯರೊಂದಿಗೆ ಇನೋವಾ ಕಾರಿನಲ್ಲಿ ಭಟ್ಕಳದ ಮನೆಗೆ ಮರಳುತ್ತಿದ್ದ ಮೂಸ ನಗರದ ನಿವಾಸಿ ಮೊಹಮ್ಮದ್ ನಾಸಿರ್ ಸಿದ್ದೀಕ್ವಾ ಅವರಿಗೆ ಆರಾಟೆ ಸೇತುವೆ ಬಳಿ ಬರುತ್ತಿರುವಾಗ ಕಾರಿನಲ್ಲಿ ಅಸಹಜ ಶಬ್ದ ಕೇಳಿಸಿದೆ. ಶಬ್ದ ಏನು ಎಂದು ಪರಿಶೀಲಿಸಲು ಕಾರು ನಿಲ್ಲಸಿ ಕೆಳಕ್ಕೆ ಇಳಿದಿದ್ದ ಅವರು ಮರಳಿ ಹತ್ತಲು ಮುಂದಾಗುತ್ತಿದ್ದಾಗ ಬಸ್ ಡಿಕ್ಕಿ ಹೊಡೆದಿದೆ. ತೀವ್ರ ಗಾಯಗೊಂಡಿದ್ದ ಅವರನ್ನು ಸಾಮಾಜಿಕ ಕಾರ್ಯಕರ್ತ ಇಬ್ರಾಹಿಂ ಗಂಗೊಳ್ಳಿ ಅವರ ಆಂಬುಲೆನ್ಸ್‌ನಲ್ಲಿ ಕುಂದಾಪುರದ ಖಾಸಗಿ ಆಸ್ಪತ್ರೆಗೆ ಸಾಗಿಸಲಾಯಿತು. ಅಲ್ಲಿ ವೈದ್ಯರು ಅವರು ಮೃತಪಟ್ಟಿರುವ ಬಗ್ಗೆ ತಿಳಿಸಿದರು. ಗಂಗೊಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.