ಕುಂದಾಪುರ: ಪುರಸಭೆಯ ಎರಡನೇ ಅವಧಿಯ ಅಧ್ಯಕ್ಷರಾಗಿ ಬಿಜೆಪಿಯ ಮೋಹನ್‌ದಾಸ್ ಶೆಣೈ, ಉಪಾಧ್ಯಕ್ಷೆಯಾಗಿ ವನಿತಾ ಎಸ್. ಬಿಲ್ಲವ ಆಯ್ಕೆಯಾಗಿದ್ದಾರೆ.

23 ಸದಸ್ಯ ಬಲದ ಪುರಸಭೆಯಲ್ಲಿ ಬಿಜೆಪಿಯ 14, ಕಾಂಗ್ರೆಸ್‌ನ 8, ಓರ್ವ ಪಕ್ಷೇತರ ಸದಸ್ಯ ಆಯ್ಕೆಯಾಗಿದ್ದರು. ಸರ್ಕಾರ ಹೊರಡಿಸಿದ್ದ ಮೀಸಲಾತಿಯಂತೆ ಅಧ್ಯಕ್ಷ ಸ್ಥಾನ ಸಾಮಾನ್ಯ, ಉಪಾಧ್ಯಕ್ಷ ಸ್ಥಾನ ಸಾಮಾನ್ಯ ಮಹಿಳೆಗೆ ನಿಗದಿಯಾಗಿತ್ತು.

ಅಧ್ಯಕ್ಷ ಸ್ಥಾನಕ್ಕೆ ಬಿಜೆಪಿಯಿಂದ ಮೋಹನ್‌ದಾಸ್ ಶೆಣೈ, ಕಾಂಗ್ರೆಸ್‌ನಿಂದ ಚಂದ್ರಶೇಖರ ಖಾರ್ವಿ, ಉಪಾಧ್ಯಕ್ಷ ಸ್ಥಾನಕ್ಕೆ ಬಿಜೆಪಿಯಿಂದ ವನಿತಾ ಎಸ್.ಬಿಲ್ಲವ, ಕಾಂಗ್ರೆಸ್‌ನಿಂದ ಕಮಲಾ ಪೂಜಾರಿ ನಾಮಪತ್ರ ಸಲ್ಲಿಸಿದ್ದರು. ಸಂಸದ ಕೋಟ ಶ್ರೀನಿವಾಸ ಪೂಜಾರಿ, ಶಾಸಕ ಎ .ಕಿರಣ್ ಕುಮಾರ್ ಕೊಡ್ಗಿ ಸೇರಿ ಬಿಜೆಪಿ ಪಾಳಯದಲ್ಲಿ 16 ಮತ ಸಂಗ್ರಹವಿತ್ತು. ಪಕ್ಷೇತರ ಸದಸ್ಯೆ ಲಕ್ಷ್ಮೀ ಬಾಯಿ ಗೈರು ಹಾಜರಾಗಿದ್ದರಿಂದ ಚಲಾವಣೆಯಾದ 24 ಮತಗಳಲ್ಲಿ 16–8 ಮತಗಳ ಅಂತರದಿಂದ ಬಿಜೆಪಿ ಅಭ್ಯರ್ಥಿಗಳು ಜಯ ಸಾಧಿಸಿದ್ದಾರೆ.

ಗುರುವಾರ ನಡೆದ ಚುನಾವಣಾ ಪ್ರಕ್ರಿಯೆಯಲ್ಲಿ ತಹಶೀಲ್ದಾರ್ ಎಚ್.ಎಸ್. ಶೋಭಾಲಕ್ಷ್ಮೀ ಚುನಾವಣಾ ಅಧಿಕಾರಿಯಾಗಿದ್ದರು. ಪುರಸಭೆಯ ಮುಖ್ಯಾಧಿಕಾರಿ ಆನಂದ ಇದ್ದರು. ನೂತನ ಅಧ್ಯಕ್ಷ, ಉಪಾಧ್ಯಕ್ಷರನ್ನು ಸಂಸದ ಕೋಟ ಶ್ರೀನಿವಾಸ ಪೂಜಾರಿ, ಶಾಸಕ ಕಿರಣ್‌ಕುಮಾರ ಕೊಡ್ಗಿ, ಬಿಜೆಪಿ ಮಂಡಲ ಅಧ್ಯಕ್ಷ ಸುರೇಶ್ ಶೆಟ್ಟಿ, ಯುವ ಮೋರ್ಚಾ ಅಧ್ಯಕ್ಷ ಪೃಥ್ವಿರಾಜ್ ಶೆಟ್ಟಿ ಬಿಲ್ಲಾಡಿ, ಪ್ರಮುಖರಾದ ಸುರೇಶ್ ಶೆಟ್ಟಿ ಗೋಪಾಡಿ, ಸುಧೀರ್ ಕೆ.ಎಸ್, ವಿಜಯ್ ಎಸ್. ಪೂಜಾರಿ, ಸಂಪತ್ ಕುಮಾರ ಶೆಟ್ಟಿ, ಪುರಸಭೆ ಸದಸ್ಯರು ಅಭಿನಂದಿಸಿದರು.

ಮೂರನೇ ಬಾರಿ ಅಧ್ಯಕ್ಷ: ಸಂಘ ಪರಿವಾರದ ಕಟ್ಟಾಳು ಮೋಹನ್‌ದಾಸ್ ಶೆಣೈ ಅವರಿಗೆ ಮತ್ತೊಮ್ಮೆ ಅಧ್ಯಕ್ಷ ಪೀಠದಲ್ಲಿ ಕುಳಿತುಕೊಳ್ಳುವ ಅವಕಾಶ ದೊರಕುವ ಮೂಲಕ ಅವರು ಮೂರನೆಯ ಅವಧಿಗೆ ಪುರಸಭೆ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.

ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಮೋಹನ್‌ದಾಸ್ ಶೆಣೈ, 8 ವರ್ಷಗಳಿಂದ ನೆನಗುದಿಗೆ ಬಿದ್ದಿರುವ ನಗರದ ಒಳ ಚರಂಡಿ ಯೋಜನೆ ಕಾರ್ಯಗತಗೊಳಿಸಲು, ಶಾಸಕರ ಮಾರ್ಗದರ್ಶನದಲ್ಲಿ ಸಂಬಂಧಪಟ್ಟವರೊಂದಿಗೆ ಸಮನ್ವಯ ಸಾಧಿಸಿ ಪ್ರಯತ್ನಿಸುತ್ತೇನೆ ಎಂದು ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.