ಭಾನುವಾರ, 8 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಕೃಷಿಗೆ ಸರ್ಕಾರದ ಪ್ರೋತ್ಸಾಹ ಅಗತ್ಯ: ಮಂಜುನಾಥ್ ಗಿಳಿಯಾರು

ಪಂಚವರ್ಣದ ರೈತರೆಡೆಗೆ ನಮ್ಮ ನಡಿಗೆ ಕಾರ್ಯಕ್ರಮದಲ್ಲಿ ಮಂಜುನಾಥ ಗಿಳಿಯಾರು
Published 26 ಜುಲೈ 2024, 6:21 IST
Last Updated 26 ಜುಲೈ 2024, 6:21 IST
ಅಕ್ಷರ ಗಾತ್ರ

ಕೋಟ (ಬ್ರಹ್ಮಾವರ): ಸರ್ಕಾರ ಕೃಷಿ ಕಾರ್ಯಕ್ಕೆ ಹೆಚ್ಚಿನ ಉತ್ತೇಜನ ನೀಡಬೇಕು. ರೈತರು ಕಷ್ಟ‌ಪಟ್ಟು ಬೆಳೆಸುವ ಬೆಳೆ ನೆರೆಹಾವಳಿಗೆ ಹಾನಿಗೊಳ್ಳುತ್ತದೆ. ಇದಕ್ಕೆ ಪರಿಹಾರ, ಸೂಕ್ತ ವ್ಯವಸ್ಥೆ ಕಲ್ಪಿಸಿ ನೆರವು ನೀಡಬೇಕು ಎಂದು ವಕೀಲ ಟಿ. ಮಂಜುನಾಥ್ ಗಿಳಿಯಾರು ಹೇಳಿದರು.

ಕೋಟದ ಪಂಚವರ್ಣ ಯುವಕ ಮಂಡಲ, ಮಹಿಳಾ ಮಂಡಲದ ನೇತೃತ್ವದಲ್ಲಿ ಮಣೂರು ಗೀತಾನಂದ ಫೌಂಡೇಷನ್‌, ರೈತ ಧ್ವನಿಸಂಘ, ಸಾಲಿಗ್ರಾಮ ರೋಟರಿ ಕ್ಲಬ್, ಕಾರ್ಕಡ ಗೆಳೆಯರ ಬಳಗ, ಸಾಲಿಗ್ರಾಮ ವಿಪ್ರ ಮಹಿಳಾ ಬಳಗ, ಜೆಸಿಐ ಸೀನಿಯರ್‌ ಸಹಯೋಗದೊಂದಿಗೆ ನಡೆದ ರೈತರೆಡೆಗೆ ನಮ್ಮ ನಡಿಗೆ 37ನೇ ಮಾಲಿಕೆಯಲ್ಲಿ ಅವರು ಮಾತನಾಡಿದರು.

ಕಾರ್ಯಕ್ರಮ ಉದ್ಘಾಟಿಸಿದ ಪಾಂಡೇಶ್ವರ ರಕ್ತೇಶ್ಚರಿ ದೇವಸ್ಥಾನದ ಧರ್ಮದರ್ಶಿ ಕೆ.ವಿ. ರಮೇಶ ರಾವ್ ಮಾತನಾಡಿ, ರೈತರೆಡೆಗೆ ನಮ್ಮ ನಡಿಗೆ ಕಾರ್ಯಕ್ರಮ ಅರ್ಥಪೂರ್ಣ. ಕೃಷಿಕರಾಗಿ ಕಂಬಳ ಕ್ಷೇತ್ರದಲ್ಲಿ ಗುರುತಿಸಿಕೊಂಡ ಭೋಜ ಪೂಜಾರಿ ಅವರನ್ನು ಗೌರವಿಸಿರುವುದು ಶ್ಲಾಘನೀಯ ಎಂದರು.

ಯುವ ಕೃಷಿಕ, ಕಂಬಳ ಸಾಧಕ ಭೋಜ ಪೂಜಾರಿ ಅವರಿಗೆ ತಂದೆ ಗಾಡಿ ಕೂಸ ಪೂಜಾರಿ, ತಾಯಿ ಗಿರಿಜಾ, ಪತ್ನಿ ಸವಿತಾ ಸಮ್ಮುಖದಲ್ಲಿ ಸಾಧಕ ರೈತ ಪುರಸ್ಕಾರ ನೀಡಲಾಯಿತು. ಪಂಚವವರ್ಣ ಯುವಕ ಮಂಡಲ ಅಧ್ಯಕ್ಷ ಅಜಿತ ಆಚಾರ್ ಅಧ್ಯಕ್ಷತೆ ವಹಿಸಿದ್ದರು.

ಜಿ.ಪಂ. ಮಾಜಿ ಸದಸ್ಯ ರಾಘವೇಂದ್ರ ಕಾಂಚನ್, ಜಿಲ್ಲಾ ಪ್ರಧಾನಮಂತ್ರಿ ಫಸಲ್ ಭೀಮಾ ಯೋಜನೆ ಸಂಯೋಜಕ ರವೀಂದ್ರ ಮೊಗವೀರ, ಸಾಲಿಗ್ರಾಮ ಪ.ಪಂ. ಸದಸ್ಯ ಕಾರ್ಕಡ ರಾಜು ಪೂಜಾರಿ, ಪುನಿತ್ ಪೂಜಾರಿ ಪಾರಂಪಳ್ಳಿ, ಶ್ಯಾಮಸುಂದರ ನಾಯರಿ, ಸಂಜೀವ ದೇವಾಡಿಗ, ಕೋಟತಟ್ಟು ಗ್ರಾ.ಪಂ. ಅಧ್ಯಕ್ಷ ಸತೀಶ ಕುಂದರ್, ಬೀಜಾಡಿ ಗ್ರಾ.ಪಂ. ಅಧ್ಯಕ್ಷ ಪ್ರಕಾಶ ಪೂಜಾರಿ, ರಾಷ್ಟ್ರೀಯ ಮಾನವ ಹಕ್ಕು ರಾಜ್ಯ ಸಮಿತಿ ಪ್ರಧಾನ ಕಾರ್ಯದರ್ಶಿ ಕೋಟ ದಿನೇಶ ಗಾಣಿಗ, ಸಾಮಾಜಿಕ ಕಾರ್ಯಕರ್ತ ಶ್ರೀಕಾಂತ್ ಶೆಣೈ, ಕೋಟ ಸಾಲಿಗ್ರಾಮ ರೋಟರಿ ಕ್ಲಬ್ ಅಧ್ಯಕ್ಷ ಜಿ. ತಿಮ್ಮ ಪೂಜಾರಿ, ಕೃಷಿಕ ಭಾಸ್ಕರ ಶೆಟ್ಟಿ ಮಣೂರು, ರೈತಧ್ವನಿ ಸಂಘದ ಅಧ್ಯಕ್ಷ ಎಂ. ಜಯರಾಮ ಶೆಟ್ಟಿ, ಗೆಳೆಯರ ಬಳಗ ಕಾರ್ಕಡ ಅಧ್ಯಕ್ಷ ಕೆ. ತಾರಾನಾಥ ಹೊಳ್ಳ, ಪಂಚವರ್ಣ ಯುವಕ ಮಂಡಲ ಸ್ಥಾಪಕಾಧ್ಯಕ್ಷ ಶೇವಧಿ ಸುರೇಶ ಗಾಣಿಗ, ಮಹಿಳಾ ಮಂಡಲ ಅಧ್ಯಕ್ಷೆ ಲಲಿತಾ ಪೂಜಾರಿ, ಜೆಸಿಐ ಸಿನಿಯರ್ ಕೋಟ ಅಧ್ಯಕ್ಷ ಕೇಶವ ಆಚಾರ್ ಇದ್ದರು.

ಪಂಚವರ್ಣ ಕಾರ್ಯಾಧ್ಯಕ್ಷ ರವೀಂದ್ರ ಕೋಟ ಸ್ವಾಗತಿಸಿದರು. ಮಹಿಳಾ ಮಂಡಲ ಸಂಚಾಲಕಿ ಸುಜಾತ ಬಾಯರಿ, ಶಿಕ್ಷಕ ಸಂತೋಷ್ ಕುಮಾರ್ ಕೋಟ ನಿರೂಪಿಸಿದರು. ಕಾರ್ಯಾಧ್ಯಕ್ಷೆ ಕಲಾವತಿ ಅಶೋಕ್ ವಂದಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT