ಪಡುಬಿದ್ರಿ: ಪ್ರೊಡಕ್ಷನ್ ನಂಬರ್ 1 ತುಳು ಸಿನಿಮಾದ ಭಾಗ 1ರ ಮುಹೂರ್ತ ಪಡುಬಿದ್ರಿ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನದಲ್ಲಿ ಗುರುವಾರ ನಡೆಯಿತು.

ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸಿದ ಬಳಿಕ ದೀಪ ಬೆಳಗಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.

ಮಾಜಿ ಸಚಿವ ವಿನಯಕುಮಾರ್ ಸೊರಕೆ ಮಾತನಾಡಿ, ತುಳು ಭಾಷೆಯ ಬೆಳವಣಿಗೆಗೆ ತುಳು ನಾಟಕ, ಸಿನಿಮಾ ಮತ್ತು ತುಳು ಕಲಾವಿದರು ಪ್ರಯತ್ನ ಪಡುತ್ತಿದ್ದಾರೆ. ಸಿನಿಮಾ ಯಶಸ್ವಿಯಾಗಲಿ ಎಂದರು.

ರಂಗಕರ್ಮಿ ವಿಜಯ ಕುಮಾರ್ ಕೊಡಿಯಾಲ್ ಬೈಲ್ ಮಾತನಾಡಿ, ತುಳು ಸಿನಿಮಾ ರಂಗಕ್ಕೆ ಈಗ ಪರ್ವಕಾಲ. ಮಂಗಳೂರಿನಲ್ಲಿ 9 ಸಿನಿಮಾಗಳ ಚಿತ್ರೀಕರಣ ನಡೆಯುತ್ತಿವೆ. ಉತ್ತಮ ಸಿನಿಮಾಗಳನ್ನು ಜನರು ಸ್ವೀಕರಿಸುತ್ತಾರೆ. ಸಿನಿಮಾ ತಂಡದ ಪ್ರಯತ್ನಕ್ಕೆ ತುಳುವರು ಬೆಂಬಲ ನೀಡಬೇಕು ಎಂದರು.

ಕುಸೆಲ್ದರಸೆ ನವೀನ್ ಡಿ.ಪಡೀಲ್ ಮಾತನಾಡಿದರು.

ನಾಯಕ ನಟ ಶೋಧನ್ ಶೆಟ್ಟಿ, ‘2019ರಲ್ಲೇ ಸಿನಿಮಾ ಮಾಡಲು ತಯಾರಿ ಮಾಡಿದ್ದೆ. ಆದರೆ, ಕಾರಣಾಂತರದಿಂದ ವಿಳಂಬವಾಯಿತು. ಈಗ ಕಾಲ ಕೂಡಿಬಂದಿದೆ. ಭಾಗ 1ರ ಚಿತ್ರೀಕರಣ ಮುಗಿದ ಬಳಿಕ ಟೈಟಲ್ ಬಿಡುಗಡೆ ಮಾಡಲಿದ್ದೇವೆ’ ಎಂದರು.

ದೇವಸ್ಥಾನದ ಮೊಕ್ತೇಸರ ಭವಾನಿ ಶಂಕರ್ ಹೆಗ್ಡೆ, ಉಮೇಶ್ ಶೆಟ್ಟಿ, ಪತ್ರಕರ್ತ ಬಾಳ ಜಗನ್ನಾಥ ಶೆಟ್ಟಿ, ಪ್ರತೀಕ್ಷಾ, ನಿಖಿಲ್ ಶೆಟ್ಟಿ, ಸಂಜಯ್ ಶೆಟ್ಟಿ ಗೋಣಿಬೀಡು, ವೈ.ಎನ್.ಶೆಟ್ಟಿ, ಮಿಥುನ್, ನವೀನ್ ಚಂದ್ರ ಶೆಟ್ಟಿ, ಜಗನ್ನಾಥ ಶೆಟ್ಟಿ ಕುಳಾಯಿ, ವಿಠಲ್ ಶೆಟ್ಟಿ, ಶಾಂತಾರಾಮ್ ಭಾಗವಹಿಸಿದ್ದರು.

ಉದ್ಯಮಿ ಪಲ್ಲವಿ ಸಂತೋಷ್ ಶೆಟ್ಟಿ ಕ್ಯಾಮೆರಾ ಚಾಲನೆ ಮಾಡಿದರು. ಶಾಹಿಲ್ ರೈ ಕಾರ್ಯಕ್ರಮ ನಿರೂಪಿಸಿದರು.

ಶುಭಾ ಶೆಟ್ಟಿ ಪ್ರೊಡಕ್ಷನ್ಸ್ ಲಾಂಛನದಡಿ ಧನರಾಜ್ ಶೆಟ್ಟಿ, ಉಮೇಶ್ ಶೆಟ್ಟಿ ಸಿನಿಮಾ ನಿರ್ಮಾಣ ಮಾಡುತ್ತಿದ್ದಾರೆ. ಶರತ್ ಪೂಜಾರಿ ಬಗ್ಗತೋಟ ನಿರ್ದೇಶನದ ಜವಾಬ್ದಾರಿ ಹೊತ್ತಿದ್ದು, ಸಂದೀಪ್ ಉಡುಪಿ ಅವರು ಛಾಯಾಗ್ರಹಣ ಮಾಡಲಿದ್ದಾರೆ. ಪಡುಬಿದ್ರಿ ಸುತ್ತಮುತ್ತಲಿನ ತಾಣಗಳಲ್ಲಿ ಚಿತ್ರೀಕರಣ ನಡೆಯಲಿದೆ. ರವಿರಾಜ್ ಗಾಣಿಗ ಸಂಕಲನ, ಪ್ರಸಾದ್ ಕೆ.ಶೆಟ್ಟಿ ಸಂಗೀತ ಸಂಯೋಜನೆ ಮಾಡಲಿದ್ದಾರೆ.

ಕಲಾವಿದರಾಗಿ ನವೀನ್ ಡಿ.ಪಡೀಲ್, ಅರವಿಂದ್ ಬೋಳಾರ್, ಪ್ರಸನ್ನ ಶೆಟ್ಟಿ ಬೈಲೂರು, ರಮೇಶ್ ಶೆಟ್ಟಿ, ಸೂರಜ್ ಸನಿಲ್, ನಿತೇಶ್ ಶೆಟ್ಟಿ, ಕೀರ್ತನಾ ಸಾಲಿಯಾನ್, ಶೋಭಾ ಪ್ರಿಯಾ ನಾಯರ್, ಸಂದೀಪ್ ಪೂಜಾರಿ ಕಾಣಿಸಿಕೊಳ್ಳಲಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.