ಪಡುಬಿದ್ರಿ: ಇಲ್ಲಿನ ಅದಮಾರು ಪೂರ್ಣಪ್ರಜ್ಞ ಪದವಿ ಪೂರ್ವ ಕಾಲೇಜಿನ ಎನ್ಎಸ್ಎಸ್ ಘಟಕದ ಆಶ್ರಯದಲ್ಲಿ ಸ್ವಾಮಿ ವಿವೇಕಾನಂದರ ಜನ್ಮದಿನದ ಪ್ರಯುಕ್ತ ರಾಷ್ಟ್ರೀಯ ಯುವ ದಿನಾಚರಣೆಯನ್ನು ಸ್ವಚ್ಛತಾ ಅಭಿಯಾನದ ಮೂಲಕ ಆಚರಿಸಲಾಯಿತು.

‘ವಿವೇಕಾನಂದರು ವಿದ್ಯಾರ್ಥಿಗಳಿಗೆ ಸ್ಫೂರ್ತಿ. ಯುವ ಜನರ ಹೃದಯದಲ್ಲಿ ಸದಾ ನೆಲೆಸಿರುವ ವೀರಸನ್ಯಾಸಿ ಅವರ ಮಾತುಗಳು ಜನರ ಮನಸ್ಸನ್ನು ಹುರಿದುಂಬಿಸುತ್ತವೆ. ಅವರ ವಿಶ್ವಭ್ರಾತೃತ್ವದ ಕಲ್ಪನೆ ನಿಜಕ್ಕೂ ಆದರ್ಶಪ್ರಾಯ’ ಎಂದು ಅದಮಾರು ಪೂರ್ಣಪ್ರಜ್ಞ ಪದವಿ ಪೂರ್ವ ಕಾಲೇಜಿನ ಕನ್ನಡ ಉಪನ್ಯಾಸಕ ದೇವಿಪ್ರಸಾದ್ ಬೆಳ್ಳಿಬೆಟ್ಟು ಹೇಳಿದರು.

ಕಾಲೇಜಿನ ಪ್ರಾಂಶುಪಾಲ ಸಂಜೀವ ನಾಯ್ಕ್ ಅಧ್ಯಕ್ಷತೆ ವಹಿಸಿದ್ದರು. ಇಂಗ್ಲಿಷ್ ಮಾಧ್ಯಮ ಪ್ರೌಢಶಾಲೆಯ ಮುಖ್ಯ ಶಿಕ್ಷಕಿ ಲಕ್ಷ್ಮೀನಾಯಕ್ ಕನ್ನಡ ಮಾಧ್ಯಮ ಪ್ರೌಢಶಾಲೆಯ ಇಂಗ್ಲಿಷ್ ಶಿಕ್ಷಕಿ ಪ್ರತಿಮಾ ಭಟ್ ಇದ್ದರು. ವಾಣಿಜ್ಯ ಶಾಸ್ತ್ರ ಉಪನ್ಯಾಸಕಿ ಕೀರ್ತಿ ಪಿ. ಎಂ. ಸ್ವಾಗತಿಸಿದರು. ಪ್ರಿಯಾಂಕ ವಂದಿಸಿದರು. ಎನ್ಎಸ್ಎಸ್ ಕಾರ್ಯಕ್ರಮಾಧಿಕಾರಿ ಡಾ. ಜಯಶಂಕರ್ ಕಂಗಣ್ಣಾರು ಕಾರ್ಯಕ್ರಮ ನಿರ್ವಹಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.