ಭಾನುವಾರ, 8 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ನೇಜಾರು ಕೊಲೆ ಪ್ರಕರಣ: ವಿಚಾರಣೆ ಆ. 24ಕ್ಕೆ ಮುಂದೂಡಿಕೆ

Published 20 ಜುಲೈ 2024, 6:59 IST
Last Updated 20 ಜುಲೈ 2024, 6:59 IST
ಅಕ್ಷರ ಗಾತ್ರ

ಉಡುಪಿ: ನೇಜಾರಿನ ತಾಯಿ ಮತ್ತು ಮೂವರು ಮಕ್ಕಳ ಕೊಲೆ ಪ್ರಕರಣದ ವಿಚಾರಣೆಗೆ ಹೈಕೋರ್ಟ್‌ ತಾತ್ಕಾಲಿಕ ತಡೆ ನೀಡಿರುವ ಕಾರಣ, ಉಡುಪಿಯ ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್‌ ನ್ಯಾಯಾಲಯವು ಪ್ರಕರಣದ ವಿಚಾರಣೆಯನ್ನು ಆ.24ಕ್ಕೆ ಮುಂದೂಡಿ ಆದೇಶ ನೀಡಿದೆ.

ಪ್ರಕರಣದ ವಿಚಾರಣೆಯನ್ನು ಬೇರೆ ನ್ಯಾಯಾಲಯಕ್ಕೆ ವರ್ಗಾಯಿಸಬೇಕೆಂದು ಕೋರಿ ಆರೋಪಿ ಪ್ರವೀಣ್‌ ಚೌಗುಲೆ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದ. ಇದರ ವಿಚಾರಣೆ ನಡೆಸಿದ ನ್ಯಾಯಮೂರ್ತಿ, ಅರ್ಜಿಯ ಮುಂದಿನ ವಿಚಾರಣೆ ನಡೆಯುವವರೆಗೆ ಉಡುಪಿ ನ್ಯಾಯಾಲಯದಲ್ಲಿನ ವಿಚಾರಣೆಗೆ ತಾತ್ಕಾಲಿಕ ತಡೆ ನೀಡಿ ಆದೇಶ ನೀಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT