ಕುಂದಾಪುರ: ‘ರಾಜ್ಯದ ಯಾವುದೇ ಅರ್ಹ ಬಿಪಿಎಲ್ ಕಾರ್ಡುದಾರರಿಗೆ ಅನ್ಯಾಯ ಆಗಲು ಬಿಡುವುದಿಲ್ಲ. ಕೊಲ್ಲೂರು ಶ್ರೀದೇವಿಯ ಸನ್ನಿಧಿಯಲ್ಲಿ ಉಪಮುಖ್ಯಮಂತ್ರಿಯಾದ ನಾನೇ ಹೇಳುತ್ತಿದ್ದೇನೆ’ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದರು.

ಕೊಲ್ಲೂರು ಶ್ರೀಮೂಕಾಂಬಿಕಾ ದೇವಸ್ಥಾನಕ್ಕೆ ಗುರುವಾರ ಭೇಟಿ ನೀಡಿ, ದೇವರ ದರ್ಶನ ಪಡೆದ ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಅವರು ಮಾತನಾಡಿದರು.

‘ಬಡವರ ಪರವಾಗಿರುವ ನಮ್ಮ ಸರ್ಕಾರ ಅವರಿಗೆ ಅನ್ಯಾಯ ಮಾಡುವುದಿಲ್ಲ. ಬಿಪಿಎಲ್ ಕಾರ್ಡ್ ರದ್ದುಗೊಳಿಸುವ ಫಲಾನುಭವಿಗಳ ಪಟ್ಟಿ ನೀಡಲು ಹೇಳಿದ್ದೇವೆ. ಎಲ್ಲರಿಂದ ಮರು ಅರ್ಜಿ ಪಡೆಯುತ್ತೇವೆ. ಐದು ಗ್ಯಾರಂಟಿ ಯೋಜನೆ ಜಾರಿ ನೋಡಿಕೊಳ್ಳಲು ತಾಲ್ಲೂಕು, ಜಿಲ್ಲಾ ಹಾಗೂ ರಾಜ್ಯ ಮಟ್ಟದ ಸಮಿತಿಗಳ ಉಸ್ತುವಾರಿಯಲ್ಲಿ ನ್ಯಾಯ ನೀಡಲು ಸರ್ಕಾರ ಬದ್ಧವಾಗಿದೆ. ಯಾರೂ ಭಯ ಪಡಬೇಕಾಗಿಲ್ಲ. ವಿರೋಧ ಪಕ್ಷಗಳು ಏನಾದರೂ ಮಾತನಾಡಬೇಕಲ್ಲ ಅದಕ್ಕಾಗಿ ಮಾತನಾಡುತ್ತಿವೆ’ ಎಂದರು.

ನಕ್ಸಲ್ ನಾಯಕ ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣದ ಕುರಿತು ಪ್ರತಿಕ್ರಿಯಿಸಿದ ಅವರು, ‘ಪೊಲೀಸರು ಅವರ ಕೆಲಸ ಮಾಡುತ್ತಾರೆ. ಗೃಹ ಸಚಿವ ಪರಮೇಶ್ವರ ಅವರ ಕೆಲಸ ಮಾಡ್ತಾರೆ. ನಾನು ರಾಜ್ಯದಲ್ಲಿ ನನ್ನ ಕೆಲಸ ಮಾಡುತ್ತೇನೆ. ರಾಜ್ಯದ ಜನರನ್ನು ರಕ್ಷಣೆ ಮಾಡುವುದೇ ನಮ್ಮೆಲ್ಲರ ಕೆಲಸ. ಕೇರಳ ಹಾಗೂ ಕರ್ನಾಟಕದಲ್ಲಿ ನಕ್ಸಲ್ ಪ್ಯಾಕೇಜ್ ಘೋಷಣೆ ಮಾಡಿದ್ದೇವೆ. ಸರ್ಕಾರದ ಎಲ್ಲ ಮಾಹಿತಿಯನ್ನು ಸಾರ್ವಜನಿಕವಾಗಿ ಹಂಚಿಕೊಂಡಿದ್ದೇವೆ. ಪೊಲೀಸರು ಅವರ ಕರ್ತವ್ಯ ಮಾಡಿದ್ದಾರೆ. ನಾನು ಈ ಬಗ್ಗೆ ಹೆಚ್ಚು ಮಾತನಾಡಲ್ಲ’ ಎಂದರು.

‘ನಂದಿನಿ ಹಾಲಿಗೆ ಮಾರುಕಟ್ಟೆ ಹೆಚ್ಚಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ದೆಹಲಿಗೆ ಹೋಗಿದ್ದಾರೆ. ಅವಕಾಶ ಸಿಕ್ಕರೆ, ಕೇಂದ್ರ ಸರ್ಕಾರದ ನಬಾರ್ಡ್ ಸಾಲ ಕಡಿತ ಮಾಡಿದ ವಿಚಾರ ಹಾಗೂ ರಾಜ್ಯಕ್ಕೆ ಆಗಿರುವ, ಆಗುತ್ತಿರುವ ಅನ್ಯಾಯ ಪ್ರಸ್ತಾಪ ಮಾಡುತ್ತಾರೆ. ನ್ಯಾಯ ಒದಗಿಸಲು ಮನವಿ ಮಾಡುತ್ತಾರೆ. ಯಾವುದೇ ಕಾರಣದಿಂದಲೂ ಗ್ಯಾರಂಟಿ ಯೋಜನೆಗಳನ್ನು ಸರ್ಕಾರ ಕೈಬಿಡುವ ಪ್ರಶ್ನೆಯೇ ಇಲ್ಲ. ಇನ್ನೂ ಮೂರು ವರ್ಷ ಸೇರಿ ಮುಂದಿನ ಎಂಟು ವರ್ಷ ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರವೇ ಅಧಿಕಾರದಲ್ಲಿ ಇರುತ್ತದೆ’ ಎಂದು ವಿಶ್ವಾಸ ವ್ಯಕ್ತಪಡಿಸಿದರು.

‘ಚುನಾವಣೆಗೆ ಮುಂಚಿತವಾಗಿ ದೇವಸ್ಥಾನಕ್ಕೆ ಬಂದಿದ್ದೆವು. ದೇವರಿಗೆ ಸಲ್ಲಿಸಿದ ಪ್ರಾರ್ಥನೆಯಂತೆ ರಾಜ್ಯದಲ್ಲಿ ಅಧಿಕಾರಕ್ಕೆ ಬಂದೆವು. ಐದು ಗ್ಯಾರಂಟಿ ಕೊಡಲು, ಆಡಳಿತ ಮಾಡಲು ತಾಯಿ ಮೂಕಾಂಬಿಕೆ ಅವಕಾಶ ಕೊಟ್ಟಿದ್ದಾಳೆ. ಇಡಗುಂಜಿ ಗಣಪತಿ, ಮುರುಡೇಶ್ವರ ಶಿವನ ದರ್ಶನವನ್ನೂ ಮಾಡುತ್ತೇನೆ. ಉಪ ಚುನಾವಣೆ ಫಲಿತಾಂಶದ ಬಗ್ಗೆ ಯಾವುದೇ ಯೋಚನೆ ಇಲ್ಲ. ನಮ್ಮ ಪ್ರಯತ್ನ ನಾವು ಮಾಡಿದ್ದೇವೆ. ದೇವರ ಫಲಕ್ಕೆ ಕಾಯುತ್ತೇವೆ’ ಎಂದರು.

‘ಚುನಾವಣಾ ಸಮೀಕ್ಷೆಗಳ ಬಗ್ಗೆ ನನಗೆ ನಂಬಿಕೆ ಇಲ್ಲ. ಕರ್ನಾಟಕ ಸೇರಿದಂತೆ ಎಲ್ಲ ಕಡೆ ನಡೆದಿರುವ ಸಮೀಕ್ಷೆಗಳು ಏನಾಯ್ತು? ಉತ್ತರ ಪ್ರದೇಶ, ಹರಿಯಾಣದಲ್ಲಿ ಏನಾಯ್ತು? ಸಮೀಕ್ಷೆ ಕಟ್ಟಿಕೊಂಡು ರಾಜಕೀಯ ಮಾಡುವುದಕ್ಕೆ ಆಗದು. ಸಮೀಕ್ಷೆಯವರ ವ್ಯವಸ್ಥೆಯೇ ಬೇರೆ ಇರುತ್ತದೆ. ನಮ್ಮ ನಿರೀಕ್ಷೆ ಬೇರೆಯೇ ಇರುತ್ತದೆ. ಜನರ ಹೃದಯ ಗೆದ್ದವರು ವಿಶ್ವಾಸ ಗೆದ್ದವರು ಗೋಪ್ಯ ಮತದಾನದಲ್ಲಿ ಗೆಲ್ಲುತ್ತಾರೆ’ ಎಂದರು.

ಪ್ರಶ್ನೆಯೊಂದಕ್ಕೆ ಉತ್ತರಿಸಿದ ಡಿ.ಕೆ.ಶಿವಕುಮಾರ್, ಹದಗೆಟ್ಟಿರುವ ಹೆಮ್ಮಾಡಿ -ಕೊಲ್ಲೂರು ರಸ್ತೆ ಅಭಿವೃದ್ಧಿ ಬಗ್ಗೆ ಗಮನಹರಿಸುವುದಾಗಿ ತಿಳಿಸಿದರು.

ಸಚಿವ ಮಂಕಾಳ ವೈದ್ಯ, ಮಾಜಿ ಶಾಸಕ ಕೆ.ಗೋಪಾಲ ಪೂಜಾರಿ, ಉದ್ಯಮಿ ಯು.ಬಿ.ಶೆಟ್ಟಿ, ಎಂ.ಎ.ಗಫೂರ್, ಅಶೋಕ್ಕುಮಾರ ಕೊಡವೂರು, ದಿನೇಶ್ ಹೆಗ್ಡೆ ಮೊಳಹಳ್ಳಿ, ಪ್ರಸಾದ್ ಕಾಂಚನ್, ಎಸ್.ರಾಜು ಪೂಜಾರಿ, ಕಿಶನ್ ಹೆಗ್ಡೆ ಕೊಳ್ಕೆಬೈಲ್ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.