ಬ್ರಹ್ಮಾವರ: ವಿದ್ಯಾರ್ಥಿಗಳು ಹದಿಹರೆಯದಲ್ಲಿ ಶಿಸ್ತು, ಸಂಯಮ, ತಾಳ್ಮೆ ಬೆಳೆಸಿಕೊಂಡು ಏಕಾಗ್ರತೆಯಿಂದ ಅಭ್ಯಾಸ ಮಾಡಿದಲ್ಲಿ ಉನ್ನತ ವ್ಯಕ್ತಿತ್ವ ಹೊಂದಲು ಸಾಧ್ಯ ಎಂದು ಬಸ್ರೂರು ಶಾರದಾ ಪದವಿ ಕಾಲೇಜಿನ ನಿವೃತ್ತ ಪ್ರಾಂಶುಪಾಲ ಗಣಪಯ್ಯ ಶೆಟ್ಟಿ ಹೇಳಿದರು.

ಮಂದಾರ್ತಿಯಲ್ಲಿ ನಡೆದ ಬ್ರಹ್ಮಾವರ ಸರ್ಕಾರಿ ಪದವಿಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕದ 2024-25ನೇ ಸಾಲಿನ ವಾರ್ಷಿಕ ವಿಶೇಷ ಶಿಬಿರದ ಸಮಾರೋಪ ಸಮಾರಂಭದಲ್ಲಿ ಅವರು ಮಾತನಾಡಿದರು.

ಎನ್ಎಸ್ಎಸ್ ಘಟಕದ ಯೋಜನಾಧಿಕಾರಿ ಸವಿತಾ ಎರ್ಮಾಳ್ ಅಭಿನಂದನೆ ಸಲ್ಲಿಸಿದರು. ಶಿಬಿರಾರ್ಥಿಗಳಾದ ಪೃಥ್ವಿಕ್, ಗಗನ್, ಅರ್ಜುನ್, ಅಭಿಷೇಕ್, ಅನಘ, ವಾಣಿಜ್ಯ ವಿಭಾಗ ಪ್ರಥಮ ವರ್ಷದ ಶಮಿತಾ, ಮನಿಷಾ ಅನಿಸಿಕೆಗಳನ್ನು ಹೇಳಿದರು.

ಬ್ರಹ್ಮಾವರ ಸರ್ಕಾರಿ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ರವೀಂದ್ರ ಉಪಾಧ್ಯ ಅಧ್ಯಕ್ಷತೆ ವಹಿಸಿದ್ದರು.

ಶಿಬಿರಕ್ಕೆ ಸ್ಥಳಾವಕಾಶ ನೀಡಿದ ಶ್ರೀಪತಿ ಅಡಿಗ ದಂಪತಿಯನ್ನು ಸನ್ಮಾನಿಸಲಾಯಿತು. ಯೋಗ ತರಬೇತುದಾರರಾಗಿ ಸಹಕರಿಸಿದ ರಶ್ಮಿ ಅಡಿಗ ಮತ್ತು ಶಿಬಿರಾರ್ಥಿಗಳಿಗೆ ಪ್ರೇರಣೆ ನೀಡಿದ ಗಣಪಯ್ಯ ಶೆಟ್ಟಿ ಅವರನ್ನು ಗೌರವಿಸಲಾಯಿತು. ಶಿಬಿರಾರ್ಥಿಗಳಾದ ಪ್ರತಿಭಾ, ನೇಹಾ, ಶ್ರಾವ್ಯ ಎನ್ಎಸ್ಎಸ್ ಗೀತೆ ಹಾಗೂ ಭಾವೈಕ್ಯತಾ ಗೀತೆ ಹಾಡಿದರು.

ವರ್ಷಾ ಸ್ವಾಗತಿಸಿದರು. ಸುಹಾನಿ ಕಾರ್ಯಕ್ರಮ ನಿರೂಪಿಸಿದರು. ರೋಹಿತ್ ಕುಮಾರ್ ವಂದಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.