ಪಡುಬಿದ್ರಿ: ಇಲ್ಲಿನ ಕಡಲ್ ಫಿಶ್ ಕ್ರಿಕೆಟರ್ಸ್ ವತಿಯಿಂದ ಪಡುಬಿದ್ರಿ ಬೋರ್ಡ್ ಶಾಲಾ ಮೈದಾನದಲ್ಲಿ 3 ದಿನ ನಡೆಯುವ ‘ಕಡಲ್ ಫಿಶ್ ಟ್ರೋಫಿ 2024’ ರಾಷ್ಟ್ರಮಟ್ಟದ ಹೊನಲು ಬೆಳಕಿನ ಟೆನ್ನಿಸ್ ಬಾಲ್ ಕ್ರಿಕೆಟ್ ಟೂರ್ನಿಗೆ ಶನಿವಾರ ಅದ್ದೂರಿ ಚಾಲನೆ ದೊರೆಯಿತು.

ಪಡುಬಿದ್ರಿ ಬಂಟರ ಸಂಘದ ಮಾಜಿ ಅಧ್ಯಕ್ಷ ನವೀನ್ಚಂದ್ರ ಜೆ. ಶೆಟ್ಟಿ ಚಾಲನೆ ನೀಡಿದರು. ಕಡಲ್ ಫಿಶ್ ಕ್ರಿಕೆಟರ್ಸ್ ಸ್ಥಾಪಕಾಧ್ಯಕ್ಷ ಚೇತನ್ ಕುಮಾರ್ ಅಧ್ಯಕ್ಷತೆ ವಹಿಸಿದ್ದರು.

ಉಡುಪಿ, ಮಂಗಳೂರು, ಬೆಂಗಳೂರು, ಮಧ್ಯಪ್ರದೇಶ, ಮಹಾರಾಷ್ಟ್ರ, ಶ್ರೀಲಂಕಾದ 15 ತಂಡಗಳು ಭಾಗವಹಿಸಿದ್ದು, ಉದ್ಘಾಟನಾ ಪಂದ್ಯದಲ್ಲಿ ಶ್ರೀಲಂಕಾ ಹಾಗೂ ಕರ್ನಾಟಕದ ಆಟಗಾರರನ್ನು ಒಳಗೊಂಡ ಭಾರತ ತಂಡದ ನಡುವೆ ಪ್ರದರ್ಶನ ಪಂದ್ಯ ನಡೆಯಿತು. ಪಂದ್ಯದಲ್ಲಿ ಉತ್ತಮ ಬೌಲಿಂಗ್ ಮಾಡುವ ಮೂಲಕ ಶ್ರೀಲಂಕಾ ತಂಡ ಜಯ ಗಳಿಸಿತು.

ಗ್ರಾಮ ಪಂಚಾಯಿತಿ ಅಧ್ಯಕ್ಷೆ ಶಶಿಕಲಾ ಪೂಜಾರಿ, ಮಾಜಿ ಉಪಾಧ್ಯಕ್ಷ ವೈ. ಸುಕುಮಾರ್, ಕಲ್ಲಟೆ ಶ್ರೀಧರ್ಮ ಜಾರಂದಾಯ ಸೇವಾ ಸಮಿತಿ ಅಧ್ಯಕ್ಷ ಸಂತೋಷ್ ಕುಮಾರ್ ಶೆಟ್ಟಿ, ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಪ್ರಕಾಶ್ ಶೆಟ್ಟಿ ಪಾದೆಬೆಟ್ಟು, ಜಿಲ್ಲಾ ಟೆನಿಸ್ ಬಾಲ್ ಕ್ರಿಕೆಟ್ ಅಸೋಸಿಯೇಷನ್ ಗೌರವಾಧ್ಯಕ್ಷ ಶರತ್ ಶೆಟ್ಟಿ, ಠಾಣಾಧಿಕಾರಿ ಪ್ರಸನ್ನ ಪಿ.ಎಸ್, ಜಿಲ್ಲಾ ಕಾಂಗ್ರೆಸ್ ಮೀನುಗಾರರ ಸಮಿತಿ ಅಧ್ಯಕ್ಷ ವಿಶ್ವಾಸ್ ಅಮೀನ್, ಸುರತ್ಕಲ್ ತುಳುನಾಡ ಬಿರುವೆರ್ ಸಂಸ್ಥಾಪಕ ಲೊಕೇಶ್ ಕೊಡಿಕೆರೆ, ಬಂಟರ ಸಂಘದ ಕಾರ್ಯದರ್ಶಿ ಪ್ರಕಾಶ್ ಶೆಟ್ಟಿ ಪಡುಹಿತ್ಲು, ಕಾಪು ರಕ್ಷಣಾಪುರ ಜವನೆರ್ ಅಧ್ಯಕ್ಷ ನವೀನ್ ಶೆಟ್ಟಿ, ರಾಷ್ಟ್ರಮಟ್ಟದ ಕ್ರೀಡಾಪಟು ಪುಂಡಲೀಕ ಹೊಸಬೆಟ್ಟು, ಮಿಥುನ್ ಹೆಗ್ಡೆ, ರಮೀಜ್ ಹುಸೇನ್, ಕರುಣಾಕರ್ ಪೂಜಾರಿ, ಅಶ್ವಿನ್ ಕೋಟ್ಯಾನ್, ಪ್ರಶಾಂತ್ ಸಾಲ್ಯಾನ್, ರಚನ್ ಸಾಲ್ಯಾನ್, ಪ್ರೇಮ ವಾಸುದೇವ್ ಇದ್ದರು. ಸಂತೋಷ್ ಪಡುಬಿದ್ರಿ ಸ್ವಾಗತಿಸಿದರು. ಪ್ರಶಾಂತ್ ಸಾಲ್ಯಾನ್ ವಂದಿಸಿದರು. ಸಂತೋಷ್ ನಂಬಿಯಾರ್ ನಿರೂಪಿಸಿದರು.

ಲೀಗ್ ಮಾದರಿಯಲ್ಲಿ ಟೂರ್ನಿ ನಡೆಯಲಿದ್ದು, 18ರಂದು ಸಂಜೆ ಹೊನಲು ಬೆಳಕಿನಲ್ಲಿ ಫೈನಲ್ ಹಣಾಹಣಿ ನಡೆಯಲಿದೆ. ಟೂರ್ನಿಯ ವಿಜೇತ ತಂಡಕ್ಕೆ ಪ್ರಥಮ ₹5 ಲಕ್ಷ, ದ್ವಿತೀಯ ₹3 ಲಕ್ಷ, ಟ್ರೋಫಿ ನೀಡಿ ಗೌರವಿಸಲಾಗುವುದು. ಪಂದ್ಯಶ್ರೇಷ್ಠ, ಸರಣಿ ಶ್ರೇಷ್ಠ, ಉತ್ತಮ ದಾಂಡಿಗ, ಉತ್ತಮ ಎಸೆತಗಾರ ಪ್ರಶಸ್ತಿ ನೀಡಲಾಗುವುದು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.