ಉಡುಪಿ: ಪೇಜಾವರ ಮಠದ ವಿಶ್ವೇಶತೀರ್ಥ ಸ್ವಾಮೀಜಿ ಅವರಿಗೆ ಉಸಿರಾಟದಲ್ಲಿ ಸಮಸ್ಯೆ ಕಾಣಿಸಿಕೊಂಡಿದ್ದು ಮಣಿಪಾಲದ ಕೆಎಂಸಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ವಾಮೀಜಿ ಅವರ ಶ್ವಾಸಕೋಶದಲ್ಲಿ ಕಫ ತುಂಬಿಕೊಂಡಿದ್ದು ಚಿಕಿತ್ಸೆ ನೀಡಲಾಗುತ್ತಿದೆ. ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದೆ ಎಂದು ಶ್ರೀಗಳ ಆಪ್ತರು ತಿಳಿಸಿದ್ದಾರೆ.

ಸಚಿವ ಭೇಟಿ

ಸಚಿವ ಕೋಟ ಶ್ರೀನಿವಾಸ ಪೂಜಾರಿ ಶುಕ್ರವಾರ ಬೆಳಿಗ್ಗೆ ಮಣಿಪಾಲದ ಕೆಎಂಸಿ ಆಸ್ಪತ್ರೆಗೆ ಭೇಟಿನೀಡಿ ವೈದ್ಯರಿಂದ ಪೇಜಾವರ ಶ್ರೀಗಳ ಆರೋಗ್ಯ ಪರಿಸ್ಥಿತಿ ಕುರಿತು ಮಾಹಿತಿ ಪಡೆದರು.

ಶನಿವಾರ ಸಂಜೆ 4ಕ್ಕೆ ಮುಖ್ಯಮಂತ್ರಿ ಯಡಿಯೂರಪ್ಪ ಆಸ್ಪತ್ರೆಗೆ ಭೇಟಿ ನೀಡಲಿದ್ದಾರೆ. ಶ್ರೀಗಳ ಅನಾರೋಗ್ಯ ಸುದ್ದಿ ತಿಳಿಯುತ್ತಿದ್ದಂತೆ ಗಣ್ಯರು, ಜನಪ್ರತಿನಿಧಿಗಳು ಆಸ್ಪತ್ರೆಗೆ ದೌಡಾಯಿಸುತ್ತಿದ್ದಾರೆ. ಪೇಜಾವರ ಶ್ರೀಗಳಿಗೆ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಮುಂದುವರಿದಿದೆ.

ಹೆಲ್ತ್ ಬುಲೆಟಿನ್ ಬಿಡುಗಡೆ

ಮಣಿಪಾಲ ಆಸ್ಪತ್ರೆಯು ಸ್ವಾಮೀಜಿ ಆರೋಗ್ಯ ಸ್ಥಿತಿಗತಿಯ ಮಾಹಿತಿ ನೀಡುವ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಿದೆ. ‘ಸ್ವಾಮೀಜಿ ಆರೋಗ್ಯ ಸ್ಥಿತಿ ಗಂಭೀರವಾಗಿದೆ. ಅವರ ಶ್ವಾಸಕೋಶದಲ್ಲಿ ಕಫ ತುಂಬುಕೊಂಡಿದೆ. ವೆಂಟಿಲೇಟರ್ ಅಳವಡಿಸಲಾಗಿದ್ದು,ಆಂಟಿಬಯೋಟಿಕ್ ಬಳಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಆಸ್ಪತ್ರೆ ಪ್ರಕಟಣೆ ತಿಳಿಸಿದೆ.

ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಅವರು ಪೇಜಾವರ ಸ್ವಾಮೀಜಿ ಶೀಘ್ರವಾಗಿ ಗುಣಮುಖರಾಗಲಿ ಎಂದು ಪ್ರಾರ್ಥಿಸಿ ಟ್ವೀಟ್ ಮಾಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.