ಉಡುಪಿ: ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪಿ ಸಾಹಿಲ್ ಎಂಬಾತನಿಗೆ ಉಡುಪಿ ಜಿಲ್ಲಾ ಹೆಚ್ಚುವರಿ ನ್ಯಾಯಾಲಯದ ಪೋಕ್ಸೊ ತ್ವರಿತಗತಿ ವಿಶೇಷ ನ್ಯಾಯಾಲಯದ ನ್ಯಾಯಾಧೀಶರಾದ ಶ್ರೀನಿವಾಸ ಸುವರ್ಣ 20 ವರ್ಷಗಳ ಜೈಲು ಶಿಕ್ಷೆ ವಿಧಿಸಿದ್ದಾರೆ.

ಘಟನೆ ವಿವರ:

ಬಾಲಕಿಯನ್ನು ಪ್ರೀತಿಸುವುದಾಗಿ ಮದುವೆಯಾಗುವುದಾಗಿ ನಂಬಿಸಿದ ಆರೋಪಿ ಹಾಡಿಗೆ ಕರೆದುಕೊಂಡು ಹೋಗಿ ದೈಹಿಕ ಸಂಪರ್ಕ ಬೆಳೆಸಿದ್ದ. ಬಳಿಕ ಪುಸಲಾಯಿಸಿ ಹಲವು ಬಾರಿ ದೈಹಿಕ ಸಸಂಪರ್ಕ ನಡೆಸಿದ್ದ. ಈವಿಚಾರ ತಿಳಿದ ಬಾಲಕಿಯ ತಾಯಿ ಸಾಹಿಲ್ ವಿರುದ್ಧ ದೂರು ನೀಡಿದ್ದರು. ಬೈಂದೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿ ತನಿಖೆ ನಡೆದು ನ್ಯಾಯಾಲಯಕ್ಕೆ ದೋಷಾರೋಪಣ ಪಟ್ಟಿ ಸಲ್ಲಿಕೆಯಾಗಿತ್ತು.

ಪ್ರಕರಣದಲ್ಲಿ ಸಾಂದರ್ಭಿಕ ಸಾಕ್ಷ್ಯ ಪರಿಗಣಿಸಿದ ನ್ಯಾಯಾಧೀಶರು ಸಾಹಿಲ್ನನ್ನು ದೋಷಿ ಎಂದು ತೀರ್ಮಾನಿಸಿ 20 ವರ್ಷ ಕಠಿಣ ಶಿಕ್ಷೆ ಹಾಗೂ ನೊಂದ ಬಾಲಕಿಗೆ 1.50 ಲಕ್ಷ ಪರಿಹಾರ ನೀಡುವಂತೆ ಸರ್ಕಾರಕ್ಕೆ ಆದೇಶಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.