ಉಡುಪಿ: ಕರ್ನಾಟಕದ ಮೀನುಗಾರರ ಮೇಲೆ ಅನ್ಯರಾಜ್ಯದ ಮೀನುಗಾರರು ಮಾಡಿರುವ ಹಲ್ಲೆಯನ್ನು ರಾಜ್ಯ ಸರ್ಕಾರ ಗಂಭೀರವಾಗಿ ಪರಿಗಣಿಸಿ ಕಾನೂನು ಕ್ರಮ ಜರುಗಿಸಬೇಕು ಎಂದು ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಒತ್ತಾಯಿಸಿದ್ದಾರೆ.

ಫೆ.8ರಂದು ಕನ್ಯಾಕುಮಾರಿ ನೇರವಾಗಿ 50 ನಾಟಿಕಲ್ ಮೈಲು ದೂರದಲ್ಲಿ ಆಳ ಸಮುದ್ರ ಮೀನುಗಾರಿಕೆ ಮಾಡುತ್ತಿದ್ದ ರಾಜ್ಯದ ಮೀನುಗಾರರ ಬೋಟ್‌ಗಳನ್ನು ಸುತ್ತುವರಿದ ಅನ್ಯ ರಾಜ್ಯಗಳ ಮೀನುಗಾರರು ಹಲ್ಲೆ ನಡೆಸಿದ್ದಾರೆ. ಬೋಟುಗಳಿಗೆ ಹಾನಿ ಮಾಡಿ ಲಕ್ಷಾಂತರ ರೂಪಾಯಿ ಮೌಲ್ಯದ ಮೀನುಗಳನ್ನು ದೋಚಿದ್ದಾರೆ.

ಹಲ್ಲೆ ನಡೆಸಿದವರ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸಬೇಕು. ಮೀನುಗಾರರಿಗೆ ಆಗಿರುವ ನಷ್ಟವನ್ನು ಭರಿಸಬೇಕು, ಮುಂದೆ ಇಂತಹ ಅಹಿತಕರ ಘಟನೆಗಳು ನಡೆಯದಂತೆ ಕ್ರಮ ತೆಗೆದುಕೊಳ್ಳಬೇಕು ಎಂದು ಮನವಿಯಲ್ಲಿ ಮಧ್ವರಾಜ್ ಆಗ್ರಹಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.