ಉಡುಪಿ: ‘ತಾರುಣ್ಯದಲ್ಲಿ ಸ್ತ್ರೀ ಸಂಗವಿತ್ತು. ಪದ್ಮಾ ಎಂಬ ಹೆಣ್ಣುಮಗಳು ತಮಿಳುನಾಡಿನಲ್ಲಿದ್ದಾಳೆ ಎಂಬ ಸುದ್ಧಿಗಳು ಸುಳ್ಳು. ಈ ಆರೋಪಗಳು ಸಾಬೀತಾದರೆ ಪೀಠತ್ಯಾಗಕ್ಕೆ ಸಿದ್ಧ ಎಂದು ಪೇಜಾವರ ಮಠದ ವಿಶ್ವೇಶ ತೀರ್ಥ ಶ್ರೀಗಳು ಸೋಮವಾರ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಶಿರೂರು ಮಠದ ಲಕ್ಷ್ಮೀವರ ತೀರ್ಥರ ಆಪ್ತವರ್ಗವು ಬಹಿರಂಗಗೊಳಿಸಿದ ಆಡಿಯೋದಲ್ಲಿರುವುದು ಸತ್ಯವಲ್ಲ. ಇದು ಕಲ್ಪನೆ ಅಷ್ಟೆ. ಡಿಸೆಂಬರ್ನಲ್ಲಿ ಇವರೇ ಕಳುಹಿಸಿರಬಹುದು ಎನ್ನಲಾದ ಪತ್ರದಲ್ಲಿ ಗಂಡುಮಗನ ಹೆಸರನ್ನು ಉಲ್ಲೇಖಿಸಲಾಗಿತ್ತು. ಇದನ್ನು ದೇಶದ ಯಾರೂ ನಂಬುವುದಿಲ್ಲ ಎಂದು ಗೊತ್ತಿದೆ. ಈ ಬಗ್ಗೆ ಯಾವ ವಿಚಾರಣೆ ಹಾಗೂಪರೀಕ್ಷೆಯನ್ನು ಎದುರಿಸಲು ನಾನು ಸಿದ್ಧನಿದ್ದೇನೆ ಎಂದು ಪೇಜಾವರ ಶ್ರೀಗಳು ಹೇಳಿದ್ದಾರೆ.

ಲಕ್ಷೀವರ ತೀರ್ಥರ ನಿಧನದ ನಂತರ ಅವರ ಅವ್ಯವಹಾರದ ಬಗ್ಗೆ ಹೇಳಿಕೆ ನೀಡಿರುವುದು ಸರಿಯಿಲ್ಲ ಎಂದು ಕೆಲವರು ಆಕ್ಷೇಪಿಸಿದ್ದಾರೆ. ಲಕ್ಷೀವರ ತೀರ್ಥರಿಗೆ ವಿಠಲ ದೇವರನ್ನು ಯಾಕೆ ಕೊಟ್ಟಿಲ್ಲ? ಅವರ ಅಂತ್ಯದರ್ಶನಕ್ಕೆ ಯಾಕೆ ಹೋಗಿಲ್ಲ. ಹೀಗೆ ಹಲವು ಪ್ರಶ್ನೆ, ಆಕ್ಷೇಪವನ್ನು ಮಾದ್ಯಮದವರು ಮಾಡಿದ್ದಾರೆ. ಶಿರೂರು ಶ್ರೀಗಳು ಸನ್ಯಾಸ ಧರ್ಮವನ್ನು ಪೂರ್ಣವಾಗಿ ಉಲ್ಲಂಘಿಸಿದ್ದು, ಅದನ್ನು ಅನಿವಾರ್ಯವಾಗಿ ನಾನು ವಿವರಿಸಬೇಕಾಯಿತು ಎಂದಿದ್ದಾರೆ.

ಹಿಂದಿನ ಪಲಿಮಾರು ಸ್ವಾಮೀಜಿಗಳಾದ ರಘುವಲ್ಲಭ ತೀರ್ಥರು, ಹಿಂದಿನ ಶೀರೂರು ಸ್ವಾಮೀಜಿ ಮನೋಜ್ಞ ತೀರ್ಥರು, ಸುಬ್ರಹ್ಮಣ್ಯ ಮಠದ ಸ್ವಾಮೀಜಿ ವಿದ್ಯಾಭೂಷಣರು ಪೀಠ ತ್ಯಾಗ ಮಾಡುವ ಹಿಂದೆ ನನ್ನ ಪಾತ್ರ ಇಲ್ಲ. ಅವರನ್ನು ಪೀಠದಲ್ಲಿ ಉಳಿಸಲು ಎಲ್ಲ ಪ್ರಯತ್ನ ಮಾಡಿದ್ದೇನೆ. ಅವರಾಗಿ ಸ್ವಇಚ್ಛೆಯಿಂದ ಹೊರಹೋಗಿದ್ದಾರೆ. ಅದಕ್ಕಾಗಿ ನನ್ನನ್ನು ಹಂತಕನನ್ನಾಗಿ ದೂಷಿಸುವುದು ಸರ್ವಥಾ ತಪ್ಪು ಎಂದು ಪೇಜಾವರ ಶ್ರೀಗಳು ಅಸಮಾಧಾನ ಹೊರಹಾಕಿದ್ದಾರೆ.

ರಘುವಲ್ಲಭರಿಗೆ 5 ಲಕ್ಷ ಕೊಟ್ಟಿರುವೆ ಎಂದುಆರೋಪಿಸುವುದು ಸುಳ್ಳು. ಅವರಿಗೆ ಇದಕ್ಕಾಗಿ ಒಂದು ಪೈಸೆ ಕೂಡ ಕೊಟ್ಟಿಲ್ಲ. ವಿಶ್ವ ವಿಜಯರನ್ನು ನಾನು ಕಳುಹಿಸಿಯೇ ಇಲ್ಲ. ಅವರಾಗಿಯೇ ಹೋಗಿದ್ದಾರೆ. ಮಠದಿಂದ ಹೊರಹೋದರೆ ಅನೇಕ ಸಮಸ್ಯೆಯಾಗುವುದು ಎಂದು ನಾನು ಮೊದಲೇ ಹೇಳಿದ್ದೆ. ಆದರೂ ಹೋದರು. ಮರಳಿ ಬಂದರೆ ಸೂಕ್ತ ವ್ಯವಸ್ಥೆಯನ್ನು ಮಾಡುವುದಾಗಿಯೂ ಹೇಳಿದೆ. ಆದರೆ ಅವರು ನನಗೆ ತಿಳಿಸದೆ ಪೀಠತ್ಯಾಗ ಮಾಡಿದರು ಎಂದು ತಿಳಿಸಿದ್ದಾರೆ.

ವ್ಯಾಸರಾಜ ಸ್ವಾಮೀಜಿಗಳ ಆಶ್ರಮ, ಸುವಿದ್ಯೇಂದ್ರರ ಆಶ್ರಮ ಸ್ವೀಕಾರ ಮತ್ತು ಪೀಠತ್ಯಾಗದಲ್ಲಿ ನನ್ನ ಪಾತ್ರ ಕಿಂಚಿತ್ತೂ ಇಲ್ಲ. ಅದರೂ ಇದೆಲ್ಲವುಗಳಿಗೂ ನಾನೇ ಕಾರಣ ಎಂದು ದೂಷಿಸುವುದು ಸರ್ವಥಾ ಸರಿಯಲ್ಲ. ಶಿರೂರು ಸ್ವಾಮಿಜಿಯಿಂದ ಯಾವುದೇ ರೀತಿಯ ಹಣವನ್ನು ಅಪೇಕ್ಷಿಸಲೂ ಇಲ್ಲ; ಕೇಳಲೂ ಇಲ್ಲ. ಇದೆಲ್ಲದರ ಬಗ್ಗೆಯೂ ಬಹಿರಂಗ ವಿಚಾರಣೆಗೆ ನಾನು ಯಾವಾಗಲೂ ಸಿದ್ಧ ಎಂದುವಿಶ್ವೇಶತೀರ್ಥ ಸ್ವಾಮೀಜಿ ಹೇಳಿದ್ದಾರೆ.

* ಇವನ್ನೂ ಓದಿ...

*ಅಷ್ಟಮಠಗಳ ವಿರುದ್ಧ ಸ್ಫೋಟಕ ಆಡಿಯೊ ಬಹಿರಂಗ

*ಶಿರೂರು ಮಠದ ಲಕ್ಷ್ಮೀವರ ತೀರ್ಥರ ಸಾವಿನ ಸುತ್ತಾ...

*ಪೇಜಾವರ ಶ್ರೀಗಳು ಹಿರಿತನ ಪ್ರದರ್ಶಿಸಲಿ

*ಶಿರೂರು ಮೂಲಮಠಕ್ಕೆ ಖಾಕಿ ದಿಗ್ಭಂಧನ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.