ಉಡುಪಿ: ಇಂದ್ರಾಳಿ ರೈಲ್ವೆ ಮೇಲ್ಸೇತುವೆ ಕಾಮಗಾರಿ ವಿಳಂಬ ಖಂಡಿಸಿ ಇಂದ್ರಾಳಿ ಸೇತುವೆ ಹೋರಾಟ ಸಮಿತಿ ವತಿಯಿಂದ ಮಂಗಳವಾರ ಕಾಮಗಾರಿ ಸ್ಥಳದಲ್ಲಿ ಬೃಹತ್ ಪ್ರತಿಭಟನಾ ಸಭೆ ನಡೆಯಿತು.

ವಿವಿಧ ಸಂಘಟನೆಗಳ ಮುಖಂಡರು, ವಿದ್ಯಾರ್ಥಿಗಳು, ಸಾರ್ವಜನಿಕರು ಪಾಲ್ಗೊಂಡಿದ್ದರು.

ಇಂದ್ರಾಳಿ ರೈಲ್ವೆ ಮೇಲ್ಸೇತುವೆ ಯನ್ನು ಚತುಷ್ಪಥಗೊಳಿಸದೇ ಕಾಮಗಾರಿಯನ್ನು ಬಹುತೇಕ ಸ್ಥಗಿತಗೊಳಿಸಿ ವರ್ಷಗಳೇ ಸಂದಿವೆ. ರಸ್ತೆ ಅವ್ಯವಸ್ಥೆ ಯು ಸಾವು ನೋವಿಗೂ ಕಾರಣವಾಗಿವೆ. ದಿನನಿತ್ಯ ವಾಹನ ದಟ್ಟಣೆಯಿಂದ ಜನರು ಬಸವಳಿದಿದ್ದಾರೆ ಈ ಕಾರಣಕ್ಕೆ ಪ್ರತಿಭಟನೆ ಹಮ್ಮಿಕೊಂಡಿರುವುದಾಗಿ ಪ್ರತಿಭಟನಕಾರರು ತಿಳಿಸಿದರು.

ಮೂರು ತಿಂಗಳೊಳಗೆ ಮೇಲ್ಸೇತುವೆ ಕಾಮಗಾರಿ ಪೂರ್ಣಗೊಳಿಸದಿದ್ದರೆ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು.

ಬಳಿಕ ಪ್ರತಿಭಟನಕಾರರು ಕೆಲಕಾಲ ರಸ್ತೆ ತಡೆ ನಡೆಸಿದರು.

ಅಮೃತ್ ಶೆಣೈ, ರಮೇಶ್ ಕಾಂಚನ್, ಡಾ.ಪಿ.ವಿ. ಭಂಡಾರಿ, ಜ್ಯೋತಿ ಹೆಬ್ಬಾರ್ ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.