ಉಡುಪಿ: ಆಗುಂಬೆ ಘಾಟಿಯಲ್ಲಿ ಆ.31ರವರೆಗೆ ಭಾರಿ ವಾಹನಗಳ ಸಂಚಾರವನ್ನು ನಿಷೇಧಿಸಿ ಜಿಲ್ಲಾಧಿಕಾರಿ ಎಂ.ಕೂರ್ಮಾರಾವ್ ಆದೇಶ ಹೊರಡಿಸಿದ್ದಾರೆ.

ಆಗುಂಬೆ ಘಾಟಿಯ ಮೇಲೆ ಹಾದುಹೋಗಿರುವ ರಾಷ್ಟ್ರೀಯ ಹೆದ್ದಾರಿ 169 ‘ಎ’ 11ನೇ ತಿರುವಿನಲ್ಲಿ ಭೂಕುಸಿತವಾಗಿದ್ದರಿಂದ ಜುಲೈ 30ರವರೆಗೆ ಬಸ್ಗಳು ಸೇರಿದಂತೆ ಭಾರಿ ವಾಹನಗಳ ಸಂಚಾರವನ್ನು ನಿರ್ಬಂಧಿಸಿ ಲಘು ವಾಹನಗಳ ಸಂಚಾರಕ್ಕೆ ಮಾತ್ರ ಅವಕಾಶ ನೀಡಲಾಗಿತ್ತು.

ಸಾರ್ವಜನಿಕರಿಂದ ಬಸ್ಗಳ ಸಂಚಾರಕ್ಕೆ ಅನುಮತಿ ನೀಡುವಂತೆ ಬೇಡಿಕೆ ಬಂದಿರುವ ಹಿನ್ನೆಲೆಯಲ್ಲಿ ಘಾಟಿಯಲ್ಲಿ ಬಸ್ಗಳು ಸೇರಿದಂತೆ ಲಘು ವಾಹನಗಳ ಸಂಚಾರಕ್ಕೆ ಮಾತ್ರ ಅವಕಾಶ ನೀಡಲಾಗಿದ್ದು, ಭಾರಿ ವಾಹನಗಳ ಸಂಚಾರಕ್ಕೆ ನಿರ್ಬಂಧ ಮುಂದುವರಿಸಲಾಗಿದೆ. ಈ ಆದೇಶ ಆ.31ರವರೆಗೆ ಚಾಲ್ತಿಯಲ್ಲಿರಲಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.