ಉಡುಪಿ: ಶ್ರೀಕೃಷ್ಣ ಮಠದ ಪರ್ಯಾಯ ಮಹೋತ್ಸವಕ್ಕೆ ರಾಜ್ಯ ಸರ್ಕಾರ ಸಂಪೂರ್ಣ ಸಹಕಾರ ನೀಡುತ್ತಿದ್ದು, ₹10 ಕೋಟಿ ಅನುದಾನ ಬಿಡುಗಡೆ ಮಾಡಲಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ ಹೇಳಿದರು.

ನಗರದಲ್ಲಿ ಬುಧವಾರ ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿದ ಅವರು, ನಗರೋತ್ಥಾನ ಯೋಜನೆಯಡಿ ಉಡುಪಿ ನಗರದ ಅಭಿವೃದ್ಧಿಗೆ ₹ 30 ಕೋಟಿ ಬಿಡುಗಡೆ ಮಾಡಲಾಗಿದೆ. ಪರ್ಯಾಯ ಮಹೋತ್ಸವಕ್ಕೂ ಅನುದಾನ ಬಿಡುಗಡೆ ಮಾಡಲು ಮುಖ್ಯಮಂತ್ರಿ ಕ್ರಮವಹಿಸಲಿದ್ದಾರೆ ಎಂದರು.

ಕಾರಣಾಂತರಗಳಿಂದ ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿ ಅವರು ಪರ್ಯಾಯ ಮಹೋತ್ಸವದಲ್ಲಿ ಪಾಲ್ಗೊಳ್ಳುತ್ತಿಲ್ಲ. ಗೃಹ ಸಚಿವ ಜಿ.ಪರಮೇಶ್ವರ್ ಪರ್ಯಾಯ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ ಎಂದು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.