ಬ್ರಹ್ಮಾವರ: ಯಕ್ಷಗಾನದ ಪರಂಪರೆ, ಶಿಸ್ತು ಕಾಪಾಡುವಲ್ಲಿ ಸಾಲಿಗ್ರಾಮ ಮಕ್ಕಳ ಮೇಳದ ಯಕ್ಷ ಪಯಣ ಸಾರ್ಥಕವಾದುದು. ಹಾರಾಡಿ ಮಟಪಾಡಿ ತಿಟ್ಟುಗಳ ಪರಂಪರೆಗೆ ಸುವರ್ಣ ಸ್ಪರ್ಶದ ಮೆರುಗನ್ನು ತಂಡ ನೀಡಿದೆ ಎಂದು ಕರ್ನಾಟಕ ಯಕ್ಷಗಾನ ಅಕಾಡೆಮಿ ಅಧ್ಯಕ್ಷ ತಲ್ಲೂರು ಶಿವರಾಮ ಶೆಟ್ಟಿ ಹೇಳಿದರು.

ಸಾಲಿಗ್ರಾಮ ಗುರುನರಸಿಂಹ ದೇವಸ್ಥಾನದ ಪ್ರಾಂಗಣದಲ್ಲಿ ಪಾರಂಪಳ್ಳಿಯ ಗಿರಿಜಾ ಶಂಕರ ನಾರಾಯಣ ಮಧ್ಯಸ್ಥ ಚಾರಿಟಬಲ್ ಟ್ರಸ್ಟ್, ಸಾಲಿಗ್ರಾಮ ಗುರು ನರಸಿಂಹ ದೇವಸ್ಥಾನದ ಆಡಳಿತ ಮಂಡಳಿ, ಕಾರ್ಕಡ ಗೆಳೆಯರ ಬಳಗದ ಜಂಟಿ ಆಶ್ರಯದಲ್ಲಿ ನಡೆದ ಕೋಟ ಸಾಲಿಗ್ರಾಮ ಮಕ್ಕಳ ಮೇಳದ 50ನೇ ವರ್ಷ ಸಂಭ್ರಮಾಚರಣೆಯ ‘ಸುವರ್ಣ ಪರ್ವ’ದ 3ನೇ ಕಾರ್ಯಕ್ರಮಕ್ಕೆ ಚೆಂಡೆ ಬಾರಿಸುವ ಮೂಲಕ ಚಾಲನೆ ನೀಡಿ ಅವರು ಮಾತನಾಡಿದರು.

ಉಡುಪ ಮತ್ತು ಹಂದೆ ಜೋಡಿ ಯಕ್ಷಗಾನ ಪರಂಪರೆಯಲ್ಲಿ ಐತಿಹಾಸಿಕ ದಾಖಲೆ ಮೆರೆದಿದೆ. ಯಕ್ಷಗಾನದ ಕುಣಿತ, ವೇಷಭೂಷಣಗಳ ನಿಜವಾದ ಚೆಲುವು ಮಕ್ಕಳ ಮೇಳದಲ್ಲಿ ಮಾತ್ರ ಕಾಣಲು ಸಾಧ್ಯ ಎಂದರು.

ಗುರುನರಸಿಂಹ ದೇವಸ್ಥಾನದ ಆಡಳಿತ ಮಂಡಳಿ ಅಧ್ಯಕ್ಷ ಡಾ.ಕೆ.ಎಸ್.ಕಾರಂತ ಅಧ್ಯಕ್ಷತೆ ವಹಿಸಿ ಮಾತನಾಡಿ, ಕಲೆ ಮಾನಸಿಕ ಸ್ವಾಸ್ಥ್ಯ ಕಾಪಾಡುವ ಶಕ್ತಿ ಹೊಂದಿದೆ. ಸಾಲಿಗ್ರಾಮ ಮಕ್ಕಳ ಮೇಳ ಐವತ್ತು ವರ್ಷಗಳಿಂದ ಜನ ಮನದ ಸ್ವಾಸ್ಥ್ಯ ಕಾಪಾಡುವಲ್ಲಿ ಯಶಸ್ವಿಯಾಗಿದೆ ಎಂದರು.

ನಿವೃತ್ತ ಶಿಕ್ಷಕ, ಯಕ್ಷಗುರು, ಲೇಖಕ ಮಣೂರಿನ ಎಂ.ಎನ್.ಮಧ್ಯಸ್ಥ ಅವರಿಗೆ ಮಕ್ಕಳ ಮೇಳದ ‘ಸುವರ್ಣ ಪರ್ವ ಪುರಸ್ಕಾರ’ ನೀಡಿ ಗೌರವಿಸಲಾಯಿತು. ನಿವೃತ್ತ ಅಂಚೆ ಪಾಲಕ, ಪ್ರಗತಿಪರ ಕೃಷಿಕ ಪಾರಂಪಳ್ಳಿ ಪಿ.ಸದಾಶಿವ ಮಧ್ಯಸ್ಥ, ಕೆನರಾ ಬ್ಯಾಂಕ್ ನಿವೃತ್ತ ಅಧಿಕಾರಿ ಲಕ್ಷ್ಮೀನಾರಾಯಣ ಮಧ್ಯಸ್ಥ ಪ್ರಶಸ್ತಿ ಪ್ರದಾನ ಮಾಡಿದರು.

ದಕ್ಷಿಣ ಕನ್ನಡ ಹಾಲು ಉತ್ಪಾದಕರ ಸಂಘದ ಮಾಜಿ ಅಧ್ಯಕ್ಷ ಐರೋಡಿ ಜಗದೀಶ ಕಾರಂತ, ಸಾಲಿಗ್ರಾಮ ಮಕ್ಕಳ ಮೇಳದ ಸ್ಥಾಪಕ ನಿರ್ದೇಶಕ ಎಚ್. ಶ್ರೀಧರ ಹಂದೆ, ಕೋಟ ಸಿಎ ಬ್ಯಾಂಕ್ ಅಧ್ಯಕ್ಷ ಡಾ.ಕೃಷ್ಣ ಕಾಂಚನ್, ಕಾರ್ಕಡ ಗೆಳೆಯರ ಬಳಗ ಅಧ್ಯಕ್ಷ ತಾರಾನಾಥ ಹೊಳ್ಳ, ಸಾಲಿಗ್ರಾಮ ಮಕ್ಕಳ ಮೇಳದ ಕಾರ್ಯಾಧ್ಯಕ್ಷ ಕೆ. ಮಹೇಶ ಉಡುಪ, ಅಧ್ಯಕ್ಷ ಬಲರಾಮ ಕಲ್ಕೂರ, ಶ್ರೀಕಾಂತ ಉಡುಪ ಇದ್ದರು.

ಮೇಳದ ನಿರ್ದೇಶಕ ಸುಜಯೀಂದ್ರ ಹಂದೆ ಸ್ವಾಗತಿಸಿದರು. ಉಪಾಧ್ಯಕ್ಷ ಜನಾರ್ದನ ಹಂದೆ ವಂದಿಸಿದರು. ಉಪನ್ಯಾಸಕ ರಾಘವೇಂದ್ರ ತುಂಗ ನಿರೂಪಿಸಿದರು. ಬಳಿಕ ಮಕ್ಕಳ ಮೇಳದ ಕಲಾವಿದರಿಂದ ನಿರ್ದೇಶಕ ದಿ.ಕಾರ್ಕಡ ಶ್ರೀನಿವಾಸ ಉಡುಪ ವಿರಚಿತ ‘ವೀರ ವೃಷಸೇನ’ ಯಕ್ಷಗಾನ ಪ್ರದರ್ಶನಗೊಂಡಿತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.