ಉಡುಪಿ: ಶಿರೂರು ಮಠದ ಲಕ್ಷ್ಮೀವರ ಸ್ವಾಮೀಜಿ ಆರಾಧನೋತ್ಸವ ಸೆ.5ರಂದು ಹಿರಿಯಡಕದಲ್ಲಿರುವ ಶಿರೂರು ಮೂಲಮಠದಲ್ಲಿ ನಡೆಯಲಿದೆ ಎಂದು ಸೋದೆ ವಾದಿರಾಜ ಮಠದ ಆಡಳಿತ ಮಂಡಳಿ ಸ್ಪಷ್ಟಪಡಿಸಿದೆ.

ಶಿರೂರು ಮೂಲಮಠವನ್ನು ಪೊಲೀಸರು ದ್ವಂದ್ವ ಮಠವಾಗಿರುವ ಸೋದೆ ಮಠಕ್ಕೆ ಹಸ್ತಾಂತರಿಸಿರುವ ಹಿನ್ನೆಲೆಯಲ್ಲಿ ಈ ತೀರ್ಮಾನವನ್ನು ಕೈಗೊಂಡಿದೆ. ಸೆ. 4ರಂದುಹೋಮ–ಹವನ ಸೇರಿದಂತೆ ಧಾರ್ಮಿಕ ಕಾರ್ಯಕ್ರಮಗಳನ್ನು ನಡೆಸಲಾಗುವುದು. ಬಳಿಕ ವೃಂದಾವನಕ್ಕೆ ಪೂಜೆ ಸಲ್ಲಿಸಿ, ಹವನಗಳ ಪ್ರಸಾದವನ್ನು ಸಮರ್ಪಿಸಲಾಗುವುದು ಎಂದು ತಿಳಿಸಿದ್ದಾರೆ.

ಸೆ.5ರಂದು ಶ್ರೀಗಳ ಆರಾಧನಾ ಮಹೋತ್ಸವ ನಡೆಯಲಿದೆ. ಅಂದು ಮಧ್ಯಾಹ್ನ ಮೂಲ ಮಠದಲ್ಲಿ ಭೋಜನ ವ್ಯವಸ್ಥೆ ಮಾಡಲಾಗುತ್ತದೆ ಎಂದು ಮಾಹಿತಿ ನೀಡಿದ್ದಾರೆ.

ಈ ಸಂಬಂಧ ಮೂಲ ಮಠ ಹಾಗೂ ಪರಿಸರವನ್ನು ಸ್ವಚ್ಛಗೊಳಿಸುವ ಕಾರ್ಯ ನಡೆಯುತ್ತಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.