ಶಿರ್ವ: ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮಾಣಿಬೆಟ್ಟು ಬಳಿ ಗುರುವಾರ ರಾತ್ರಿ ಸಿಡಿಲು ಬಡಿದು ಎಂಎಸ್ಆರ್ಎಸ್ ಕಾಲೇಜಿನ ದ್ವಿತೀಯ ವರ್ಷದ ಬಿಸಿಎ ವಿದ್ಯಾರ್ಥಿ, ರಕ್ಷಿತ್ ಪೂಜಾರಿ (20) ಮೃತಪಟ್ಟರು.

ಇವರು ಶಿರ್ವ ಮಾಣಿಬೆಟ್ಟು ತೋಟದಮನೆ ನಿವಾಸಿ ರಮೇಶ್ ಪೂಜಾರಿ ಅವರ ಪುತ್ರ.

ಸ್ನಾನಕ್ಕೆಂದು ಬಚ್ಚಲು ಮನೆ ಬಳಿ ನಿಂತಿದ್ದ ವೇಳೆ ಸಿಡಿಲು ಬಡಿದಿದೆ. ತಕ್ಷಣವೇ ಅವರನ್ನು ಮಣಿಪಾಲ ಆಸ್ಪತ್ರೆಗೆ ದಾಖಲಿಸಿದ್ದು, ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ. ರಕ್ಷಿತ್ ಕುಟುಂಬಕ್ಕೆ ಸರ್ಕಾರದಿಂದ ಸಿಗುವ ಪರಿಹಾರ ಕೊಡಿಸಲು ಪ್ರಯತ್ನಿಸುವುದಾಗಿ ಶಾಸಕ ಗುರ್ಮೆ ಸುರೇಶ್ ಶೆಟ್ಟಿ ತಿಳಿಸಿದ್ದಾರೆ.

ಶುಕ್ರವಾರ ಕಾಲೇಜಿನಲ್ಲಿ ಆಯೋಜಿಸಿದ್ದ ಸಂತಾಪ ಸೂಚಕ ಸಭೆಯಲ್ಲಿ ಪ್ರಾಚಾರ್ಯ ಮಿಥುನ್ ಚಕ್ರವರ್ತಿ, ಉಪನ್ಯಾಸಕರು ಹಾಗೂ ವಿದ್ಯಾರ್ಥಿಗಳು ರಕ್ಷಿತ್ಗೆ ಶ್ರದ್ಧಾಂಜಲಿ ಸಲ್ಲಿಸಿದರು. ಮೃತರ ಗೌರವಾರ್ಥ ಕಾಲೇಜಿಗೆ ರಜೆ ನೀಡಲಾಯಿತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.