ಉಡುಪಿ: ಜಿಲ್ಲೆಗೆ ಬರುವ ಪ್ರವಾಸಿಗರ ಸುರಕ್ಷತೆಗೆ ಆದ್ಯತೆ ನೀಡಿ ಮತ್ತು ಅವರಿಗೆ ಅನುಕೂಲತೆಗಳನ್ನು ಹೆಚ್ಚಿಸುವ ಮೂಲಕ ಸ್ವಾಗತಾರ್ಹ ವಾತಾವರಣವನ್ನು ಕಲ್ಪಿಸಿ ಎಂದು ಸಂಸದ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದರು.

ಮಣಿಪಾಲದ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ನಡೆದ ಜಿಲ್ಲಾ ಪ್ರವಾಸೋದ್ಯಮ ಅಭಿವೃದ್ಧಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿ, ಜಿಲ್ಲೆಗೆ ಕಳೆದ ಸಾಲಿನಲ್ಲಿ 4 ಕೋಟಿಗೂ ಹೆಚ್ಚು ಪ್ರವಾಸಿಗರು ಭೇಟಿ ನೀಡಿದ್ದಾರೆ. ಈ ಸಂಖ್ಯೆ ದಿನೇ ದಿನೇ ಹೆಚ್ಚುತ್ತಿದೆ. ಹೊರಗಿನಿಂದ ಬರುವ ಪ್ರವಾಸಿಗರಿಗೆ ಅನುಕೂಲವಾಗುವ ಎಲ್ಲಾ ರೀತಿಯ ಅಗತ್ಯ ಮೂಲಸೌಕರ್ಯಗಳನ್ನು ಕಲ್ಪಿಸುವುದರ ಜೊತೆಗೆ ಪ್ರವಾಸಿ ತಾಣಗಳ ಸ್ವಚ್ಛತೆಗೆ ಆದ್ಯತೆ ನೀಡಬೇಕು ಎಂದು ಸೂಚನೆ ನೀಡಿದರು.

ಕುಂದಾಪುರ ತಾಲ್ಲೂಕಿನ ಕೋಡಿ ಕಡಲ ತೀರದ ಸರ್ವೇ ನಂಬರ್ 310ರಲ್ಲಿ 26.50 ಎಕರೆ ಜಾಗವನ್ನು ಪ್ರವಾಸೋದ್ಯಮ ಇಲಾಖೆಗೆ ಹಸ್ತಾಂತರಿಸಬೇಕು. ಈ ಜಾಗವು ಪ್ರವಾಸೋದ್ಯಮಕ್ಕೆ ಪೂರಕವಾಗಿದ್ದು, ಡಾಲ್ಫಿನ್ಗಳು ಕಂಡುಬರುವ ಉಡುಪಿಯ ಏಕೈಕ ಪ್ರವಾಸಿ ತಾಣವಾಗಿದೆ. ಇಲ್ಲಿ ಪ್ರವಾಸಿ ಚಟುವಟಿಕೆಗಳನ್ನು ಆಧುನಿಕ ಶೈಲಿಯಲ್ಲಿ ಅಭಿವೃದ್ಧಿಪಡಿಸಬೇಕು ಎಂದು ತಿಳಿಸಿದರು.

ತ್ರಾಸಿಯಿಂದ ಮರವಂತೆ ಬೀಚ್ ರಸ್ತೆಯುದ್ದಕ್ಕೂ ರಾಷ್ಟ್ರೀಯ ಹೆದ್ದಾರಿ ಇಲಾಖೆಯವರು ರಸ್ತೆ ಬದಿಯ ಸೈಡ್ ಗೈಡ್ ರೈಲ್ ಅನ್ನು ಹಾಗೂ ಬ್ಯಾರಿಕೇಡ್ಗಳನ್ನು ನಿರ್ಮಿಸಬೇಕು. ವಾಹನಗಳನ್ನು ಎಲ್ಲೆಂದರಲ್ಲಿ ನಿಲ್ಲಿಸುವುದರಿಂದಾಗಿ ಅಪಘಾತಗಳು ಸಂಭವಿಸುವ ಸಾಧ್ಯತೆಗಳಿವೆ. ಇವುಗಳಿಗೆ ಕಡಿವಾಣ ಹಾಕಬೇಕಿದೆ ಎಂದರು.

ಜಿಲ್ಲಾಧಿಕಾರಿ ಕೆ.ವಿದ್ಯಾಕುಮಾರಿ ಮಾತನಾಡಿ, 20 ವರ್ಷಗಳ ಹಿಂದೆ ಜಿಲ್ಲಾ ಪ್ರವಾಸೋದ್ಯಮ ಅಭಿವೃದ್ಧಿ ಸಮಿತಿಯು ಮಲ್ಪೆ ಬೀಚ್ ಹಾಗೂ ಸೇಂಟ್ ಮೇರೀಸ್ ದ್ವೀಪದ ನಿರ್ವಹಣೆಯನ್ನು ಮಲ್ಪೆ ಅಭಿವೃದ್ಧಿ ಸಮಿತಿಗೆ ನೀಡಿತ್ತು. ಆದರೆ ಪ್ರಸ್ತುತ ಜಿಲ್ಲಾ ಪ್ರವಾಸೋದ್ಯಮ ಅಭಿವೃದ್ಧಿಗೆ ಹಾಗೂ ಸಮಿತಿಯ ಕಾರ್ಯ ವ್ಯಾಪ್ತಿಗೆ ಅಡೆತಡೆಯಾಗುತ್ತಿರುವುದು ಹಾಗೂ ಕಾನೂನು ಸಮಸ್ಯೆ ಎದುರಾಗುತ್ತಿರುವ ಕಾರಣ ಅವುಗಳ ನಿರ್ವಹಣೆಯ ಅಧಿಕಾರವನ್ನು ಹಿಂಪಡೆಯಲಾಗಿದೆ ಎಂದರು.

ಮಲ್ಪೆಯ ಕಡಲ ತೀರದಲ್ಲಿ ಫ್ಲೋಟಿಂಗ್ ಬ್ರಿಡ್ಜ್ ಚಟುವಟಿಕೆಯನ್ನು ಖಾಸಗಿಯವರು ನಿರ್ವಹಿಸುತ್ತಿದ್ದು, ಅದರ ಆದಾಯದಲ್ಲಿ, ನಿರ್ವಹಣೆಯನ್ನು ಬೀಚ್ ಅಭಿವೃದ್ಧಿ ಸಮಿತಿಯೇ ನಿರ್ವಹಿಸಬೇಕು ಎಂದ ಅವರು, ಮಲ್ಪೆ ಬೀಚ್ನಲ್ಲಿ ಜಿಪ್ಲೈನ್ ಚಟುವಟಿಕೆ ನಡೆಸಲು ಕೆಲವರು ಮುಂದೆ ಬಂದಿದ್ದು, ಅವರು ಸೂಕ್ತ ಪ್ರಾಧಿಕಾರದ ಪರವಾನಗಿ ಮತ್ತು ಎನ್.ಒ.ಸಿ ಪಡೆದು ಪ್ರವಾಸಿಗರ ಸುರಕ್ಷತೆಗೆ ಆದ್ಯತೆ ನೀಡಿ ನಡೆಸುವುದು ಸೂಕ್ತ ಎಂದರು.

ಕೇಂದ್ರ ಸರ್ಕಾರದ ಸ್ವದೇಶ ದರ್ಶನ ಅಡಿಯಲ್ಲಿ ಚಾಲೆಂಜ್ ಬೇಸ್ಡ್ ಡೆಸ್ಟಿನೇಷನ್ ಡೆವಲಪ್ಮೆಂಟ್ ಆಧಾರದಲ್ಲಿ ಪ್ರವಾಸಿ ತಾಣಗಳ ಅಭಿವೃದ್ಧಿ ಹಾಗೂ ಇಕೋ ಟೂರಿಸಂ ಮತ್ತು ಅಮೃತ್ ಧರೋಹರ್ ಸೈಟ್ಸ್ಗಳನ್ನು ₹10 ಕೋಟಿ ವೆಚ್ಚದಲ್ಲಿ ಕೈಗೊಳ್ಳಲಾಗುವುದು. ಈ ಬಗ್ಗೆ ಪಡುಕೆರೆಯಿಂದ ಕಾಪುವರೆಗೆ ಸೈಕಲ್ ಟ್ರ್ಯಾಕ್ಗಳನ್ನೊಳಗೊಂಡಂತೆ ವಿವಿಧ ಸೌಲಭ್ಯಗಳನ್ನು ಒಳಗೊಂಡ ಈಗಾಗಲೇ ಸಮಗ್ರ ಯೋಜನಾ ವರದಿಯನ್ನು ಸಿದ್ಧಪಡಿಸಲಾಗಿದೆ ಎಂದರು.

ಶಾಸಕರಾದ ಯಶ್ಪಾಲ್ ಸುವರ್ಣ, ಎ. ಕಿರಣ್ ಕುಮಾರ್ ಕೊಡ್ಗಿ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರತೀಕ್ ಬಾಯಲ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅರುಣ್ ಕೆ., ಹೆಚ್ಚುರಿ ಜಿಲ್ಲಾಧಿಕಾರಿ ಮಮತಾ ದೇವಿ ಜಿ.ಎಸ್., ಪ್ರವಾಸೋದ್ಯಮ ಇಲಾಖೆ ಸಹಾಯಕ ನಿರ್ದೇಶಕ ಕುಮಾರ್ ಸಿ.ಯು., ಜಿಲ್ಲಾಮಟ್ಟದ ಅಧಿಕಾರಿಗಳು ಇದ್ದರು.

‘ಅಕ್ರಮ ಚಟುವಟಿಕೆಗಳಿಗೆ ಕಡಿವಾಣ ಹಾಕಿ’

ಪಡುಕೆರೆ ಬೀಚ್ ವ್ಯಾಪ್ತಿಯಲ್ಲಿ ಪ್ರವಾಸೋದ್ಯಮ ಚಟುವಟಿಕೆ ಉತ್ತೇಜಿಸಲು ಕೆಲವೊಂದು ಹೋಂ ಸ್ಟೇಗಳಿಗೆ ಅನುಮತಿ ನೀಡಲಾಗಿದೆ. ಅವುಗಳ ಬಗ್ಗೆ ಸ್ಥಳೀಯ ಸಂಘ-ಸಂಸ್ಥೆಗಳು ಆಕ್ಷೇಪಣೆಗಳನ್ನು ಸಹ ಸಲ್ಲಿಸಿದ್ದಾರೆ. ಈ ಬಗ್ಗೆ ಪರಿಶೀಲಿಸಿ ಕಾನೂನುಬಾಹಿರ ಯಾವುದೇ ರೀತಿಯ ಚಟುವಟಿಕೆಗಳು ಆಗದಂತೆ ಎಚ್ಚರವಹಿಸಿ ಎಂದು ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.