ಬೈಂದೂರು: ಬೆಳಕಿನ ಹಬ್ಬ ದೀಪಾವಳಿ, 69ನೇ ಕನ್ನಡ ರಾಜ್ಯೋತ್ಸವ ಸಂದರ್ಭದಲ್ಲಿ ಚೊಚ್ಚಲ ಬೈಂದೂರು ಉತ್ಸವ ಚಾಲನೆಗೊಂಡಿರುವ ಪವಿತ್ರ ದಿನ. ಇಲ್ಲಿನ ಯುವಶಕ್ತಿಗೆ ಉದ್ಯೋಗ ಸೃಷ್ಟಿ, ಬೈಂದೂರು ಕ್ಷೇತ್ರವನ್ನು ರಾಷ್ಟ್ರ, ಅಂತರಾಷ್ಟ್ರೀಯ ಮಟ್ಟದಲ್ಲಿ ಪರಿಚಯಿಸುವ ಉದ್ದೇಶದಿಂದ ಉತ್ಸವ ಆಚರಣೆ ಜಾರಿಗೆ ತಂದಿದ್ದು, ಎಲ್ಲರ ಸಹಕಾರದಿಂದ ಯಶಸ್ವಿಯಾಗುತ್ತಿದೆ. ಕಾರ್ಯಕ್ರಮಕ್ಕೆ ರಾಜ್ಯ ಸರ್ಕಾರ ಅಧಿಕೃತವಾಗಿ ಕಿರು ಅನುದಾನ ನೀಡಿದ್ದು ಆ ಮೂಲಕ ಸಂವಿಧಾನ ಬದ್ಧ ಚಾಲನೆಗೆ ಕೈಜೋಡಿಸಿದೆ ಎಂದು ಸಂಸದ ಬಿ.ವೈ. ರಾಘವೇಂದ್ರ ಹೇಳಿದರು.

ಅವರು ಶುಕ್ರವಾರ ಬೈಂದೂರಿನ ಗಾಂಧಿ ಮೈದಾನದಲ್ಲಿ ಸಮೃದ್ಧ ಬೈಂದೂರು, ವಿವಿಧ ಸಂಘ ಸಂಸ್ಥೆಗಳು, ತಾಲ್ಲೂಕು ಆಡಳಿತ ಸಹಭಾಗಿತ್ವದಲ್ಲಿ ನಡೆಯುತ್ತಿರುವ ‘ಬೈಂದೂರು ಉತ್ಸವ’ ಉದ್ಘಾಟಿಸಿ ಮಾತನಾಡಿ, ಕ್ಷೇತ್ರದ ಅಭಿವೃದ್ಧಿಗಾಗಿ ಹತ್ತು ವರ್ಷಗಳಲ್ಲಿ ಬೈಂದೂರಿಗೆ ಮೂರು ರಾಷ್ಟ್ರೀಯ ಹೆದ್ದಾರಿ ಜೋಡಿಸುವ ಪ್ರಕ್ರಿಯೆಯಾಗಿದೆ. ಮುಂದಿನ ದಿನಗಳಲ್ಲಿ ಧಾರ್ಮಿಕ ಪ್ರವಾಸೋದ್ಯಮಕ್ಕೆ ಆದ್ಯತೆ ನೀಡಲಾಗುವುದು ಎಂದು ತಿಳಿಸಿದರು.

ಶಾಸಕ ಗುರುರಾಜ್ ಗಂಟಿಹೊಳೆ ಅಧ್ಯಕ್ಷತೆ ವಹಿಸಿದ್ದರು. ಸಂಸದ ಕೋಟ ಶ್ರೀನಿವಾಸ ಪೂಜಾರಿ, ವಿಧಾನ ಪರಿಷತ್ ಸದಸ್ಯ ಎಸ್.ಎಲ್. ಭೋಜೆಗೌಡ, ಶಾಸಕರಾದ ಎ. ಕಿರಣ್ ಕುಮಾರ್ ಕೊಡ್ಗಿ, ಗುರ್ಮೆ ಸುರೇಶ ಶೆಟ್ಟಿ, ಕೊಲ್ಲೂರು ಮೂಕಾಂಬಿಕಾ ದೇವಳದ ಪ್ರಧಾನ ಅರ್ಚಕ ರಾಮಚಂದ್ರ ಅಡಿಗ, ತಾ.ಪಂ. ಕಾರ್ಯ ನಿರ್ವಹಣಾಧಿಕಾರಿ ಭಾರತಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಉಪ ನಿರ್ದೇಶಕಿ ಪೂರ್ಣಿಮಾ, ಕುಂದಾಪುರ ಉಪ ವಿಭಾಗಾಕಾರಿ ಮಹೇಶ್ಚಂದ್ರ, ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಟ್ರಸ್ಟಿ ವಿವೇಕ್ ಆಳ್ವ, ಆರೋಗ್ಯಾಧಿಕಾರಿ ಪ್ರೇಮಾನಂದ, ಕ್ಷೇತ್ರ ಶಿಕ್ಷಣಾಧಿಕಾರಿ ನಾಗೇಶ ನಾಯ್ಕ್, ತಹಶೀಲ್ದಾರ್ ಪ್ರದೀಪ್ ಆರ್, ಆರ್ಎಫ್ಒ ಸಂದೇಶ್, ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಅಜಯ್ ಭಂಡಾರ್ಕರ್, ಉದ್ಯಮಿಗಳಾದ ಕೃಷ್ಣಪ್ರಸಾದ್ ಅಡ್ಯಂತಾಯ, ನಿತಿನ್ ನಾರಾಯಣ್, ದುರ್ಗಾ ಪರಮೇಶ್ವರಿ ದೇವಸ್ಥಾನದ ಆಡಳಿತ ಮೊಕ್ತೇಸರ ಸತೀಶ್ ಶೆಟ್ಟಿ, ಮಾಜಿ ಧರ್ಮದರ್ಶಿ ಜಯಾನಂದ ಹೋಬಳಿದಾರ್, ಡಾ.ಅತುಲ್ ಕುಮಾರ್ ಶೆಟ್ಟಿ, ರಾಜೇಶ್ ಕಾವೇರಿ, ಕರಣ್ ಪೂಜಾರಿ, ಸದಾನಂದ ಉಪ್ಪಿನಕುದ್ರು, ಬಾಲಚಂದ್ರ ಭಟ್, ಸುರೇಶ ಬಟ್ವಾಡಿ, ಸಮಿತಿಯ ಸಹ ಸಂಚಾಲಕ ಗಣೇಶ ಗಾಣಿಗ ಮೊದಲಾದವರು ಇದ್ದರು.

ಬೆಳಿಗ್ಗೆ ತಲ್ಲೂರಿನಿಂದ ಬೈಂದೂರಿಗೆ ಟ್ಯಾಬ್ಲೊ ಜಾಥಾ, ಉಪ್ಪುಂದದಿಂದ ಬೈಂದೂರಿಗೆ ಭಜನಾ ಜಾಥಾ ನಡೆಯಿತು. ನಂತರ ವಿಜ್ಞಾನ, ಕೃಷಿ, ತೋಟಗಾರಿಕೆ, ಆಹಾರ, ಕರಕುಶಲ, ಸಾಹಿತ್ಯ, ಮೀನುಗಾರಿಕೆ ಸೇರಿದಂತೆ ಹಲವು ಮೇಳಗಳು ಉದ್ಘಾಟನೆಗೊಂಡವು. ಶಾಸಕ ಗುರುರಾಜ ಗಂಟಿಹೊಳೆ ಪ್ರಾಸ್ತಾವಿಕ ಮಾತನಾಡಿದರು. ಸಮೃದ್ಧ ಜನಸೇವಾ ಟ್ರಸ್ಟ್ ಅಧ್ಯಕ್ಷ ಬಿ.ಎಸ್. ಸುರೇಶ ಶೆಟ್ಟಿ ಸ್ವಾಗತಿಸಿದರು. ಪುಷ್ಪರಾಜ್ ಶೆಟ್ಟಿ ವಂದಿಸಿದರು. ಅರುಣ ಕುಮಾರ್ ಶಿರೂರು, ಸುಬ್ರಹ್ಮಣ್ಯ ಜಿ. ನಿರೂಪಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.