ಕರಾವಳಿಯಲ್ಲಿ ಮಾತೃಪ್ರಧಾನ ಕುಟುಂಬ ವ್ಯವಸ್ಥೆ ಇಂದಿಗೂ ಅಸ್ತಿತ್ವದಲ್ಲಿರುವುದು ಹೆಣ್ಣು ಭ್ರೂಣ ಹತ್ಯೆ ಪ್ರಮಾಣ ಇಲ್ಲದಿರುವುದು ಮಹಿಳಾ ಸಾಕ್ಷರತೆಯಂತಹ ಅಂಶಗಳು ಜಿಲ್ಲೆಯಲ್ಲಿ ಮಹಿಳಾ ಮತದಾರರ ಪಮಾಣ ಹೆಚ್ಚಾಗಲು ಕಾರಣ. ಪುರುಷರ ಸರಿಸಮನಾಗಿ ಮಹಿಳೆಯರೂ ಮತದಾನ ಪ್ರಕ್ರಿಯೆಯಲ್ಲಿ ಭಾಗವಹಿಸಲು ಆಸಕ್ತಿ ತೋರುತ್ತಿದ್ದಾರೆ. ಕರಾವಳಿ ಜಿಲ್ಲೆಗಳಿಂದ ಸಾವಿರಾರು ಪುರುಷರು ಗಲ್ಫ್ ರಾಷ್ಟ್ರಗಳಲ್ಲಿ ದುಡಿಯುತ್ತಿರುವುದು ಪುರುಷ ಮತದಾರರ ಸಂಖ್ಯೆ ಕಡಿಮೆಯಾಗಲು ಕಾರಣ ಇರಬಹುದು ಎಂದು ರಾಜಕೀಯ ತಜ್ಞ ಪ್ರೊ.ಕೊಕ್ಕರ್ಣೆ ಸುರೇಂದ್ರನಾಥ್ ಶೆಟ್ಟಿ ವಿವರಿಸಿದರು.