ಉಡುಪಿ: ಮಣಿಪಾಲ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯಲ್ಲಿ ಹಲವರಿಗೆ ಕೋವಿಡ್–19 ದೃಢಪಟ್ಟಿರುವಹಿನ್ನೆಲೆಯಲ್ಲಿ ಎಂಐಟಿ ಪರಿಸರವನ್ನು ಕಂಟೈನ್‌ಮೆಂಟ್ ವಲಯವನ್ನಾಗಿಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಜಿ.ಜಗದೀಶ್ ತಿಳಿಸಿದರು.

ಮಂಗಳವಾರ ಜಿಲ್ಲೆಯಲ್ಲಿ ಪತ್ತೆಯಾದ33ಪ್ರಕರಣಗಳಲ್ಲಿ27 ಎಂಐಟಿ ಹಾಗೂ ಮಣಿಪಾಲದ ಮಾಹೆ ವಿವಿ ಕ್ಯಾಂಪಸ್‌ನಲ್ಲಿ ಕಾಣಿಸಿಕೊಂಡಿವೆ. ಬುಧವಾರ ದೃಢಪಟ್ಟ 46 ಪ್ರಕರಣಗಳಲ್ಲಿ ಅರ್ಧಕ್ಕಿಂತ ಹೆಚ್ಚು ಎಂಐಟಿಯಲ್ಲಿ ಪತ್ತೆಯಾಗಿರುವುದರಿಂದ ಕಂಟೈನ್‌ಮೆಂಟ್ ವಲಯ ಮಾಡಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಎಂಐಟಿಯಲ್ಲಿ ಎಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ಸೆಮಿಸ್ಟರ್ ಪರೀಕ್ಷೆ ನಡೆಯುತ್ತಿದ್ದು, ಸೋಂಕಿತವಿದ್ಯಾರ್ಥಿಗಳಿಗೆ ಪ್ರತ್ಯೇಕವಾಗಿ ಪರೀಕ್ಷೆ ಬರೆಯಲು ವ್ಯವಸ್ಥೆ ಮಾಡಬೇಕುಎಂದುಆರೋಗ್ಯ ಇಲಾಖೆ ಅಧಿಕಾರಿಗಳು ಸೂಚನೆ ನೀಡಿದ್ದಾರೆ. ಸಧ್ಯ ಸೋಂಕಿತರು ಹೋಂ ಐಸೊಲೇಷನ್‌ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.