ಉಡುಪಿ: ‘ಕೃಷ್ಣಮಠದಲ್ಲಿ ದ್ವೈವಾರ್ಷಿಕ ಪರ್ಯಾಯ ಪೂಜಾ ವ್ಯವಸ್ಥೆ ಆರಂಭವಾಗಿ 500 ವರ್ಷಗಳು ತುಂಬುತ್ತಿರುವ ಹಿನ್ನೆಲೆಯಲ್ಲಿ ಅದಮಾರು ಮಠದಿಂದ ಜ.16ರಿಂದ 23ರವರೆಗೆ ಪರ್ಯಾಯ ಪಂಚ ಶತಮಾನೋತ್ಸವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ’ ಎಂದು ಮಠದ ವ್ಯವಸ್ಥಾಪಕ ಗೋವಿಂದ್ ರಾಜ್ ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿಗುರುವಾರ ಮಾತನಾಡಿದ ಅವರು, ‘ಕೃಷ್ಣಮಠದಲ್ಲಿ ಕ್ರಿ.ಶ. 1522ರಲ್ಲಿ ವಾದಿರಾಜ ಶ್ರೀಗಳಿಂದ ಆರಂಭವಾದ ದ್ವೈವಾರ್ಷಿಕ ಪರ್ಯಾಯೋತ್ಸವಕ್ಕೆ 2022ರ ಜ.18ರಂದು 500 ವರ್ಷಗಳು ತುಂಬಲಿವೆ. ಅದಮಾರು ಪರ್ಯಾಯದ ಅವಧಿಯಲ್ಲಿ ಪರ್ಯಾಯ ಪಂಚ ಶತಮಾನೋತ್ಸವ ನಡೆಯುತ್ತಿದ್ದು, ಈ ಅವಧಿಯಲ್ಲಿ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ’ ಎಂದರು.

‘ಇಲ್ಲಿನ ಅಷ್ಟಮಠಗಳ ಪರಿಸರವನ್ನು ವೀಕ್ಷಿಸಲು ನಿರ್ಮಿಸಿರುವ ‘ವಿಶ್ವಪಥ’ ಮಾರ್ಗವನ್ನು ಜ.18ರಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಉದ್ಘಾಟಿಸುವರು’ ಎಂದು ಅವರು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.