ಉಡುಪಿ: ಜಾತಿ, ಸಿಂಧುತ್ವ ಪ್ರಮಾಣ ಪತ್ರ ನೀಡಬೇಕೆಂದು ಆಗ್ರಹಿಸಿ ಕರ್ನಾಟಕ ಭೋವಿ ಸಮಾಜ ಸೇವಾ ಸಂಘದ ವತಿಯಿಂದ ಮಣಿಪಾಲದ ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿ ಗುರುವಾರ ಪ್ರತಿಭಟನೆ ನಡೆಯಿತು.

ಈ ವೇಳೆ ಸಂಘದ ಅಧ್ಯಕ್ಷ ಉದಯಕುಮಾರ್ ಭೋವಿ ಮಾತನಾಡಿ, 1977ರಿಂದಲೂ ನಾವು ಪರಿಶಿಷ್ಟ ಜಾತಿ ಪ್ರಮಾಣಪತ್ರ ಪಡೆಯುತ್ತಿದ್ದು, ಕೆಲವು ವರ್ಷಗಳಿಂದ ಜಾತಿ ಪ್ರಮಾಣ ಪತ್ರವನ್ನು ನೀಡುತ್ತಿಲ್ಲ ಎಂದು ಆರೋಪಿಸಿದರು.

ಬೆಸ್ತರು ಮತ್ತು ಗಂಗಮತಸ್ಥರಿಗೆ ನೀಡುವ ಪ್ರವರ್ಗ 1ರ ಪ್ರಮಾಣಪತ್ರವನ್ನು ನಮಗೆ ಒತ್ತಾಯಪೂರ್ವಕವಾಗಿ ನೀಡಲು ಕೆಲವು ಅಧಿಕಾರಿಗಳು ಪ್ರಯತ್ನಿಸುತ್ತಿದ್ದಾರೆ ಎಂದೂ ಹೇಳಿದರು.

ಜಾತಿ ಪ್ರಮಾಣಪತ್ರ ನೀಡಲು ಸಂಬಂಧಪಟ್ಟ ತಹಶೀಲ್ದಾರರಿಗೆ ಜಿಲ್ಲಾಧಿಕಾರಿ ಸೂಚಿಸಬೇಕು ಎಂದು ಪ್ರತಿಭಟನಕಾರರು ಒತ್ತಾಯಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.