ಉಡುಪಿ: ಕುಂದಾಪುರದ ಸರ್ಕಾರಿ ಪಿಯು ಕಾಲೇಜಿನ ಪ್ರಾಂಶುಪಾಲ ಬಿ.ಜಿ.ರಾಮಕೃಷ್ಣ ಅವರಿಗೆ ನೀಡಲಾಗಿದ್ದ ರಾಜ್ಯ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಯನ್ನು ಸರ್ಕಾರ ತಡೆ ಹಿಡಿದಿರುವುದು ಸರಿಯಲ್ಲ. ಇದು ಇಡೀ ಶಿಕ್ಷಕ ವೃಂದಕ್ಕೆ ಮಾಡಿರುವ ಅಪಮಾನ ಎಂದು ಸಂಸದ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.

ಸುದ್ದಿಗಾರರ ಜೊತೆ ಗುರುವಾರ ಮಾತನಾಡಿದ ಅವರು, ಹಿಜಾಬ್ ಪ್ರಕರಣದಲ್ಲಿ ರಾಮಕೃಷ್ಣ ಅವರು ಒಬ್ಬ ಅಧಿಕಾರಿಯಾಗಿ ಸರ್ಕಾರದ ಆದೇಶವನ್ನು ಪಾಲಿಸಿದ್ದಾರೆ. ಅದಕ್ಕೆ ಪೂರಕವಾಗಿ ಹೈಕೋರ್ಟ್ ಕೂಡ ಆದೇಶ ನೀಡಿತ್ತು ಎಂದರು.

ಸರ್ಕಾರ ನ್ಯಾಯಾಲಯದ ಆದೇಶಕ್ಕೆ ಗೌರವ ಕೊಡುತ್ತದೋ ಅಥವಾ ತನ್ನ ಕಾರ್ಯಸೂಚಿಗೆ ಗೌರವ ಕೊಡುತ್ತದೋ ಎಂಬುದನ್ನು ಸ್ಪಷ್ಟಪಡಿಸಬೇಕಾಗಿದೆ ಎಂದರು.

ಕೂಡಲೇ ಸರ್ಕಾರ ತನ್ನ ತಪ್ಪನ್ನು ಸರಿಪಡಿಸಿಕೊಂಡು ಘೋಷಿಸಿರುವ ಪ್ರಶಸ್ತಿಯನ್ನು ರಾಮಕೃಷ್ಣ ಅವರಿಗೆ ನೀಡಬೇಕು ಎಂದು ಆಗ್ರಹಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.