ಶುಕ್ರವಾರ, 5 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಉಡುಪಿ: ತೆಂಕನಿಡಿಯೂರು ಪಂಚಾಯಿತಿಗೆ ಗ್ರಾಮಸ್ಥರ ಮುತ್ತಿಗೆ

Published 3 ಜುಲೈ 2024, 9:28 IST
Last Updated 3 ಜುಲೈ 2024, 9:28 IST
ಅಕ್ಷರ ಗಾತ್ರ

ಉಡುಪಿ: ತ್ಯಾಜ್ಯ ವಿಲೇವಾರಿ ಘಟಕದ ಕಸವನ್ನು ಮಣ್ಣಿನಲ್ಲಿ ಹೂಳುವುದನ್ನು ವಿರೋಧಿಸಿ ಗ್ರಾಮಸ್ಥರು ಮತ್ತು ಬಿಜೆಪಿ ಬೆಂಬಲಿತ ಸದಸ್ಯರು ತೆಂಕನಿಡಿಯೂರು ಗ್ರಾಮ ಪಂಚಾಯಿತಿಗೆ ಬುಧವಾರ ಮುತ್ತಿಗೆ ಹಾಕಿ ಪ್ರತಿಭಟಿಸಿದರು.

ತ್ಯಾಜ್ಯ ವಿಲೇವಾರಿ ಘಟಕದಿಂದಾಗಿ ತೆಂಕನಿಡಿಯೂರು ವಿಷ್ಣಮೂರ್ತಿ ನಗರದ ನಿವಾಸಿಗಳಿಗೆ ಸಮಸ್ಯೆಯಾಗಿದೆ ಎಂದು ಪ್ರತಿಭಟನಕಾರರು ಆರೋಪಿಸಿದರು.

ಕೆಲ ದಿನಗಳ ಹಿಂದೆ ಪಂಚಾಯಿತಿ ಅಧ್ಯಕ್ಷೆಯ ಸೂಚನೆ ಮೇರೆಗೆ ತ್ಯಾಜ್ಯ ಘಟಕದ ಬಳಿ ಜೆಸಿಬಿಯಿಂದ ಹೊಂಡ ತೋಡಿ ಕಸವನ್ನು ಮಣ್ಣಿನಡಿಯಲ್ಲಿ ಹೂತು ಹಾಕಲಾಗಿದೆ. ಕಸ ಹೂತು ಹಾಕಿದ ಸ್ಥಳದಲ್ಲಿ ಮಳೆನೀರು ಸಂಗ್ರಹಗೊಂಡು ಸಮೀಪದ ಕೊಳವೆ ಬಾವಿಯ ನೀರು ಕಲುಷಿತಗೊಂಡಿದೆ ಎಂದು ಆರೋಪಿಸಿದರು.

ಮಣ್ಣಿನಲ್ಲಿ ಹೂತುಹಾಕಿದ ಕಸವನ್ನು ತೆರವುಗೊಳಿಸಬೇಕು ಎಂದು ಒತ್ತಾಯಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT