ಬೆಂಗಳೂರು:ಉಡುಪಿ ಜಿಲ್ಲೆಯ ಉಪ್ಪುಂದದಸರ್ಕಾರಿ ಹಿರಿಯ ಉರ್ದು ಶಾಲೆಯಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ (ಎಸ್ಡಿಎಂಸಿ)ಅಧ್ಯಕ್ಷರನ್ನು ವಜಾಗೊಳಿಸಿ ಕಠಿಣ ಕ್ರಮಕ್ಕೆ ಮುಂದಾಗಲು ಶಿಕ್ಷಣ ಸಚಿವ ಸುರೇಶ್ ಕುಮಾರ್ ಆದೇಶಿಸಿದ್ದಾರೆ.

ಸರ್ಕಾರಿ ಹಿರಿಯ ಉರ್ದು ಶಾಲೆ ಶಾಲೆಯ ಪ್ರಭಾರಿ ಮುಖ್ಯ ಶಿಕ್ಷಕಿ ಮಮತಾ ಎಂಬುವವರ ಮೇಲೆ ಅದೇ ಶಾಲೆಯ ಎಸ್ಡಿಎಂಸಿ ಅಧ್ಯಕ್ಷ ಮೋಹನಚಂದ್ರ ಹಲ್ಲೆ ಮಾಡಿ, ಜೀವ ಬೆದರಿಕೆ ಹಾಕಿದ್ದು ಅವರನ್ನು ಎಸ್ಡಿಎಂಸಿ ಹುದ್ದೆಯಿಂದ ವಜಾಗೊಳಿಸಿ ಕಠಿಣ ಕ್ರಮ ಜರುಗಿಸಲು ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ಅಧಿಕಾರಿಗಳಿಗೆ ಆದೇಶಿಸಿದ್ದಾರೆ.

ಈ ಕುರಿತಂತೆ ಶಿಕ್ಷಕಿಯೊಂದಿದೆ ನೇರ ಮಾತನಾಡಿ ಸಾಂತ್ವನ ಹೇಳಿದ ಬಳಿಕ ಸಚಿವ ಸುರೇಶ್ ಕುಮಾರ್ ಶಿಕ್ಷಣ ಇಲಾಖೆಯ ಆಯುಕ್ತರಿಗೆ, ಸಂಬಂಧಿಸಿದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ಕಠಿಣ ಕ್ರಮಕ್ಕೆ ಮುಂದಾಗಬೇಕೆಂದು ಸ್ಪಷ್ಟ ಸೂಚನೆ ನೀಡಿದ್ದಾರೆ.

ಈ ಬಗ್ಗೆ ತಮ್ಮ ಫೇಸ್ಬುಕ್ ಪುಟದಲ್ಲಿ ಬರೆದುಕೊಂಡಿರುವ ಸುರೇಶ್ ಕುಮಾರ್, ತಾವು ಸ್ಥಳೀಯ ಶಾಸಕರಿಗೂ ಈ ಬಗ್ಗೆ ತಿಳಿಸಿದ್ದು, ಇಂತಹ ಪ್ರಕರಣಗಳಲ್ಲಿ ಜೀರೊ ಟಾಲರೆನ್ಸ್ (ಸಹಿಸುವುದು ಬೇಡ)ಇರಬೇಕೆಂದು ಅಭಿಪ್ರಾಯ ಪಟ್ಟಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.