ಉಡುಪಿ: ವಿಧಾನ ಪರಿಷತ್ ನೈರುತ್ಯ ಪದವೀಧರರ ಕ್ಷೇತ್ರದಿಂದ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ರಘುಪತಿ ಭಟ್ ಅವರಿಗೆ ರಾಜ್ಯ ಬಿಜೆಪಿ ಶಿಸ್ತು ಸಮಿತಿ ಗುರುವಾರ ನೋಟಿಸ್ ನೀಡಿದೆ.

ರಾಜ್ಯ ಬಿಜೆಪಿ ಶಿಸ್ತು ಸಮಿತಿ ಅಧ್ಯಕ್ಷ ಲಿಂಗರಾಜ್ ಪಾಟೀಲ ನೋಟಿಸ್ ನೀಡಿದ್ದು, ಎರಡು ದಿನಗಳ ಒಳಗೆ ಪಕ್ಷದ ಶಿಸ್ತು ಸಮಿತಿಯ ಮುಂದೆ ಹಾಜರಾಗಿ ಸ್ಪಷ್ಟೀಕರಣ ನೀಡುವಂತೆ ಸೂಚಿಸಿದ್ದಾರೆ.

ಪಕ್ಷದ ಅಧಿಕೃತ ಅಭ್ಯರ್ಥಿಯ ವಿರುದ್ಧ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡಿರುವುದು ಪಕ್ಷದ ಶಿಸ್ತು ಉಲ್ಲಂಘನೆ ಮಾಡಿದಂತಾಗಿದೆ ಎಂದು ನೋಟಿಸ್ನಲ್ಲಿ ತಿಳಿಸಿದ್ದಾರೆ.

24 ಗಂಟೆಯೊಳಗೆ ಸ್ಪರ್ಧಾ ಕಣದಿಂದ ನಿವೃತ್ತಿ ಘೋಷಿಸದಿದ್ದರೆ ಅನಿವಾರ್ಯವಾಗಿ ಕ್ರಮ ಜರುಗಿಸಬೇಕಾಗುತ್ತದೆ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ವಿ.ಸುನೀಲ್ ಕುಮಾರ್ ಕೂಡ ಎಚ್ಚರಿಕೆ ನೀಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.