ಕುಂದಾಪುರ: ಕತಾರ್ನಲ್ಲಿರುವ ಭಾರತೀಯ ಸಾಂಸ್ಕೃತಿಕ ಕೇಂದ್ರಕ್ಕೆ ಭೇಟಿ ನೀಡಿದ ಭಾರತ ಸರ್ಕಾರದ ಕಾರ್ಯದರ್ಶಿ, ಸಿಪಿವಿ, ಒಐಎ ಅರುಣ್ ಕುಮಾರ್ ಚಟರ್ಜಿ, ಕೊಲ್ಲಿ ದೇಶಗಳ ಜಂಟಿ ಕಾರ್ಯದರ್ಶಿ ಆಸಿಂ ಮಹಾಜನ್ ಸೇರಿದಂತೆ ಪ್ರಮುಖ ಅಧಿಕಾರಿಗಳು, ಸಾಂಸ್ಕೃತಿಕ ಕೇಂದ್ರದ ಬಗ್ಗೆ ಪ್ರಶಂಸೆ ವ್ಯಕ್ತಪಡಿಸಿ, ಭವಿಷ್ಯದಲ್ಲಿ ಇನ್ನೂ ಹೆಚ್ಚಿನ ಪ್ರಮಾಣದಲ್ಲಿ ವೈವಿಧ್ಯಮಯ ಕಾರ್ಯಕ್ರಮ ಆಯೋಜಿಸುವ ಮೂಲಕ ಕತಾರ್ನಲ್ಲಿರುವ ಭಾರತೀಯ ಸಮುದಾಯಕ್ಕೆ ಹೆಚ್ಚಿನ ಕೊಡುಗೆ ನೀಡಲು ಉತ್ತೇಜಿಸಿದ್ದಾರೆ ಎಂದು ಐಸಿಸಿ ಉಪಾಧ್ಯಕ್ಷ ಸುಬ್ರಹ್ಮಣ್ಯ ಹೆಬ್ಬಾಗಿಲು ತಿಳಿಸಿದ್ದಾರೆ.

ಕತಾರ್ನ ಭಾರತೀಯ ರಾಯಭಾರಿ ಕಚೇರಿ ಕಾರ್ಯದರ್ಶಿಗಳಾದ ಡಾ.ವೈಭವ್ ತಾಂಡಾಲೆ, ಐಸಿಸಿ ಕಾರ್ಯಕಾರಿಣಿ ಸಮಿತಿ ಅಧ್ಯಕ್ಷ ಪಿ.ಎನ್. ಬಾಬು ರಾಜನ್, ಆಡಳಿತ ಸಮಿತಿ ಇತರ ಸದಸ್ಯರು ಇದ್ದರು.

ಪ್ರಾಸ್ತಾವಿಕವಾಗಿ ಮಾತನಾಡಿದ ಐಸಿಸಿ ಉಪಾಧ್ಯಕ್ಷ ಸುಬ್ರಹ್ಮಣ್ಯ ಹೆಬ್ಬಾಗಿಲು ಅವರು ಭಾರತೀಯ ಸಾಂಸ್ಕೃತಿಕ ಕೇಂದ್ರದ ಕಾರ್ಯವೈಖರಿ ಬಗ್ಗೆ, ಭಾರತೀಯರಿಗೆ ಲಭ್ಯವಿರುವ ವಿವಿಧ ಸೇವಾ ಸೌಲಭ್ಯಗಳ ಕುರಿತು ವಿವರಿಸಿದರು. ಪ್ರಧಾನ ಕಾರ್ಯದರ್ಶಿ ಮೋಹನ್ ಕುಮಾರ್ ಅವರು ಐಸಿಸಿ ಪ್ರಸ್ತುತಪಡಿಸುವ ವಿವಿಧ ಚಟುವಟಿಕೆಗಳ ಕುರಿತು ಸಂಕ್ಷಿಪ್ತ ಮಾಹಿತಿ ನೀಡಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.