ಗೋಕರ್ಣ: ಗ್ರಾಮೀಣಾಭಿವೃದ್ಧಿ ಖಾತೆ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಗೋಕರ್ಣಕ್ಕೆ ಮಂಗಳವಾರ ಭೇಟಿ ನೀಡಿ ಮಹಾಬಲೇಶ್ವರ ದೇಗುಲದಲ್ಲಿ ಆತ್ಮಲಿಂಗಕ್ಕೆ ಪೂಜೆ ಸಲ್ಲಿಸಿದರು.

ಸುದ್ದಿಗಾರರೊಂದಿಗೆ ಮಾತನಾಡಲು ನಿರಾಕರಿಸಿದ ಅವರು, 'ನಾನು ಖಾಸಗಿ ಕಾರ್ಯಕ್ರಮದ ನಿಮಿತ್ತ ಇಲ್ಲಿಗೆ ಬಂದಿದ್ದೇನೆ. ದೇವರಿಗೆ ಪೂಜೆ ಸಲ್ಲಿಸಿ ಮನಸ್ಸಿನ ನಿರಾಳತೆ ಬಯಸಿದ್ದೇನೆ. ಯಾವುದೇ ರಾಜಕೀಯ ಮಾತನಾಡುವುದಿಲ್ಲ' ಎಂದರು.

ಇದನ್ನೂ ಓದಿ:ಹುಬ್ಬಳ್ಳಿಯಲ್ಲಿ ಕಲ್ಲು ತೂರಾಟ: 40 ಮಂದಿ ವಶಕ್ಕೆ, ಏ. 20ರವರೆಗೆ ನಿಷೇಧಾಜ್ಞೆ

ಇದಕ್ಕೂ ಮೊದಲು ಅಂಗಾರಕ ಸಂಕಷ್ಟಿಯ ನಿಮಿತ್ತ ಮಹಾಗಣಪತಿಗೆ ವಿಶೇಷ ಪೂಜೆ ಸಲ್ಲಿಸಿದರು. ಮಹಾಬಲೇಶ್ವರ ದೇವಸ್ಥಾನದ ಮೇಲುಸ್ತುವಾರಿ ಸಮಿತಿಯ ಸದಸ್ಯರು ಎಲ್ಲ ಪೂಜಾ ಕಾರ್ಯ ನೆರವೇರಿಸಿಕೊಟ್ಟರು.

ಕುಮಟಾ ಶಾಸಕ ದಿನಕರ ಶೆಟ್ಟಿ,ಬಿ.ಜೆ.ಪಿ.ಪ್ರಮುಖರಾದ ಪ್ರಮೋದ ಹೆಗಡೆ, ಗೋಕರ್ಣ ಗ್ರಾಮ ಪಂಚಾಯಿತಿ ಅಧ್ಯಕ್ಷ ಮಂಜುನಾಥ ಜನ್ನು, ತೊರ್ಕೆ ಗ್ರಾಮ ಪಂಚಾಯಿತಿ ಅಧ್ಯಕ್ಷ ಆನಂದು ಕವರಿ ಮುಂತಾದವರು ಇದ್ದರು.

ಕೋಟಿತೀರ್ಥಕ್ಕೆ ಭೇಟಿ ನೀಡದ ಈಶ್ವರಪ್ಪ
ಸಚಿವರಾಗಿದ್ದಾಗ ತಾವೇ ಹೆಚ್ಚಿನ ಮುತುವರ್ಜಿ ವಹಿಸಿ ಅನುದಾನ ಬಿಡುಗಡೆ ಮಾಡಿದ್ದ ಕೋಟಿತೀರ್ಥದ ಸ್ವಚ್ಛತಾ ಕಾಮಗಾರಿಯನ್ನು ವೀಕ್ಷಿಸಲು ಆಸಕ್ತಿ ತೋರದೇ ಹಾಗೆಯೇ ತೆರಳಿದರು. 15 ದಿನಗಳ ಹಿಂದೆ ಗೋಕರ್ಣಕ್ಕೆ ಬಂದಿದ್ದಾಗ, ಕೋಟಿತೀರ್ಥದ ಕಾಮಗಾರಿ ವೀಕ್ಷಿಸಿ ಮತ್ತೆ ನೋಡಲು ಬರುವುದಾಗಿ ತಿಳಿಸಿದ್ದರು.

ಇದನ್ನೂ ಓದಿ:ಪ್ರಚೋದನಕಾರಿ ಪೋಸ್ಟ್: ಹಳೇ ಹುಬ್ಬಳ್ಳಿ ಉದ್ವಿಗ್ನ, ಪೊಲೀಸರ ಮೇಲೆ ಕಲ್ಲು ತೂರಾಟ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.