ಕಾರವಾರ: ಜಿಲ್ಲೆಯ ವಿವಿಧೆಡೆ ಈ ವರ್ಷ ಪ್ರಕೃತಿ ವಿಕೋಪದಿಂದ ಹಾನಿಗೀಡಾದವರಿಗೆ ಈವರೆಗೆ ₹ 54.07 ಲಕ್ಷ ಪರಿಹಾರ ವಿತರಿಸಲಾಗಿದೆ ಎಂದು ಜಿಲ್ಲಾಧಿಕಾರಿ ಎಸ್.ಎಸ್.ನಕುಲ್ತಿಳಿಸಿದರು.

ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಏಪ್ರಿಲ್ 1ರಿಂದ ಈವರೆಗೆ ಜಿಲ್ಲೆಯಲ್ಲಿ ಪ್ರಕೃತಿ ವಿಕೋಪದಿಂದಾಗಿ ಮೂವರು ಮೃತಪಟ್ಟಿದ್ದಾರೆ. ಅವರ ಕುಟುಂಬಗಳಿಗೆತಲಾ ₹ 4 ಲಕ್ಷ ಪರಿಹಾರ ವಿತರಿಸಲಾಗಿದೆ. ಅಲ್ಲದೆ, ಜಿಲ್ಲೆಯಾದ್ಯಂತ ಒಟ್ಟು25 ಜಾನುವಾರು ಮೃತಪಟ್ಟಿದ್ದು ಒಟ್ಟು ₹ 7.16 ಲಕ್ಷ ಸೇರಿ ಪರಿಹಾರ ನೀಡಲಾಗಿದೆ’ ಎಂದು ತಿಳಿಸಿದರು.

ಮಳೆಯಿಂದಾಗಿ ಜಿಲ್ಲೆಯಲ್ಲಿ270ಮನೆಗಳಿಗೆ ಹಾನಿಯಾಗಿದ್ದು, ₹56.23 ಲಕ್ಷ ಪರಿಹಾರ ವಿತರಿಸಲಾಗಿದೆ. 138 ಪ್ರಕರಣಗಳಿಗೆ ಪರಿಹಾರ ಮಂಜೂರಾಗಿದ್ದು ಅದರಲ್ಲಿ109ಪ್ರಕರಣಗಳನ್ನು ತಿರಸ್ಕರಿಸಲಾಗಿದೆ.23 ಪ್ರಕರಣಗಳಿಗೆ ಸಂಬಂಧಿಸಿದಂತೆ ಶೀಘ್ರವೇ ಪರಿಹಾರ ವಿತರಣೆಮಾಡಲಾಗುವುದುಎಂದು ಅವರು ಹೇಳಿದರು.

ಜಿಲ್ಲೆಯಲ್ಲಿ 50.91 ಹೆಕ್ಟೇರ್ ಬೆಳೆ ಹಾನಿಯಾಗಿದ್ದು,154ಪ್ರಕರಣಗಳನ್ನು ಇತ್ಯರ್ಥಪಡಿಸಬೇಕಿದೆ.61ಪ್ರಕರಣಗಳಲ್ಲಿ ಪರಿಹಾರ ವಿತರಿಸಲಾಗಿದೆ. ಇತ್ಯರ್ಥವಾಗಬೇಕಿರುವ ಪ್ರಕರಣಗಳಲ್ಲಿ ಪರಿಹಾರ ವಿತರಣೆಗೆ ಈಗಾಗಲೇ ಎಲ್ಲ ತಹಶೀಲ್ದಾರ್ಗಳಿಗೆಪ್ರಕೃತಿ ವಿಕೋಪ ನಿಧಿಯಿಂದ ಅನುದಾನ ಬಿಡುಗಡೆ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.