ಮುಂಡಗೋಡ: ‘ಮಳೆಯಿಂದ ಬೆಳೆ ಹಾನಿಯಾಗಿರುವ ಬಗ್ಗೆ ಸಮೀಕ್ಷೆ ನಡೆಸುವಂತೆ ಕೃಷಿ ಹಾಗೂ ಕಂದಾಯ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಇನ್ನೊಂದು ವಾರದಲ್ಲಿ ಬೆಳೆ ಹಾನಿಯ ಸಮಗ್ರ ವರದಿ ಬರುವ ನಿರೀಕ್ಷೆಯಿದ್ದು, ಸರ್ಕಾರದ ನಿಯಮಾವಳಿಯಂತೆ ರೈತರಿಗೆ ಪರಿಹಾರ ವಿತರಿಸಲಾಗುವುದು’ ಎಂದು ಶಾಸಕ ಶಿವರಾಮ ಹೆಬ್ಬಾರ ಹೇಳಿದರು.

ಪತ್ರಕರ್ತರೊಂದಿಗೆ ಮಂಗಳವಾರ ಮಾತನಾಡಿದ ಅವರು, ‘ತಾಲ್ಲೂಕಿನಲ್ಲಿ ವಿಪರೀತ ಮಳೆಯಾದ ಪರಿಣಾಮ ಭತ್ತ ಹಾಗೂ ಗೋವಿನಜೋಳ ಬೆಳೆ ಹೆಚ್ಚಿನ ಪ್ರಮಾಣದಲ್ಲಿ ಹಾನಿಯಾಗಿದೆ. ಈ ಹಿಂದೆ ಬೆಳೆ ಹಾನಿಯ ಸಮೀಕ್ಷೆ ಮಾಡಲಾಗಿತ್ತು. ಅದರ ನಂತರ ಮತ್ತಷ್ಟು ಬೆಳೆ ಹಾನಿ ಆಗಿರುವುದು ವರದಿಯಾಗಿದ್ದರಿಂದ, ಮತ್ತೊಮ್ಮೆ ಸಮೀಕ್ಷೆ ನಡೆಸಿ ಸಮಗ್ರ ವರದಿ ಸರ್ಕಾರಕ್ಕೆ ಕಳಿಸಲಾಗುವುದು. ಬೆಳೆ ಹಾನಿಯಾದ ರೈತರಿಗೆ ಯಾವುದೇ ರೀತಿಯ ಅನ್ಯಾಯವಾಗದಂತೆ, ಪರಿಹಾರ ವಿತರಣೆಗೆ ಕ್ರಮ ಕೈಗೊಳ್ಳಲಾಗುವುದು. ರೈತರ ಕಷ್ಟ ಕಾಲದಲ್ಲಿ ಸ್ಪಂದಿಸುವುದು ಜನಪ್ರತಿನಿಧಿಯ ಕರ್ತವ್ಯವಾಗಿದ್ದು, ಅದನ್ನು ನಿಭಾಯಿಸುತ್ತೇನೆ’ ಎಂದರು.

‘ಅಡಿಕೆಗೆ ಕೊಳೆರೋಗ ಹಾಗೂ ಎಲೆ ಚುಕ್ಕಿ ರೋಗ ಬಾಧಿಸಿದ್ದರಿಂದ ಅಡಿಕೆ ಬೆಳೆಗಾರರು ಹಾನಿ ಅನುಭವಿಸಿದ್ದಾರೆ. ಅಡಿಕೆಯು ಹವಾಮಾನ ಆಧಾರಿತ ಬೆಳೆಯಾಗಿದ್ದು, ಈಗಾಗಲೇ ಕೇಂದ್ರ ಸರ್ಕಾರಕ್ಕೆ ಬೆಳೆ ಹಾನಿ ವರದಿ ಹೋಗಿದೆ. ಅಡಿಕೆ ವಿಮೆ ಮಂಜೂರಿ ಮಾಡುವ ಕುರಿತು ಶೀಘ್ರದಲ್ಲಿಯೇ ನಿರ್ಣಯ ಆಗಬಹುದು. ಒಟ್ಟಿನಲ್ಲಿ ರೈತರಿಗೆ ಬೆಳೆ ವಿಮೆ ಸಿಗಲು ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು’ ಎಂದು ಅವರು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.