ಕಾರವಾರ: ‘ಜಿಲ್ಲೆಯಲ್ಲಿನ 5 ವರ್ಷ ಮೇಲ್ಪಟ್ಟ ಎಲ್ಲ ವಿದ್ಯಾರ್ಥಿಗಳ ಆಧಾರ್ ಕಾರ್ಡ್ಗಳಿಗೆ ಕಡ್ಡಾಯವಾಗಿ ಬಯೋಮೆಟ್ರಿಕ್ ಅಪ್ಡೇಟ್ ಮಾಡಿಸಲು ಅಗತ್ಯ ಕ್ರಮವಹಿಸಬೇಕು. ಯಾವುದೇ ವಿದ್ಯಾರ್ಥಿ ಇದರಿಂದ ಹೊರಗುಳಿಯದಂತೆ ಎಚ್ಚರವಹಿಸಬೇಕು’ ಎಂದು ಜಿಲ್ಲಾಧಿಕಾರಿ ಕೆ.ಲಕ್ಷ್ಮಿಪ್ರಿಯಾ ಶಿಕ್ಷಣ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.

ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಬುಧವಾರ ಜಿಲ್ಲಾ ಮಟ್ಟದ ಆಧಾರ್ ಮೇಲ್ವಿಚಾರಣಾ ಸಮಿತಿ ಸಭೆ ನಡೆಸಿದ ಅವರು, ‘ಆಯಾ ತಾಲ್ಲೂಕುಗಳಲ್ಲಿ ಬಯೋಮೆಟ್ರಿಕ್ ಮಾಡಿಸಲು ಬಾಕಿ ಇರುವ ವಿದ್ಯಾರ್ಥಿಗಳ ನಿಖರವಾದ ಸಂಖ್ಯೆಯನ್ನು ಸಂಗ್ರಹಿಸಬೇಕು. ಪ್ರತಿ ತಾಲ್ಲೂಕಿನಲ್ಲಿ ವಿದ್ಯಾರ್ಥಿಗಳಿಗಾಗಿ ಪ್ರತ್ಯೇಕ ಶಿಬಿರ ಆಯೋಜಿಸಿ, ಆಧಾರ್ ಕಾರ್ಡ್ ಅಪ್ಡೇಟ್ ಮಾಡಿಸಬೇಕು’ ಎಂದು ಹೇಳಿದರು.

‘ವಿದ್ಯಾರ್ಥಿಗಳ ಬಯೋಮೆಟ್ರಿಕ್ ಅಪ್ಡೇಟ್ ಆಗದೇ ಇದ್ದಲ್ಲಿ ಸರ್ಕಾರದಿಂದ ಅವರಿಗೆ ದೊರೆಯಬೇಕಾದ ಸೌಲಭ್ಯಗಳು ಸಿಗಲು ಸಮಸ್ಯೆ ಉಂಟಾಗಬಹುದು. ಹೆಸರುಗಳಲ್ಲಿ ದೋಷವಿದ್ದರೆ ಅದನ್ನು ಸರಿಪಡಿಸಲಾಗುವುದು’ ಎಂದರು.

‘ಗ್ಯಾರಂಟಿ ಯೋಜನೆಯ ಹಲವು ಫಲಾನುಭವಿಗಳು ಆಧಾರ್ ಸಮಸ್ಯೆಯ ಕಾರಣ ಸರ್ಕಾರದ ಯೋಜನೆಯ ಪ್ರಯೋಜನ ಪಡೆಯದೇ ವಂಚಿತರಾಗುತ್ತಿದ್ದು, ಅವರ ಆಧಾರ್ ಸಂಬಂಧಿತ ಸಮಸ್ಯೆಗಳನ್ನು ಶೀಘ್ರದಲ್ಲಿ ಬಗೆಹರಿಸಬೇಕು’ ಎಂದು ಆಧಾರ್ ನೋಂದಣಿಯ ಜಿಲ್ಲಾ ನೋಡಲ್ ಅಧಿಕಾರಿಗೆ ಸೂಚಿಸಿದರು.

‘ಜಿಲ್ಲೆಯಲ್ಲಿ ಒಟ್ಟು 16,43,471 ಆಧಾರ್ ಸಂಖ್ಯೆ ಜನರೇಟ್ ಆಗಿದೆ, ಒಟ್ಟು 1,10,605 ಕಾರ್ಡ್ಗಳಿಗೆ ಬಯೋಮೆಟ್ರಿಕ್ ಮಾಡಿಸುವುದು ಇದುವರೆಗೆ ಬಾಕಿ ಇದೆ’ ಎಂದು ಆಧಾರ್ ನೊಂದಣಿಯ ನೋಡಲ್ ಅಧಿಕಾರಿ ಮಾಹಿತಿ ನೀಡಿದರು.

ಹೆಚ್ಚುವರಿ ಜಿಲ್ಲಾಧಿಕಾರಿ ಪ್ರಕಾಶ್ ರಜಪೂತ್, ಯು.ಐ.ಡಿ.ಎ.ಐ ನ ಕೇಂದ್ರೀಯ ವ್ಯವಸ್ಥಾಪಕ ಮೆಹಬೂಬ್, ಡಿಡಿಪಿಐ ಲತಾ ನಾಯಕ, ಇತರರು ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.