ಹಳಿಯಾಳ: ‘ರಾಜ್ಯದಲ್ಲಿ ಕಳೆದ ಮುಂಗಾರು ಹಂಗಾಮಿನಲ್ಲಿ ಮಳೆ ಕೊರತೆಯಿಂದಾದ ಬೆಳೆ ನಷ್ಟಕ್ಕಾಗಿ ರೈತರಿಗೆ ಪರಿಹಾರ ವಿತರಣೆ ಪ್ರಕ್ರಿಯೆ ಆರಂಭವಾಗಿದೆ’ ಎಂದು ಶಾಸಕ ಆರ್.ವಿ. ದೇಶಪಾಂಡೆ ತಿಳಿಸಿದ್ದಾರೆ.

ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಎಸ್.ಡಿ.ಆರ್.ಎಫ್ (ರಾಜ್ಯ ವಿಪತ್ತು ನಿರ್ವಹಣಾ ನಿಧಿ) ಮಾರ್ಗಸೂಚಿ ಅನ್ವಯ ರಾಜ್ಯ ಸರ್ಕಾರವು ಸಣ್ಣ ಮತ್ತು ಅತಿ ಸಣ್ಣ ಬೇಸಾಯ ಮಾಡುವ ಕುಟುಂಬಗಳಿಗೆ ಆಗಿರುವ ಜೀವನೋಪಾಯದ ನಷ್ಟಗಳಿಗೆ ತಾತ್ಕಾಲಿಕವಾಗಿ ಬರ ಪರಿಹಾರ ಹಣವನ್ನು ಅವರ ಖಾತೆಗಳಿಗೆ ನೇರವಾಗಿ ವರ್ಗಾಯಿಸಿದೆ’ ಎಂದು ತಿಳಿಸಿದ್ದಾರೆ.

‘ಇವುಗಳಲ್ಲಿ ಹಳಿಯಾಳ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ರೈತರ ಬ್ಯಾಂಕ್ ಖಾತೆಗಳಿಗೆ ಒಟ್ಟು ₹1652.30 ಲಕ್ಷ ಬೆಳೆ ಪರಿಹಾರ ಹಂಚಿಕೆ ಮಾಡಲಾಗಿದ್ದು, ಹಳಿಯಾಳ ತಾಲ್ಲೂಕಿಗೆ ₹1462.44 ಲಕ್ಷ, ದಾಂಡೇಲಿ ತಾಲ್ಲೂಕಿಗೆ ₹58.88 ಲಕ್ಷ ಹಾಗೂ ಜೊಯಿಡಾ ತಾಲ್ಲೂಕಿಗೆ 130.98 ಲಕ್ಷ ಬೆಳೆ ಪರಿಹಾರ ರೈತರ ಖಾತೆಗಳಿಗೆ ಜಮಾ ಮಾಡಲಾಗಿದೆ’ ಎಂದು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.