ಕಾರವಾರ: ಮಂಜೂರಾತಿ ದೊರೆತ ಏಳು ವರ್ಷಗಳ ಬಳಿಕ ‘ಜಿಲ್ಲಾಡಳಿತ ಕಚೇರಿಗಳ ಸಂಕೀರ್ಣ’ ಕಾಮಗಾರಿ ಮುಕ್ತಾಯ ಹಂತದಲ್ಲಿದೆ. ಹೊಸ ಕಟ್ಟಡ ನಿರ್ಮಾಣಗೊಂಡರೂ ಜಿಲ್ಲಾಧಿಕಾರಿ ಕಚೇರಿ ಈ ಕಟ್ಟಡಕ್ಕೆ ತೆರಳುವುದು ಸದ್ಯಕ್ಕೆ ಅನುಮಾನವಿದೆ.

ಇಲ್ಲಿನ ಎಂ.ಜಿ.ರಸ್ತೆಯಲ್ಲಿ, ನಗರಸಭೆಯ ಈಜುಕೊಳದ ಎದುರು ಹೊಸ ಕಟ್ಟಡ ನಿರ್ಮಾಣಗೊಂಡಿದೆ. ಕಟ್ಟಡಕ್ಕೆ ರಾಷ್ಟ್ರೀಯ ಹೆದ್ದಾರಿ–66ರ ಸರ್ವೀಸ್ ರಸ್ತೆ ಕಡೆಯಿಂದ ಪ್ರವೇಶ ದ್ವಾರ ನಿರ್ಮಿಸಲಾಗಿದೆ. 2017ರಲ್ಲಿ ಈಗಿನ ಜಿಲ್ಲಾಧಿಕಾರಿ ಕಚೇರಿಯಲ್ಲಿರುವ ವಿವಿಧ ಇಲಾಖೆಗಳ ಕಚೇರಿಗಳನ್ನು ಪ್ರತ್ಯೇಕ ಕಟ್ಟಡಕ್ಕೆ ಸ್ಥಳಾಂತರಿಸಲು ‘ಜಿಲ್ಲಾಡಳಿತ ಕಚೇರಿಗಳ ಸಂಕೀರ್ಣ’ ನಿರ್ಮಾಣಕ್ಕೆ ರಾಜ್ಯ ಸರ್ಕಾರ ₹25 ಕೋಟಿ ಅನುದಾನ ನೀಡಿತ್ತು.

ಹಳೆಯ ಕಟ್ಟಡ ತೆರವು, ಗ್ರಾಹಕ ನ್ಯಾಯಾಲಯ ಸ್ಥಳಾಂತರ ಸೇರಿದಂತೆ ವಿವಿಧ ಕಾರಣಕ್ಕೆ ಹೊಸ ಕಟ್ಟಡ ನಿರ್ಮಾಣ ಆರಂಭಗೊಂಡಿರಲಿಲ್ಲ. 2021ರಲ್ಲಿ ಹೊಸ ಕಟ್ಟಡ ನಿರ್ಮಾಣ ಕೆಲಸಕ್ಕೆ ಚಾಲನೆ ನೀಡಲಾಗಿತ್ತು. ಮೂರು ವರ್ಷದ ಸತತ ಕಾಮಗಾರಿ ಬಳಿಕ ನೆಲಮಹಡಿ ಸೇರಿ ಒಟ್ಟು ಮೂರು ಅಂತಸ್ತಿನ ಕಟ್ಟಡ ನಿರ್ಮಾಣಗೊಂಡಿದೆ.

‘ಜಿಲ್ಲಾಧಿಕಾರಿ ಕಚೇರಿ ಕಟ್ಟಡವು ಹಳತಾಗಿದ್ದರಿಂದ ಇಲ್ಲಿರುವ ಕಚೇರಿಗಳನ್ನು ಹೊಸ ಕಟ್ಟಡಕ್ಕೆ ಸ್ಥಳಾಂತರಿಸಲು ಸರ್ಕಾರ ಹೊಸ ಕಟ್ಟಡಕ್ಕೆ ವಿಶೇಷ ಅನುದಾನ ನೀಡಿತ್ತು. ಈಗ ನಿರ್ಮಾಣಗೊಂಡ ಕಟ್ಟಕ್ಕೆ ಜಿಲ್ಲಾಧಿಕಾರಿ ಕಚೇರಿ ಕಟ್ಟಡದಲ್ಲಿರುವ ಎಲ್ಲ ಇಲಾಖೆಗಳ ಕಚೇರಿ ಸ್ಥಳಾಂತರಿಸುವ ಜತೆಗೆ ಬಾಡಿಗೆ ಕಟ್ಟಡದಲ್ಲಿರುವ ಕೆಲ ಇಲಾಖೆಗಳ ಕಚೇರಿ ಸ್ಥಳಾಂತರಿಸುವ ಯೋಜನೆ ಇತ್ತು. ಸದ್ಯ ಮೂರು ಮಹಡಿಯ ಕಟ್ಟಡ ಮಾತ್ರ ನಿರ್ಮಾಣಗೊಂಡಿದ್ದು ಜಾಗದ ಕೊರತೆ ಎದುರಾಗುವ ಸಾಧ್ಯತೆ ಇದೆ. ಹೀಗಾಗಿ ಜಿಲ್ಲಾಧಿಕಾರಿ ಕಚೇರಿಯಲ್ಲಿರುವ ಕೆಲ ಇಲಾಖೆಗಳ ಕಚೇರಿ ಮಾತ್ರ ಸ್ಥಳಾಂತರಗೊಳ್ಳಬಹುದು’ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದರು.

‘ಹೊಸ ಕಟ್ಟಡದಲ್ಲಿ ಜಿಲ್ಲಾಧಿಕಾರಿ, ಹೆಚ್ಚುವರಿ ಜಿಲ್ಲಾಧಿಕಾರಿ ಅವರ ಕಾರ್ಯನಿರ್ವಹಣೆಗೆ ವಿಶಾಲವಾದ ಕೊಠಡಿ ನಿರ್ಮಿಸಿಲ್ಲ. ಆಡಳಿತ ವಿಭಾಗದ ಕಾರ್ಯನಿರ್ವಹಣೆಗೆ ಪ್ರತ್ಯೇಕ ಕ್ಯಾಬಿನ್ಗಳ ನಿರ್ಮಾಣ ಸೇರಿದಂತೆ ಇನ್ನೂ ಅಗತ್ಯ ಸೌಕರ್ಯ ಕಲ್ಪಿಸಲು ಹಲವು ಸಮಯ ತಗುಲಬಹುದು. ಜಿಲ್ಲಾಧಿಕಾರಿ ಕಚೇರಿ ಸಂಪೂರ್ಣವಾಗಿ ಸ್ಥಳಾಂತರಗೊಳ್ಳುವುದು ಸದ್ಯಕ್ಕೆ ಕಷ್ಟ’ ಎಂದೂ ಹೇಳಿದರು.

ಶೀಘ್ರದಲ್ಲಿಯೇ ಸಭೆ

‘ಜಿಲ್ಲಾಡಳಿತ ಕಚೇರಿ ಸಂಕೀರ್ಣ ಕಟ್ಟಡಕ್ಕೆ ಜಿಲ್ಲಾಧಿಕಾರಿ ಕಚೇರಿಯನ್ನು ಸ್ಥಳಾಂತರಿಸುವ ಕುರಿತು ಚರ್ಚಿಸಲು ಶೀಘ್ರದಲ್ಲಿ ಸಭೆ ನಡೆಯಲಿದೆ. ಕಟ್ಟಡದ ಸ್ಥಿತಿಗತಿ ಕುರಿತು ಜಿಲ್ಲಾಧಿಕಾರಿ ಈಗಾಗಲೇ ಪರಿಶೀಲನೆ ನಡೆಸಿದ್ದಾರೆ. ಹೊಸ ಕಟ್ಟಡದ ಬಗ್ಗೆಯೂ ಮಾಹಿತಿ ಪಡೆದಿದ್ದಾರೆ. ಸಭೆಯಲ್ಲಿ ಚರ್ಚಿಸಿ ಈ ಬಗ್ಗೆ ನಿರ್ಣಯಿಸುವ ಸಾಧ್ಯತೆ ಇದೆ’ ಎನ್ನುತ್ತಾರೆ ಜಿಲ್ಲಾಡಳಿತದ ಹಿರಿಯ ಅಧಿಕಾರಿಯೊಬ್ಬರು. ‘ಈಗಿನ ಜಿಲ್ಲಾಧಿಕಾರಿ ಕಟ್ಟಡ ಹಳತಾಗಿದ್ದು ಚಾವಣಿಯ ಕಾಂಕ್ರೀಟ್ ಹಾಸು ಆಗಾಗ ಮುರಿದು ಬೀಳುತ್ತಿದೆ. ಕಟ್ಟಡದ ಸುರಕ್ಷತೆಯ ಬಗ್ಗೆಯೂ ಪರಿಶೀಲನೆ ನಡೆಯಬೇಕಾಗಿದೆ. ಇವೆಲ್ಲದರ ಬಗ್ಗೆ ಚರ್ಚಿಸಿ ಸ್ಥಳಾಂತರದ ಬಗ್ಗೆ ನಿರ್ಣಯವಾಗುತ್ತದೆ’ ಎಂದರು.

ಜಿಲ್ಲಾಡಳಿತ ಕಚೇರಿ ಸಂಕೀರ್ಣದ ಮೊದಲ ಹಂತದ ಕಾಮಗಾರಿ ಪೂರ್ಣಗೊಳ್ಳುವ ಹಂತದಲ್ಲಿದೆ. ಎರಡನೇ ಹಂತದಲ್ಲಿ ಹೆಚ್ಚುವರಿ ಎರಡು ಮಹಡಿ ನಿರ್ಮಿಸಲು ಅಂದಾಜು ₹20 ಕೋಟಿ ಪ್ರಸ್ತಾವ ಸಲ್ಲಿಕೆಯಾಗಿದೆ
-ರಾಮು ಅರ್ಗೇಕರ್ ಲೋಕೋಪಯೋಗಿ ಇಲಾಖೆ ಎಇಇ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.