ದಾಂಡೇಲಿ: ಕರ್ನಾಟಕ ಕಂಡ ಪ್ರಬುದ್ಧ ಎಂಜಿನಿಯರ್‌ಗಳಲ್ಲಿ ಸರ್ ಎಂ. ವಿಶ್ವೇಶ್ವರಯ್ಯನವರದು ಮೇರು ವ್ಯಕ್ತಿತ್ವ, ಆಡಳಿತಗಾರರೂ, ಸಂಸ್ಕೃತಿ ಚಿಂತಕರೂ, ತಾಂತ್ರಿಕ ಪ್ರಗತಿಯ ಜೊತೆಗೆ ಕನ್ನಡ ಸಾಹಿತ್ಯದ ಬೆಳವಣಿಗೆಗೂ ಅವರ ಕೊಡುಗೆ ಅಪಾರ ಎಂದು ಧಾರವಾಡದ ನಿವೃತ್ತ ಪ್ರಾಧ್ಯಾಪಕ, ಲೇಖಕ ಪ್ರೊ ಕೆ.ಎಸ್. ಕೌಜಲಗಿ ಹೇಳಿದರು.

ದಾಂಡೇಲಿಯ ಸರ್ಕಾರಿ ಕೈಗಾರಿಕಾ ಸಂಸ್ಥೆ (ಮಹಿಳಾ) ಹಾಗೂ ಉತ್ತರ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಇವರ ಸಂಯುಕ್ತ ಆಶ್ರಯದಲ್ಲಿ ಹಮ್ಮಿಕೊಂಡಿದ್ದ ಭಾರತರತ್ನ ಸರ್ ಎಂ. ವಿಶ್ವೇಶ್ವರಯ್ಯನವರ ಜನ್ಮದಿನಾಚರಣೆ ಉದ್ಘಾಟಿಸಿ, ಉಪನ್ಯಾಸ ನೀಡಿದರು.

ದಾಂಡೇಲಿ ಹೆಸ್ಕಾಂನ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ದೀಪಕ ನಾಯಕ ಅವರು ನಾಡಿಗೆ ವಿಶ್ವೇಶ್ವರಯ್ಯನವರ ಕೊಡುಗೆ ಅಪಾರವಾದದ್ದು, ಇಂದಿನ ವಿದ್ಯಾರ್ಥಿ, ಯುವಜನರು ಅವರ ಸಾಧನೆಗಳನ್ನು ತಿಳಿದುಕೊಳ್ಳಬೇಕು ಎಂದರು.

ಆಶಾಕಿರಣ ಐಟಿಐ ಕಾಲೇಜಿನ ಪ್ರಾಚಾರ್ಯ ನಾಗೇಶ್ ನಾಯ್ಕ, ಸರ್ಕಾರಿ ಐಟಿಐ ಕಾಲೇಜಿನ ಪ್ರಾಚಾರ್ಯ ಬಾಲರಾಜ ಚಿಮರೋಲ್, ಕಸಾಪ ದಾಂಡೇಲಿ ತಾಲ್ಲೂಕು ಘಟಕದ ಅಧ್ಯಕ್ಷ ನಾರಾಯಣ ನಾಯ್ಕ್ ಮಾತನಾಡಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾಧ್ಯಕ್ಷ ಬಿ.ಎನ್. ವಾಸರೆ ಮಾತನಾಡಿದರು.

ಉತ್ತರ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಗೌರವ ಕೋಶಾಧ್ಯಕ್ಷ ಮುರ್ತುಜಾ ಹುಸೇನ, ಆನೆಹೊಸೂರ ಸ್ವಾಗತಿಸಿ ಪ್ರಾಸ್ತಾವಿಕ ಮಾತನಾಡಿದರು. ಪದವಿ ಕಾಲೇಜಿನ ಉಪನ್ಯಾಸಕ ಡಾ. ಎಸ್.ಎಸ್. ದೊಡ್ಮನಿ ಪರಿಚಯಿಸಿದರು. ಉಪನ್ಯಾಸಕ ಅಗಸ್ಟಿನ್, ಪತ್ರಕರ್ತ ಅಕ್ಷಯಗಿರಿ ಗೋಸಾವಿ ಇದ್ದರು. ಐಟಿಐ ಕಾಲೇಜಿನ ಉಪನ್ಯಾಸಕ ದಯಾನಂದ ಗೌಡ ವಂದಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.