ಕಾರವಾರ: ಉಸಿರಾಟದ ಸಮಸ್ಯೆ ಮತ್ತು ಅಧಿಕ ರಕ್ತದೊತ್ತಡಕ್ಕಾಗಿ ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಜಾನಪದ ಗಾಯಕಿ ಸುಕ್ರಿ ಬೊಮ್ಮುಗೌಡ ಚೇತರಿಸಿಕೊಳ್ಳುತ್ತಿದ್ದಾರೆ. ಅವರ ಚಿಕಿತ್ಸೆಗಾಗಿ ತಜ್ಞ ವೈದ್ಯರ ಸಮಿತಿಯನ್ನು ರಚಿಸಲಾಗಿದೆ ಎಂದು ಕಾರವಾರ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ನಿರ್ದೇಶಕ ಡಾ.ಗಜಾನನ ನಾಯಕ ತಿಳಿಸಿದ್ದಾರೆ.

ಸಮಿತಿಯಲ್ಲಿ ಶ್ವಾಸಕೋಶ ತಜ್ಞ ಡಾ.ಶ್ರೀನಿವಾಸ, ಮೂತ್ರಪಿಂಡ ತಜ್ಞ ಡಾ.ರಘುರಾಮ ಭಟ್, ಫಿಜಿಷಿಯನ್ ಡಾ.ಅಮಿತ್ ಕಾಮತ್, ಅರಿವಳಿಕೆ ತಜ್ಞ ಡಾ.ಮಂಜುನಾಥ ಭಟ್ ಇದ್ದಾರೆ. ಇವರೊಂದಿಗೆ ಹುಬ್ಬಳ್ಳಿ ‘ಕಿಮ್ಸ್’ನ ಹೃದ್ರೋಗ ವಿಭಾಗದ ಮುಖ್ಯಸ್ಥ ಡಾ.ಎನ್.ಎಸ್.ಹಿರೇಗೌಡ ಅವರೂ ವಿಡಿಯೊ ಕಾನ್ಫರೆನ್ಸ್ ಮೂಲಕ ಜೊತೆಯಾಗುತ್ತಿದ್ದಾರೆ.

ಪ್ರಸ್ತುತ ಸುಕ್ರಿ ಬೊಮ್ಮುಗೌಡ ಅವರಿಗೆ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಮುಂದುವರಿಸಲಾಗಿದೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.