ಸಿದ್ದಾಪುರ: ಕರ್ನಾಟಕ ಜರ್ನಲಿಸ್ಟ್ ಯೂನಿ ಯನ್ನ ಉತ್ತರ ಕನ್ನಡ ಜಿಲ್ಲಾ ಘಟಕ ನೀಡುವ ‘ಹರ್ಮನ್ ಮೊಗ್ಲಿಂಗ್–2022’ ರಾಜ್ಯಮಟ್ಟದ ಪ್ರಶಸ್ತಿಗೆ ಪತ್ರಕರ್ತ ದಿನೇಶ್ ಅಮಿನ್ ಮಟ್ಟು ಅವರು ಆಯ್ಕೆಯಾಗಿದ್ದಾರೆ.

ಪಟ್ಟಣದ ಬಾಲಭವನದಲ್ಲಿ ಜುಲೈ 30ರಂದು ಮಧ್ಯಾಹ್ನ 3 ಗಂಟೆಗೆ ಯೂನಿಯನ್ ವತಿಯಿಂದ ನಡೆಯುವ ಮಾಧ್ಯಮ ದಿನಾಚರಣೆ, ಸನ್ಮಾನ ಮತ್ತು ಅಭಿನಂದನಾ ಕಾರ್ಯಕ್ರಮದಲ್ಲಿಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ. ಶಿರಸಿ ಉಪವಿಭಾಗದ ಸಹಾಯಕ ಆಯುಕ್ತ ದೇವರಾಜ್ ಆರ್. ಕಾರ್ಯಕ್ರಮ ಉದ್ಘಾಟಿಸಲಿದ್ದು, ಯೂನಿಯನ್ನ ರಾಜ್ಯ ಘಟಕದ ಅಧ್ಯಕ್ಷ ಬಿ.ನಾರಾಯಣ ಅಧ್ಯಕ್ಷತೆ ವಹಿಸಲಿದ್ದಾರೆ. ‘ಅಮಿನ್ ಮಟ್ಟು ಅವರು 39 ವರ್ಷಗಳಿಂದ ಮುದ್ರಣ ಮಾಧ್ಯಮ ಕ್ಷೇತ್ರದಲ್ಲಿ ಸಲ್ಲಿಸಿದ ಸೇವೆ ಪರಿಗಣಿಸಿ ಹರ್ಮನ್ ಮೊಗ್ಲಿಂಗ್ ಪ್ರಶಸ್ತಿ ನೀಡಿ ಗೌರವಿಸ
ಲಾಗುತ್ತಿದೆ’ ಎಂದು ಯೂನಿಯನ್ ಗೌರವಾಧ್ಯಕ್ಷ ಕನ್ನೇಶ ಕೋಲಶಿರ್ಸಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.