ಶಿರಸಿ: ಸಿಎಂ ಸಿದ್ದರಾಮಯ್ಯಗೆ ತಾಕತ್ತಿದ್ದರೆ ಭಾರತವನ್ನು ಹಿಂದೂ ರಾಷ್ಟ್ರ ಮಾಡುವುದನ್ನು ತಡೆಯಲಿ
ಎಂದು ಸಂಸದ ಅನಂತಕುಮಾರ ಹೆಗಡೆ ಸವಾಲು ಹಾಕಿದರು.

ಶಿರಸಿಯಲ್ಲಿ ಭಾನುವಾರ ಪತ್ರಕರ್ತರು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ರಾಮ ಮಂದಿರ ನಿರ್ಮಾಣ ಹಿಂದೂ ರಾಷ್ಟ್ರ ನಿರ್ಮಾಣದ ಮೊದಲ ಹೆಜ್ಜೆ ಗುರುತಾಗಿದೆ. ಇದು ಶತಮಾನದ ಸಂಭ್ರಮವಾಗಿದೆ. ಆದರೆ ರಾಜ್ಯದಲ್ಲಿ ಹಿಜಾಬ್ ಹಿಂದೆ ತಿರುಗುವ ಕಾಂಗ್ರೆಸ್ ಸರ್ಕಾರವಿದೆ. ಕೇವಲ ಓಲೈಕೆ ರಾಜಕಾರಣದ ಹಿಂದೆ ಬಿದ್ದಿದೆ. ಅಲ್ಪಸಂಖ್ಯಾತ ಮತ ಇಲ್ಲದೆ ಕಾಂಗ್ರೆಸ್ ಬದಕಲು ಸಾಧ್ಯವಿಲ್ಲ. ಕಾಂಗ್ರೆಸ್ ಮೊದಲಿನಿಂದಲೂ ಬಹುಸಂಖ್ಯಾತರ ಪರ ರಾಜಕಾರಣ ಮಾಡಿಲ್ಲ. ಇಂಥ ಸರ್ಕಾರದ ಸಿಎಂಗೆ ತಾಕತ್ತಿದ್ದರೆ ಭಾರತ ಹಿಂದೂ ರಾಷ್ಟ್ರ ಆಗುವುದನ್ನು ತಡೆಯಲಿ ಎಂದರು.

ಯಾರು ಯಾವುದೇ ರೀತಿಯ ಬಟ್ಟೆ ಹಾಕಿಕೊಳ್ಳಬಹುದು ಎಂಬ ಸಿದ್ದರಾಮಯ್ಯ ಹೇಳಿಕೆ ಭವಿಷ್ಯದಲ್ಲಿ ಹಲವು ಸಮಸ್ಯೆಗೆ ಎಡೆ ಮಾಡಲಿದೆ. ಸಾಮಾಜಿಕ ಚೌಕಟ್ಟಿನ ಕಲ್ಪನೆಯೇ ಇಲ್ಲದ ಸರ್ಕಾರ, ಸಮವಸ್ತ್ರ ಕಲ್ಪನೆ ಬಿಟ್ಟು ಬೇಕಾಬಿಟ್ಟಿ ಹೇಳಿಕೆ ನೀಡುವುದು ಸರಿಯಲ್ಲ. ಇಂಥ ಹಿಂದೂ ವಿರೋಧಿ ಸರ್ಕಾರ ಕರ್ನಾಟಕದಲ್ಲಿ ಬಹಳ ದಿನ ಇರಲು ಸಾಧ್ಯವಿಲ್ಲ ಎಂದರು.

ಟಿಪ್ಪು ಈ ರಾಜ್ಯದ ಜನತೆ ತೆಗೆದಿಟ್ಟ ವ್ಯಕ್ತಿ. ಈ ರಾಜ್ಯವನ್ನು ಸಾಂಸ್ಕೃತಿಕವಾಗಿ, ಸಾಮಾಜಿಕವಾಗಿ ತೊಂದರೆಗೀಡು ಮಾಡಿದ ವ್ಯಕ್ತಿ. ಅವನ ಹೆಸರನ್ನೇ ತೆಗದುಕೊಂಡು ಕಾಂಗ್ರೆಸ್ ರಾಜಕಾರಣ ಮಾಡುತ್ತದೆ ಎಂದರೆ ಕಾಂಗ್ರೆಸ್‌ಗೆ ಮುಂದಿನ ದಿನ ಜನತೆ ಹೇಗೆ ಉತ್ತರ ಕೊಡುತ್ತಾರೆ ಎಂಬುದನ್ನು ಯೋಚನೆ ಮಾಡಬೇಕು ಎಂದರು.

ಪಕ್ಷದ ಕಾರ್ಯಕರ್ತರು ನನ್ನಿಂದ ಈವರೆಗೆ ಏನನ್ನೂ ನಿರೀಕ್ಷೆ ಮಾಡಿಲ್ಲ. ನನ್ನ ಹಾಗೂ ಕಾರ್ಯಕರ್ತರ ನಡುವಿನ ಸಂಬಂಧ ಮಾತಿನಲ್ಲಿ ಬಣ್ಣಿಸಲಾಗದು. ಪ್ರಸ್ತುತ ಲೋಕಸಭಾ ಚುನಾವಣೆಗೆ ಸ್ಪರ್ಧಿಸುವಂತೆ ಒತ್ತಾಯಿಸುತ್ತಿದ್ದಾರೆ. ಕಾರ್ಯಕರ್ತರು ಒತ್ತಾಯ ಮಾಡಿದಾಗ ತಿರಸ್ಕರಿಸುವುದು ಮೂರ್ಖತನವಾಗುತ್ತದೆ ಎಂದು ತಮ್ಮ ಸ್ಪರ್ಧೆಯ ಸುಳಿವನ್ನು ಬಿಚ್ಚಿಟ್ಟರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.